AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವರ್ಷದ ಅರ್ಚಕನ ಜತೆ ಚಾಟಿಂಗ್ ಮಾಡಿದ ಯುವತಿ ಚೀಟಿಂಗ್, ಮಂಡ್ಯ ಪೂಜಾರಿ ಕಂಗಾಲು

ಫೇಸ್‌ಬುಕ್ ಸುಂದರಿ ಹಿಂದೆ ಬಿದ್ದ ಪುರೋಹಿತನಿಗೆ ಪಂಗನಾಮ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಸುಂದರಿ ಮಾತಿಗೆ ಮರುಳಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಅರ್ಚಕ, ಇದೀಗ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

60 ವರ್ಷದ ಅರ್ಚಕನ ಜತೆ ಚಾಟಿಂಗ್ ಮಾಡಿದ ಯುವತಿ ಚೀಟಿಂಗ್, ಮಂಡ್ಯ ಪೂಜಾರಿ ಕಂಗಾಲು
ಚಾಟಿಂಗ್ ಮಾಡಿದ ಯುವತಿ ಚೀಟಿಂಗ್
ರಮೇಶ್ ಬಿ. ಜವಳಗೇರಾ
|

Updated on:Aug 21, 2024 | 8:04 PM

Share

ಮಂಡ್ಯ, (ಆಗಸ್ಟ್ 21): 60 ವರ್ಷದ ಅರ್ಚಕನ ಜೊತೆ ಚಾಟಿಂಗ್ ಮಾಡಿದ ಯುವತಿ ಚೀಟಿಂಗ್ ಮಾಡಿರುವ ಆರೋಪ ಕೇಳಿ ಬಂದಿದೆ. ಫೇಸ್‌ಬುಕ್​ನಲ್ಲಿ ಪರಿಚಯವಾಗಿದ್ದ ಯುವತಿ, ಮಂಡ್ಯದ ಪಾಂಡವಪುರ ಮೂಲದ ಅರ್ಚಕನಿಗೆ ಲಕ್ಷ, ಲಕ್ಷ ಪಂಗನಾಮ ಹಾಕಿದ್ದಾಳೆ. ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್ ಹಣ ಕಳೆದುಕೊಂಡಿದ್ದು, ಇದೀಗ ಪೂಜಾರಪ್ಪ ಸೈಬರ್ ಕ್ರೈಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮಂಡ್ಯದ ಪಾಂಡವಪುರದ ಪಟ್ಟಸೋಮನಹಳ್ಳಿ ಗ್ರಾಮದ ಶಿವಶೈಲ ದೇವಸ್ಥಾನದ ಅರ್ಚಕ‌ ವಿಜಯ್ ಕುಮಾರ್, ಕುಟುಂಬದಿಂದ ದೂರವಾಗಿ ಒಬ್ಬರೇ ವಾಸಿಸುತ್ತಿದ್ದು, ಇವರಿಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಸಿರಿ ಶ್ರೇಷ ಸರಿತಾ ಎಂಬ ಸುಂದರಿ ಪರಿಚಯವಾಗಿದ್ದಾಳೆ. ಹೀಗಾಗಿ ಆಕೆ ಜತೆ ಪ್ರತಿ ದಿನ ವಿಜಯ್ ಕುಮಾರ್ ಚಾಟಿಂಗ್ ಮಾಡುತ್ತಿದ್ದರು.ವಿಜಯ್ ಕುಮಾರ್ ಬಗ್ಗೆ ತಿಳಿದುಕೊಂಡ ಯುವತಿ, ವಸತಿ, ಆರೋಗ್ಯ ಸಮಸ್ಯೆ ಅಂತ ಹೇಳಿ ಹಂತ ಹಂತವಾಗಿ ಹಣ ಪೀಕಿದ್ದಾಳೆ. ಹೀಗೆ ಸುಮಾರು 1 ಲಕ್ಷದ 40 ಸಾವಿರದಷ್ಟು ಹಣವನ್ನು ಲಪಟಾಯಿಸಿದ್ದಾಳೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಬಣ್ಣ ಬಣ್ಣದ ಮಾತುಗಳಿಂದ ವಿಜಯ್ ಕುಮಾರ್‌ಗೆ ಬಲೆ ಹಾಕಿದ ಸುಂದರಿ ಮಾತು ನಂಬಿ ಫೋನ್ ಪೇ ಮೂಲಕ ವಿಜಯ್ ಹಣ‌ ಕಳುಹಿಸಿದ್ದರು. ಹಣ ಕೊಟ್ಟ ಬಳಿಕ ಭೇಟಿ ಆಗುವಂತೆ ಸುಂದರಿಗೆ ವಿಜಯ್ ಒತ್ತಡ ಹೇರಲಾರಂಭಿಸಿದ್ದಾರೆ. ಆದರೆ, ಇಂದು, ನಾಳೆ ಎಂದು ಫೇಸ್‌ಬುಕ್‌ ಬ್ಲಾಕ್ ಮಾಡಿ ಎಸ್ಕೇಪ್ ಆಗಿದ್ದಾಳೆ. ಸುಂದರಿ ಮಾಯವಾದ ಬಳಿಕ ತಾನು ಮೋಸ ಹೋಗಿರುವ ಬಗ್ಗೆ ವಿಜಯ್ ಕುಮಾರ್‌ಗೆ ಮನವರಿಕೆಯಾಗಿದ್ದು, ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ಸದ್ಯ ಮಂಡ್ಯದ ಸೈಬರ್ ಕ್ರೈಮ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

Published On - 7:57 pm, Wed, 21 August 24