
ಬೆಂಗಳೂರು, ಜೂನ್ 4: ಆರ್ಸಿಬಿ ವಿಜಯೋತ್ಸವದ ವೇಳೆ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತದಲ್ಲಿ (Bengaluru Stampede) 11 ಜನರು ಮೃತಪಟ್ಟಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕೂಡ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಪಘಾತ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಅನುಕಂಪವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಕೂಡ ಇಂದು ನಡೆದ ಘಟನೆಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದು, ಈ ದುರಂತ ಸಂಭವಿಸಬಾರದಿತ್ತು. ನನಗೂ ಬಹಳ ದುಃಖವಾಗಿದೆ. ನಿರೀಕ್ಷೆಗೂ ಮೀರಿ ಆರ್ಸಿಬಿ ಅಭಿಮಾನಿಗಳು ಬಂದಿದ್ದರು. ಇಂತಹ ದುರಂತವನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮೃತಪಟ್ಟವರಲ್ಲಿ ಹೆಚ್ಚಿನವರು ಯುವಕ-ಯುವತಿಯರೇ ಆಗಿದ್ದಾರೆ. ಒಂದು ಮಗು ಕೂಡ ಮೃತಪಟ್ಟಿದೆ. ಈ ಘಟನೆಗೆ ಕಾರಣವೇನೆಂಬ ಬಗ್ಗೆ ವರದಿ ನೀಡಲು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
The mishap in Bengaluru is absolutely heartrending. In this tragic hour, my thoughts are with all those who have lost their loved ones. I pray that those who are injured have a speedy recovery: PM @narendramodi
— PMO India (@PMOIndia) June 4, 2025
ಇದನ್ನೂ ಓದಿ: Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಸಾವು
ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯಿಂದಾಗಿ ಕಾಲ್ತುಳಿತದ ನಂತರ ಅನೇಕರು ಜೀವಕ್ಕಾಗಿ ಹೋರಾಡುತ್ತಿದ್ದಾರೆ. ಜನಸಂದಣಿ ನಿಯಂತ್ರಣ ಕ್ರಮಗಳನ್ನು ತೆಗೆದುಕೊಂಡಿಲ್ಲ, ಯಾವುದೇ ಮೂಲಭೂತ ವ್ಯವಸ್ಥೆಗಳಿಲ್ಲ. ಕೇವಲ ಅವ್ಯವಸ್ಥೆಯೇ ಎದ್ದು ಕಾಣುತ್ತಿತ್ತು. ಅಮಾಯಕರು ಸಾಯುತ್ತಿದ್ದರೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರೀಲ್‌ಗಳನ್ನು ಚಿತ್ರೀಕರಿಸುವಲ್ಲಿ ಮತ್ತು ಕ್ರಿಕೆಟಿಗರೊಂದಿಗೆ ಪ್ರಚಾರದಲ್ಲಿ ನಿರತರಾಗಿದ್ದರು. ಇದು ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಗೇಡು. ಇದು ಕ್ರಿಮಿನಲ್ ನಿರ್ಲಕ್ಷ್ಯ. ಕಾಂಗ್ರೆಸ್ ಸರ್ಕಾರದ ಕೈಗಳಲ್ಲಿ ರಕ್ತವಿದೆ ಎಂದು ಬಿಜೆಪಿ ಟೀಕಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ