3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

ನಮಗೆ ಮೊದಲ ಆದ್ಯತೆಯಲ್ಲಿ ಲಸಿಕೆ ಕೊಡಿ ಅಂತ ಉತ್ಪಾದನಾ ಕಂಪನಿಗಳನ್ನು ಕೇಳಿದ್ದೇವೆ. ಮೇ 15 ಅಥವಾ ಮೇ 15 ನಂತ್ರ ಲಸಿಕೆ ಅಭಿಯಾನ ಪ್ರಾರಂಭ ಮಾಡ್ತೀವಿ. ಲಸಿಕೆ ‌ಕೋಡೋದು‌ ಮತ್ತು ಸಾವಿನ ಪ್ರಮಾಣ ಕಡಿಮೆ ಮಾಡೋ ಕಡೆ ನನ್ನ ಗಮನ ಇದೆ - ಆರೋಗ್ಯ ಸಚಿವ ಡಾ.ಕೆ.ಸುಧಾಕರ್

3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್
3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡ್ತೀವಿ: ಡಾ. ಕೆ. ಸುಧಾಕರ್

ಬೆಂಗಳೂರು: ಕೊರೊನಾ ಮಹಾಮಾರಿಗೆ ಲಗಾಮು ಹಾಕುವ ನಿಟ್ಟಿನಲ್ಲಿ ಲಸಿಕೆ ‌ಕೋಡೋದು‌ ಮತ್ತು ಸಾವಿನ ಪ್ರಮಾಣ ಕಡಿಮೆ ಮಾಡೋ ಕಡೆ ನನ್ನ ಗಮನ ಇದೆ. ಈ‌ ನಿಟ್ಟಿನಲ್ಲಿ ನಾನು ಹೆಚ್ಚು ಕೆಲಸ ಮಾಡ್ತಿದ್ದೇನೆ. ಮೇ 15ರ ಬಳಿಕ 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಮಧ್ಯೆ, ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡುವ ಜನರೇಟರ್ ಪ್ರಾರಂಭ ಮಾಡ್ತೀವಿ ಎಂದೂ ಸಚಿವರು ಹೇಳಿದರು.

ನಮಗೆ ಮೊದಲ ಆದ್ಯತೆಯಲ್ಲಿ ಲಸಿಕೆ ಕೊಡಿ ಅಂತ ಕೇಳಿದ್ದೇವೆ: ಸದ್ಯ, ಲಸಿಕೆ ಲಭ್ಯವಿಲ್ಲದೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಸ್ಥಗಿತಗೊಂಡಿರುವ ವಿಚಾರ ಪ್ರಸ್ತಾಪಿಸಿದ ಆರೋಗ್ಯ ಸಚಿವ ಸುಧಾಕರ್, ನಮ್ಮ‌ ದೇಶದಲ್ಲಿ ಎರಡು ಲಸಿಕ ಕಂಪನಿಗಳು ಇವೆ. ಉತ್ಪಾದನೆ ಕಡಮೆ ಆಗ್ತಿರೋದ್ರೀಂದ ಲಸಿಕೆ ನಮಗೆ ಲಭ್ಯವಾಗ್ತಿಲ್ಲ. ಈಗಾಗಲೇ ಎರಡು ಕಂಪನಿಗಳ ಜೊತೆ ಮಾತಾಡಿದ್ದೇವೆ. ನಮಗೆ ಮೊದಲ ಆದ್ಯತೆಯಲ್ಲಿ ಲಸಿಕೆ ಕೊಡಿ ಅಂತ ಕೇಳಿದ್ದೇವೆ. ಮೇ 15 ಅಥವಾ ಮೇ 15 ನಂತ್ರ ಲಸಿಕೆ ಅಭಿಯಾನ ಪ್ರಾರಂಭ ಮಾಡ್ತೀವಿ. ಲಸಿಕೆ ‌ಕೋಡೋದು‌ ಮತ್ತು ಸಾವಿನ ಪ್ರಮಾಣ ಕಡಿಮೆ ಮಾಡೋ ಕಡೆ ನನ್ನ ಗಮನ ಇದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ನಿನ್ನೆಗೆ 1 ಕೋಟಿ ಜನರಿಗೆ ಕೊವಿಡ್ ಲಸಿಕೆ ನೀಡಿಕೆಯಾಗಿದೆ. 18-44 ವರ್ಷದೊಳಗಿನವರಿಗೆ ಲಸಿಕೆ ನೀಡುವುದಕ್ಕೆ ಕ್ರಮ ಕೈಗೊಳ್ಳಲಾಗಿದೆ. 3ನೇ ಅಲೆ ಬರುವುದರೊಳಗೆ ಎಲ್ಲರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡುವ ಜನರೇಟರ್ ಪ್ರಾರಂಭ ಮಾಡ್ತೀವಿ..

ಆಕ್ಸಿಜನ್ ಉತ್ಪತ್ತಿಗೆ 1 ಲಕ್ಷ ಯಂತ್ರ ಖರೀದಿಗೆ ನಿರ್ಧಾರ ಮಾಡಲಾಗಿದೆ. ಪ್ರತಿ ಜಿಲ್ಲೆಗೆ 1 ಸಾವಿರ ಯಂತ್ರ ಕೊಡುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಸಚಿವ ಸುಧಾಕರ್ ಇದೇ ಸಂದರ್ಭದಲ್ಲಿ ಹೇಳಿದರು. ಹವಾಮಾನದಿಂದ ಆಕ್ಸಿಜನ್ ಉತ್ಪತ್ತಿ ಮಾಡುವ ಜನರೇಟರ್ ಪ್ರಾರಂಭ ಮಾಡ್ತೀವಿ. ಕೇರ್ ಸೆಂಟರ್ ನಲ್ಲಿ ಆಕ್ಸಿಜನ್ ಕಾಂಸೆಂಟ್ರ್ಟೇಟ್​ಗಳನ್ನ ಅಳವಡಿಸಲು ಕ್ರಮ ತೆಗೆದುಕೊಳ್ತೀವಿ. 50 ರಿಂದ 1 ಲಕ್ಷ ಮಿಷನ್ ಗಳನ್ನು ಖರೀದಿ ಮಾಡಲು ನಿರ್ಧಾರ ಮಾಡಲಾಗಿದೆ. ಪ್ರತಿ ಜಿಲ್ಲೆಗೆ 1 ಸಾವಿರ ಮಿಷನ್ ಕೊಡುವ ತೀರ್ಮಾನ ಮಾಡಲಾಗಿದೆ. ಶೀಘ್ರವಾಗಿ ಆಕ್ಸಿಜನ್ ಮಿಷನ್ ತರಿಸುವ ಕೆಲಸ ಮಾಡ್ತೀವಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸುದ್ದಿಗಾರರ ಮುಂದೆ ಹೇಳಿದರು.
(Above 18 years to be given vaccination after may 15 oxygen to be produced from environment says health minister dr k sudhakar)

Karnataka High Court: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಒದಗಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ