ಅವಾಚ್ಯ ಶಬ್ಧ ಬಳಕೆ ಕೇಸ್: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿಟಿ ರವಿ ಕೋರ್ಟ್​ ಬಿಗ್ ಶಾಕ್!

| Updated By: ರಮೇಶ್ ಬಿ. ಜವಳಗೇರಾ

Updated on: Jan 17, 2025 | 3:03 PM

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ವೇಳೆ ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್ ಸಿ ಸಿಟಿ ರವಿಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸುತ್ತಿದ್ದ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದು. ಇದೀಗ ಕೋರ್ಟ್​ ಸಿಟಿ ರವಿಗೆ ಮಹತ್ವದ ಸೂಚನೆ ನೀಡಿದೆ.

ಅವಾಚ್ಯ ಶಬ್ಧ ಬಳಕೆ ಕೇಸ್: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿಟಿ ರವಿ ಕೋರ್ಟ್​ ಬಿಗ್ ಶಾಕ್!
ಲಕ್ಷ್ಮೀ ಹೆಬ್ಬಾಳ್ಕರ್​, ಸಿಟಿ ರವಿ
Follow us on

ಬೆಂಗಳೂರು, (ಜನವರಿ 17): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ ಆರೋಪದ ಪ್ರಕರಣದ ತನಿಖೆ ಸಿಐಡಿ ಚುರುಕುಗೊಳಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಅವಾಚ್ಯ ಶಬ್ದ ಬಳಸಿರೋದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢವಾಗಿದೆ. ಇದರ ಬೆನ್ನಲ್ಲೇ ಇದೀಗ ವಾಯ್ಸ್​ ಸ್ಯಾಂಪಲ್​ ನೀಡುವಂತೆ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್​ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಗೆ ಮತ್ತಷ್ಟು ಸಂಕಷ್ಟ ಎದುರಾಗುವ ಸಾಧ್ಯತೆಳಿವೆ.

ವಾಯ್ಸ್​ ಸ್ಯಾಂಪಲ್ ನೀಡುವಂತೆ ಕೋರ್ಟ್ ಸೂಚನೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಸಿ.ಟಿ.ರವಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ತಿಳಿಸಿದ್ದರು. ಈ ಸಂಬಂಧ ಇಂದು (ಜನವರಿ 17) ಸಿ ಟಿ ರವಿ ಪರ ವಕೀಲರು ಕೋರ್ಟ್ ಗೆ ಹಾಜರಾಗಿದ್ದು, ಸಿಟಿ ರವಿಯವರಿಗೆ ಒಂದೇ ದಿನ ಎರಡು ನೋಟಿಸ್ ನೀಡಿದ್ದಾರೆ ಎಂದು ಕೋರ್ಟ್​ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ವಿಡಿಯೋದಲ್ಲಿ ದೃಢ

ನಿಮಗೆ ಅಕ್ಷೇಪಣೆ ಇದ್ದರೆ ಸಲ್ಲಿಸಿ. ಇಲ್ಲ‌ ಅದೇಶ ಮಾಡುತ್ತೇನೆ. ಹೋಗಿ ವಾಯ್ಸ್ ಸ್ಯಾಂಪಲ್‌ ನೀಡಿ. ವಾಟ್ಸಪ್​ನಲ್ಲಿ ನೊಟೀಸ್ ಬಂದಿದೆ ಎನ್ನುತ್ತೀರಿ. ನೀವು ಹೇಗೆ ಹಾಜರಾಗಿದ್ದೀರಿ? ನಾಳೆ ನೀವು ತಿಳಸಬೇಕು. ಇಲ್ಲ ಅದೇಶ ಮಾಡಲಾಗುತ್ತೆ ಎಂದು kಓರ್ಟ್​ ಕೋರ್ಟ್ ಸಿಟಿ ರವಿ ಪರ ವಕೀಲರಿಗೆ ಖಡಕ್ ಆಗಿ ಹೇಳಿದೆ.

ಬಳಿಕ ಸಿಟಿ ರವಿ ಪರ ವಕೀಲರು, ದಯವಿಟ್ಟು ಬೇರೆ ದಿನ ಕೊಡಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿ ಕೋರ್ಟ್, ಯಾಕೆ ನಿಮಗೆ ಬೇರೆ ದಿನ ಬೇಕು ಎಂದು ಪ್ರಶ್ನಿಸಿದೆ. ಇದಕ್ಕೆ ನಮಗೆ ಇನ್ನೂ ಫೈಲ್ ಸಿಕ್ಕಿಲ್ಲ ಎಂದು ಸಿಟಿ ರವಿ ಪರ ವಕೀಲರು ತಿಳಿಸಿದರು. ನಂತರ ಕೋರ್ಟ್, ಇಂದೇ ಅವರಿಗೆ(ಸಿಟಿ ರವಿ ಪರ ವಕೀಲರಿಹ) ಕಾಪಿ ಕೊಡಿ ಎಂದು ಸಿಐಡಿ ಅಧಿಕಾರಿಗಳಿಗೆ ಜಡ್ಜ್ ಸೂಚನೆ ನೀಡಿದರು. ಬೇಕಿದ್ರೆ ವಾಯ್ಸ್ ಸ್ಯಾಂಪಲ್ ಕೊಡಿ. ವಿಚಾರಣೆಗೆ ದಿನಾಂಕ ಐಓ ಹತ್ತಿರ ಕೇಳಿಕೊಳ್ಳಿ ಎಂದರು. ಇದರೊಂದಿಗೆ ಇದೀಗ ಸಿಟಿ ರವಿ ತಮ್ಮ ವಾಯ್ಸ್ ಸ್ಯಾಂಪಲ್​ ನೀಡಬೇಕಾದ ಅನಿವಾರ್ಯತೆ ಸಿಲುಕಿದ್ದಾರೆ.

ಅವಾಚ್ಯ ಶಬ್ದ ಬಳಸಿರುವುದು ತನಿಖೆಯಲ್ಲಿ ದೃಢ

ಮತ್ತೊಂದೆಡೆ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ವಿಡಿಯೋದಲ್ಲಿ ದೃಢವಾಗಿದೆ ಎಂದು ಸಿಐಡಿಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ. ಆದರೆ, ಈ ಧ್ವನಿ ಸಿಟಿ ರವಿ ಅವರದ್ದೇ, ಅಲ್ಲವೇ ಎಂಬುವುದು ವಿಧಿ ವಿಜ್ಞಾನ ಪ್ರಯೋಗಾಲಯ ಖಚಿತಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ (ಡಿಎಪಿಆರ್​) ನೀಡಿದ್ದ ಸದನದ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ