AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಹಜ ಲೈಂಗಿಕ ದೌರ್ಜನ್ಯ ಕೇಸ್​: ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಜೆಡಿಎಸ್​ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಸದಸ್ಯ ಡಾ.ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದಾರೆ. 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರಿಂದ ಆದೇಶ ಹೊರಡಿಸಿದ್ದಾರೆ. ನಾಳೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬಾಡಿ ವಾರೆಂಟ್ ಮೇಲೆ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. 

ಅಸಹಜ ಲೈಂಗಿಕ ದೌರ್ಜನ್ಯ ಕೇಸ್​: ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಜಾಮೀನು ಮಂಜೂರು
ರಾಚಪ್ಪಾಜಿ ನಾಯ್ಕ್
| Edited By: |

Updated on:Jun 23, 2024 | 9:16 PM

Share

ಬೆಂಗಳೂರು, ಜೂನ್ 23: ಜೆಡಿಎಸ್ (jds)​ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್‌ ಪಕ್ಷದ ಎಂಎಲ್‌ಸಿ ಸೂರಜ್‌ ರೇವಣ್ಣರನ್ನು (Suraj Revanna) 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರಿಂದ ಆದೇಶ ಹೊರಡಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಇಂದು ಬೆಳಿಗ್ಗೆ ಹಾಸನದ ಸೆನ್​ ಠಾಣೆ ಪೊಲೀಸರು ಸೂರಜ್​ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್‌ ಮುಂದೆ ಸೂರಜ್​ನನ್ನು ಹಾಜರುಪಡಿಸಲಾಗಿತ್ತು.

ಇಂದು ಜೈಲಿಗೆ ತಡವಾಗಿ ಆಗಮಿಸಿದ ಹಿನ್ನೆಲೆ ನಾಳೆ ಜೈಲಾಧಿಕಾರಿಗಳು ಸೂರಜ್ ರೇವಣ್ಣಗೆ ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬಾಡಿ ವಾರೆಂಟ್ ಮೇಲೆ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್​​ಸಿ ಸೂರಜ್ ರೇವಣ್ಣ ಬಂಧನ

ಸೂರಜ್ ಪರ ವಕೀಲ ನಿಖಿಲ್ ಕಾಮತ್​ ಪ್ರತಿಕ್ರಿಯಿಸಿದ್ದು, ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಸಿಐಡಿಗೆ ಪ್ರಕರಣ ವರ್ಗಾವಣೆ ಆಗಿದ್ದು ಕೇಸ್ ಫೈಲ್ ಕೈ ಸೇರಿಲ್ಲ. ನಾಳೆ ಸಿಐಡಿ ಅಧಿಕಾರಿಗಳು ಓಪನ್ ಕೋರ್ಟ್​ನಲ್ಲಿ ಕಸ್ಟಡಿಗೆ ಪಡೆಯಲು ಅರ್ಜಿ ಹಾಕಲಿದ್ದಾರೆ ಎಂದು ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನ ಮೇಲೆ ಜೂ.16ರಂದು ಹೊಳೆನರಸೀಪುರ ತಾಲೂಕಿನ ಗನ್ನಿಕಡ ತೋಟದ ಮನೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಲಾಗಿತ್ತು. ಅಸಹಜ ಲೈಂಗಿಕ ದೌರ್ಜನ್ಯದ ಬಗ್ಗೆ ಶುಕ್ರವಾರ ಡಿಜಿ&ಐಜಿಪಿ ಕಚೇರಿಗೆ ಸಂತ್ರಸ್ತ ಯುವಕ ದೂರು ನೀಡಿದ್ದ. ನಂತರ ಹಾಸನ ಎಸ್​ಪಿಗೆ ಇ-ಮೇಲ್ ಮೂಲಕ ದೂರು ರವಾನಿಸಿದ್ದ.

ಇದನ್ನೂ ಓದಿ: ಪ್ರಜ್ವಲ್​ ಸುಮಾರು ದಿನ ಪರಾರಿಯಾಗಿದ್ದ, ಈಗ ಸೂರಜ್‌ ಒಂದೇ ದಿನದಲ್ಲಿ ಪೊಲೀಸ್‌ ಬಲೆಗೆ ಬಿದ್ದಿದ್ದೇ ರೋಚಕ!

ನಿನ್ನೆ ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿ ಯುವಕ ದೂರು ನೀಡಿದ್ದ. ಬಳಿಕ ಸಂತ್ರಸ್ತ ಯುವಕನನ್ನು ಹಾಸನ ಜಿಲ್ಲಾ ಪೊಲೀಸರು ಸಂಪರ್ಕಿಸಿದ್ದಾರೆ. ಆತನ ದೂರಿನ ಅನ್ವಯ ಐಪಿಸಿ ಸೆಕ್ಷನ್ 377, 506, 342, 34ರಡಿ ಎಫ್ಐಆರ್​ ದಾಖಲಾಗಿತ್ತು. ಹಾಸನದ ಸಿಇಎನ್ ಠಾಣೆಯಲ್ಲಿ ವಿಚಾರಣೆ ನಂತರ ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:57 pm, Sun, 23 June 24