Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
Follow us
ಸಾಧು ಶ್ರೀನಾಥ್​
|

Updated on:Jan 20, 2020 | 2:51 PM

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ ಸ್ಥಳದಲ್ಲಿರಿಸಿ ಪೊಲೀಸರು ಸ್ಥಳದಿಂದ ದೂರ ಸರಿದಿದ್ದಾರೆ.

ಇನ್ನು ವಿಐಪಿಗಳ ವಾಹನಗಳು ಬಂದು ನಿಲುಗಡೆಯಾಗುವ ಸ್ಥಳದಲ್ಲಿ ಬ್ಯಾಗ್ ಪತ್ತೆಯಾಗಿದೆ. ಆಟೋದಲ್ಲಿ ಬಂದ ಇಬ್ಬರು ಲ್ಯಾಪ್​ಟಾಪ್​ ಬ್ಯಾಗ್ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ವಾಹನಗಳ ಮಾರ್ಗ ಬದಲಾವಣೆ: ಮೊದಲು ಬಾಂಬ್ ರೀತಿಯ ವಸ್ತು ನೋಡಿದ್ದು ಭದ್ರತಾ ಸಿಬ್ಬಂದಿ. ಬಳಿಕ ಉನ್ನಾತಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ. ನಂತರ ನಿರಂತರ ಕಾರ್ಯಾಚರಣೆ ಮಾಡುತ್ತಿದ್ದು, ಸದ್ಯ ಏರ್​ಪೋರ್ಟ್​ ಕಡೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕವಾಗಿ ಎಲ್ಲ ರಸ್ತೆ ಮಾರ್ಗಗಳ ಬದಲಾವಣೆ ಮಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಏರ್​ಪೋರ್ಟ್​ ಆವರಣದಲ್ಲಿ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.

Published On - 1:17 pm, Mon, 20 January 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ