AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಡಿಪಿಐ, ಪಿಎಫ್​ಐ ಬ್ಯಾನ್​ ಒತ್ತಾಯಿಸಿ ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ; ರಣಾಂಗಣವಾದ ಸರ್ಕಾರಿ ನಿವಾಸ

ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗೃಹಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆದಿದೆ.

ಎಸ್​ಡಿಪಿಐ, ಪಿಎಫ್​ಐ ಬ್ಯಾನ್​ ಒತ್ತಾಯಿಸಿ ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ; ರಣಾಂಗಣವಾದ ಸರ್ಕಾರಿ ನಿವಾಸ
ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ
TV9 Web
| Updated By: Rakesh Nayak Manchi|

Updated on:Jul 30, 2022 | 11:34 AM

Share

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರ ಪ್ರತಿಭಟನೆಯ ಕಿಚ್ಚಿಗೆ ಹೈರಾಣಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದು, ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬಜರಂಗದಳ ಹರ್ಷ ಕೊಲೆ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವುದು ಬಿಜೆಪಿ ಆಡಳಿತಾವಧಿಯಲ್ಲೇ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಆಕ್ರೋಶ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ. ಸದ್ಯ ಪ್ರವೀಣ್ ಹತ್ಯೆ ಬಳಿಕೆ ರಾಜ್ಯ ಬಿಜೆಪಿ ಸರ್ಕಾರ ತಮ್ಮದೇ ಕಾರ್ಯಕರ್ತರ ನಿರಂತರ ಪ್ರತಿಭಟನೆಗಳನ್ನು ಎದುರಿಸುತ್ತಿದ್ದು, ಇದೀಗ ಎಬಿವಿಪಿ ಕಾರ್ಯಕರ್ತರು ಗೃಹಸಚಿವ ಅರಗ ಜ್ಞಾನೇಂದ್ರ ಅವರ ಸರ್ಕಾರಿ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಮನೆಯೊಳಗೆ ನುಗ್ಗಲು ಕಾರ್ಯಕರ್ತರ ಯತ್ನ

ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಕೊಲೆಗಳ ನಂತರ ಹಿಂದೂ ಕಾರ್ಯಕರ್ತರಲ್ಲಿನ ಆಕ್ರೋಶ ಬುಗಿಲೆದ್ದಿದ್ದು, ಕೊಲೆ ಪ್ರಕರಣಗಳ ನಿಗ್ರಹಕ್ಕೆ ಹಾಗೂ ಕಠಿಣ ಕ್ರಮಕ್ಕೆ ಆಗ್ರಹಿಸಿ ಮತ್ತು ಎಸ್​ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ನಿವಾಸದ ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು, ಮನೆ ಬಾಗಿಲು ತೆರೆದು ಒಳನುಗ್ಗಲು ಯತ್ನಿಸಿದ್ದಾರೆ. ಸ್ಥಳದಲ್ಲಿ ಕಡಿಮೆ ಸಂಖ್ಯೆಯಲ್ಲಿ ಪೊಲೀಸರು ಇದ್ದ ಹಿನ್ನೆಲೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟಿದ್ದಾರೆ.

ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು, ಈ ವೇಳೆ ಉಳಿದ ಕಾರ್ಯಕರ್ತರು ವಶದಲ್ಲಿದ್ದ ಕಾರ್ಯಕರ್ತರನ್ನು ಬಿಡಿಸಿಕೊಂಡಿದ್ದಾರೆ. ಆ ಮೂಲಕ ಎಬಿವಿಪಿ ಕಾರ್ಯಕರ್ತರ ಆಕ್ರೋಶಕ್ಕೆ ಪೊಲೀಸರು ಹೈರಾಣಾಗಿ ಹೋಗಿದ್ದಾರೆ. ಅಲ್ಲದೆ ಗೃಹ ಸಚಿವರ ಸರ್ಕಾರಿ ನಿವಾಸದ ಬಾಗಿಲಿನ ಮುಂದೆ ಪ್ರತಿಭಟನೆ ಕುಳಿತ ಕಾರ್ಯಕರ್ತರು, ಪೊಲೀಸರ ಜೊತೆ ವಾಗ್ವಾದ ನಡೆಸಿದ್ದು, ನಿವಾಸದ ಒಳಗೆ ಕಾರ್ಯಕರ್ತರು ನುಗ್ಗದಂತೆ ಪೊಲೀಸರು ಬಾಗಿಲಿಗೆ ಅಡ್ಡಲಾಗಿ ನಿಂತಿದಿದ್ದಾರೆ. ಅದಾಗ್ಯೂ ಕೆಲವು ಕಾರ್ಯಕರ್ತರ ಮೇಲೆ ಲಘ ಲಾಠಿ ಪ್ರಹಾರ ನಡೆದಿದ್ದು, ಗೃಹಸಚಿವರ ನಿವಾಸ ರಣಾಂಗಣವಾಗಿ ಪರಿಣಮಿಸಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತರ ದೌಡು; ಸಿಬ್ಬಂದಿಗಳಿಗೆ ಕ್ಲಾಸ್

ಗೃಹ ಸಚಿವರ ಸರ್ಕಾರಿ ಮನೆ ಬಳಿ ಎಬಿವಿಪಿ ಪ್ರತಿಭಟನೆ ಹಿನ್ನೆಲೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತರ ಭೇಟಿ ನೀಡಿದ್ದು, ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಭಟನೆ ನಡೆದ ಸ್ಥಳ ಪರಿಶೀಲಿಸಿದ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳನ್ನು ಗೃಹ ಸಚಿವರ ನಿವಾಸದ ಒಳಗೆ ಕರೆಸಿಕೊಂಡು ಸಂದೀಪ್ ಪಾಟೀಲ್ ಅವರು ತರಾಟೆಗೆ ತೆಗೆದುಕೊಂಡರು.

40 ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು

ಗೃಹ ಸಚಿವರ ಸರ್ಕಾರಿ ಮನೆ ಬಳಿ ಪ್ರತಿಭಟನೆ ನಡೆಸಿದ 40 ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತು ಉತ್ತರ ವಿಭಾಗದ ಡಿಸಿಪಿಯಿಂದ ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಅವರು ವರದಿ ಕೇಳಿರುವ ಕೇಳಿದ್ದಾರೆ.

Published On - 10:43 am, Sat, 30 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!