ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ತಕ್ಷಣ ಕಡಿತಗೊಳಿಸಬೇಕೆಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ (ಆಪ್) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸರ್ಕಾರದ ತಪ್ಪು ನೀತಿಗಳನ್ನು ಖಂಡಿಸಿ, ಮೌರ್ಯ ಸರ್ಕಲ್ನಿಂದ ಫ್ರೀಡಂ ಪಾರ್ಕ್ವರೆಗೂ ಬೈಕ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಹೆಚ್ಚಳದಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಜನರ ಕಷ್ಟವನ್ನು ನೋಡಿಯೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಬೇಕು ಆಪ್ ಕಾರ್ಯಕರ್ತರು ಆಗ್ರಹಿಸಿದರು.
ರಾಜ್ಯ ಸರ್ಕಾರವು ಜನರ ನೆರವಿಗೆ ನಿಲ್ಲದೆ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳಿದಿದೆ. ಈ ಕೂಡಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲಿನ ಸುಂಕವನ್ನು ಇಳಿಸಬೇಕು ಎಂದು ಆಗ್ರಹಿಸಿ ವಾಹನ ಸಂಚರಿಸುವ ರಸ್ತೆಯಲ್ಲಿ ಮಲಗಿ ಬೈಕ್ ಚಕ್ರಕ್ಕೆ ತಲೆಕೊಟ್ಟು ಪ್ರತಿಭಟನೆ ನಡೆಸಿದರು.