ಬೆಂಗಳೂರು, ಜುಲೈ 22: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ (Suraj Revanna) ಷರತ್ತುಬದ್ಧ ಜಾಮೀನು (Bail) ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. 2ನೇ ಅಸಹಜ ಲೈಂಗಿಕ ದೌರ್ಜನ್ಯ ಕೇಸಿನಲ್ಲೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ನಿರೀಕ್ಷಣಾ ಜಾಮೀನು ನೀಡಿ ಜಡ್ಜ್ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿತ್ತು.
ಜೂನ್ 22ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ 25ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಲಾಗಿತ್ತು. ಎರಡೂ ಕೇಸ್ನ ತನಿಖೆ ನಡೆಸಿದ್ದ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿದ್ದರು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿದ್ದರು.
ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಗಂಭೀರ ಅಪರಾಧ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ
ಇನ್ನು ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಬ್ರಿಗೇಡ್ನ ಖಜಾಂಚಿಯಿಂದಲೇ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ನಾಲ್ಕು ವರ್ಷಗಳ ಹಿಂದೆ ಕೊರೊನಾ ಸಮಯದಲ್ಲಿ ದೌರ್ಜನ್ಯ ಆರೋಪ ಮಾಡಲಾಗಿತ್ತು.
ಇದನ್ನೂ ಓದಿ: JDS ಎಂಎಲ್ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ, ಜೈಲಿನಲ್ಲಿ ಅಣ್ತಮ್ಮಾಸ್
ಗನ್ನಿಕಡದ ತೋಟದ ಮನೆಯಲ್ಲಿ ದೌರ್ಜನ್ಯ ನಡೆದಿದೆ ಅಂತಾ ಆರೋಪ ಮಾಡಿ 11 ಪುಟಗಳ ದೂರು ನೀಡಿದ್ದರು. ಸೂರಜ್ ರೇವಣ್ಣ ಅವರು ನನ್ನ ಬೆದರಿಸಿ ಸಂತ್ರಸ್ತನ ಮನವೊಲಿಸುವಂತೆ ಹೇಳಿದ್ದರು. ಜೀವ ಬೆದರಿಕೆ ಹಾಕಿ, ನನ್ನಿಂದಲೇ ಬಲವಂತವಾಗಿ ಸಂತ್ರಸ್ತನ ವಿರುದ್ಧ ದೂರು ಕೊಡಿಸಿದ್ರು ಅಂತಾ ದೂರಿನಲ್ಲಿ ಆರೋಪಿಸಿದ್ದರು. ಇನ್ನು, ಹಾಸನದ ನಗರಸಭೆ ಸದಸ್ಯರ ಹೆಸರನ್ನ ಕೂಡ ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿದ್ದ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:48 pm, Mon, 22 July 24