AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇಂದು ಸಂಜೆ 5.41ರ ಸುಮಾರಿಗೆ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ 35 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 03, 2024 | 7:17 PM

Share

ಬೆಂಗಳೂರು, ಆಗಸ್ಟ್​ 3: ನಮ್ಮ ಮೆಟ್ರೋ (metro) ಟ್ರ್ಯಾಕ್​ಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಸಂಜೆ 5.41ರ ಸುಮಾರಿಗೆ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರ ಗುರುತು ಪತ್ತೆ ಆಗಿಲ್ಲ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್​ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೆಟ್ರೋ ರೈಲಿನಡಿಯಲ್ಲೇ ವ್ಯಕ್ತಿಯ ಮೃತದೇಹ ಇದೆ.

ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಯಲಚೇನಹಳ್ಳಿ ಟೂ ನಾಗಸಂದ್ರ ಮಾತ್ರ ಮೆಟ್ರೋ ಸಂಚಾರವಿದ್ದು, ದೊಡ್ಡಕಲ್ಲಸಂದ್ರ ಟೂ ಸಿಲ್ಕ್ ಇನ್ಸ್ಟಿಟ್ಯೂಟ್ ಮೆಟ್ರೋ ಸಂಚಾರ ಸ್ಥಗಿತವಾಗಿದೆ.

ಪ್ರಯಾಣಿಕರನ್ನ ಅರ್ಧ ದಾರಿಯಲ್ಲಿಯೇ ಇಳಿಸಿದ್ರಾ?

ವ್ಯಕ್ತಿ ಟ್ರ್ಯಾಕ್​​ಗೆ ಜಂಪ್ ಮಾಡಿದ ಕೆಲ ಸೆಕಂಡ್​ನಲ್ಲಿ ಪವರ್ ಕಟ್​ ಆಗಿದೆ. ಇದರಿಂದ ಮೆಟ್ರೋ ಸಂಚಾರ ಸಡನ್ ಸ್ಟಾಪ್ ಆಗಿದೆ. ಹಾಗಾಗಿ ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣ ಪಕ್ಕದ ಬ್ರಿಡ್ಜ್ ಮೇಲೆ ಪ್ರಯಾಣಿಕರು ನಡೆದುಕೊಂಡ ಹೋಗಿದ್ದಾರೆ. ಹಾಗಾಗಿ ಪ್ರಯಾಣಿಕರನ್ನ ಅರ್ಧ ದಾರಿಯಲ್ಲಿಯೇ ಇಳಿಸಿದ್ರಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಬಾಡಿಗೆ ವಿಚಾರ: ರಿಕ್ಷಾ ಚಾಲಕನ ಮೇಲೆ ರಿಕ್ಷಾ ಚಾಲಕರಿಂದಲೇ ಹಲ್ಲೆ

ಉಡುಪಿ: ಬಾಡಿಗೆ ಮಾಡುವ ವಿಚಾರದಲ್ಲಿ ರಿಕ್ಷಾ ಚಾಲಕನ ಮೇಲೆ ರಿಕ್ಷಾ ಚಾಲಕರಿಂದಲೇ ಹಲ್ಲೆ ಮಾಡಿರುವಂತಹ ಘಟನೆ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ನಡೆದಿದೆ. ಪ್ರತಾಪ್ ಚಂದ್ರ ಹಲ್ಲೆಗೊಳಗಾದ ಚಾಲಕ. ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Chikkaballapur 4 weddings: ಮದುವೆಯಾಗುವುದನ್ನೆ ಕಾಯಕ ಮಾಡಿಕೊಂಡ ಯುವತಿ! ಸರಣಿಯಂತೆ ನಾಲ್ಕು ಮದುವೆ – ಆಮೇಲೆ!?

ನಗರ ವ್ಯಾಪ್ತಿಯಲ್ಲಿ ಬಾಡಿಗೆ ಮಾಡಕೂಡದಂತೆ ಪ್ರತಾಪ್ ಚಂದ್ರಗೆ ವಾರ್ನಿಂಗ್ ಮಾಡಿದ್ದಾರೆ. ಈ ವೇಳೆ ನಗರದಲ್ಲಿ ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದು ಪ್ರತಾಪ್ ಚಂದ್ರ ಹೇಳಿದ್ದಾರೆ. ಇದರಿಂದ ಕೋಪಗೊಂಡ ನಗರದ ರಿಕ್ಷಾ ಚಾಲಕರರಿಂದ ಹಲ್ಲೆ ಮಾಡಲಾಗಿದೆ.

ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಟ್​ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಲಾಗಿದ್ದು, ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾದೆ: ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣು

ಆನೇಕಲ್​: ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಸಂಪಿಗೆಹಳ್ಳಿ ಕೆರೆಯ ಬಳಿ ನಡೆದಿದೆ. ಸಾಲಬಾದೆಯಿಂದಾಗಿ ವೆಸ್ಲೀ ಸುಂದರ್(42) ಎಂಬುವವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹಲ್ಲು ನೋವೆಂದು ಆಸ್ಪತ್ರೆಗೆ ಬಂದ ಕಳ್ಳರು: ವೈದ್ಯೆಯೊಂದಿಗೆ ಮಾತನಾಡುತ್ತ ಚಿನ್ನದ ಸರ ಕದ್ದು ಪರಾರಿ

ಸ್ಥಳೀಯರು ಗಮನಿಸಿ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲೀಸರು ಭೇಟಿ ನೀಡಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:45 pm, Sat, 3 August 24