AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ದಾಳಿ

ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. ಬಿಡಿಎ ಅಧಿಕಾರಿಗಳ ಜತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದಿದೆ.

ಬೆಂಗಳೂರಿನಲ್ಲಿಂದು ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ದಾಳಿ
ಎಸಿಬಿ ದಾಳಿ
TV9 Web
| Edited By: |

Updated on:Mar 22, 2022 | 9:19 AM

Share

ಬೆಂಗಳೂರು: ನಗರದಲ್ಲಿಂದು ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಎಸಿಬಿ ದಾಳಿ (ACB Raid) ಮಾಡಿದೆ. ಬಿಡಿಎ ಅಧಿಕಾರಿಗಳ ಜತೆ ಸೇರಿಕೊಂಡು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಬೆಂಗಳೂರಿನಲ್ಲಿ ಎಸಿಬಿ SP ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ಮಾಡಲಾಗಿದೆ. ಚಾಮರಾಜಪೇಟೆಯ ಬಿ.ಎನ್.ರಘು, R.T.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್​ನ ಲಕ್ಷ್ಮಣ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.

ಬಿಡಿಎನ 9 ಮಧ್ಯವರ್ತಿಗಳ ಮೇಲೆ ಎಸಿಬಿ ದಾಳಿ ಮಾಡಿದೆ. ಸತತವಾಗಿ ಬಿಡಿಎ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದ ಎಸಿಬಿ ಇದೀಗ ಮಧ್ಯವರ್ತಿಗಳ ಮೇಲೆ ದಾಳಿ ಮಾಡಿದೆ. ಅಧಿಕಾರಿಗಳ ಮನೆಯಲ್ಲಿ, ಕಚೇರಿಯಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ದಾಳಿ ಮಾಡಲಾಗಿದ್ದು, ದಾಳಿಗೆ ಮುಖ್ಯ ಕಾರಣ ಕೆಂಪೇಗೌಡ ಲೇಔಟ್​ನಲ್ಲಿ ಬದಲಿನಿವೇಶನ ಹಂಚಿಕೆ ಎಂದು ತಿಳಿದುಬಂದಿದೆ. ರೈತರ ಹೆಸರಲ್ಲಿ ಅಧಿಕಾರಿಗಳ ಜೊತೆಗೂಡಿ ಬದಲಿನಿವೇಶನ ಪಡೆದಿರುವ ಆರೋಪ ಕೇಳಿಬಂದಿದೆ. ರೈತರಿಗೆ ಬದಲಿ ನಿವೇಶನ ನೀಡುವ ಹೆಸರಲ್ಲಿ ಮಧ್ಯವರ್ತಿಗಳಿಂದ ಭ್ರಷ್ಟಾಚಾರ ಎಸಗಲಾಗಿದೆ. ಗೋಮಾಳ ಭೂಮಿಯನ್ನ ರೈತರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಿ, ಗೋಮಾಳ ಜಾಗಕ್ಕೆ ಮಧ್ಯವರ್ತಿಗಳು ಪರಿಹಾರ ಪಡೆದಿದ್ದಾರೆ.

ಬೆಂಗಳೂರಿನ ಉಳ್ಳಾಲ RTO ಕಚೇರಿ ಬಳಿಯಿರುವ ಬಿಡಿಎ ಮಧ್ಯವರ್ತಿ ಚಿಕ್ಕಹನುಮಯ್ಯನ ಎರಡು ಅಂತಸ್ತಿನ ಮನೆ ಮೇಲೆ ಬೆಳಗಿನಜಾವ 5 ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಅಧಿಕಾರಿಗಳು ಸೇರಿ 7 ಸಿಬ್ಬಂದಿಯಿಂದ ಶೋಧಕಾರ್ಯ ನಡೆದಿದ್ದು, ಅಧಿಕಾರಿಗಳಿಂದ ಮನೆ ಮುಂದೆ ನಿಲ್ಲಿಸಿರುವ ಕಾರುಗಳ ಪರಿಶೀಲನೆ ಮಾಡಲಾಗಿದೆ. ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ಪೆಟ್ರೋಲ್ ಬಂಕ್ ಕೂಡ ಹೊಂದಿರುವ ಚಿಕ್ಕಹನುಮಯ್ಯ, ಸಾಕಷ್ಟು ವರ್ಷಗಳಿಂದ ರಿಯಲ್ ಎಸ್ಟೇಟ್ ಮಾಡುತ್ತಿದ್ದ. ಆರ್​.ಟಿ ನಗರದ ಸೆಕೆಂಡ್ ಬ್ಲಾಕ್​ನಲ್ಲಿರುವ ಬಿಡಿಎ ಬ್ರೋಕರ್ ಮೋಹನ್​ ಐಶಾರಾಮಿ ಮನೆ ಮೇಲೆ ಕೂಡ 9 ಜನ ಅಧಿಕಾರಗಳಿಂದ ದಾಳಿ ಮಾಡಲಾಗಿದೆ. ಡಿವೈಎಸ್ ಪಿ ಪ್ರಕಾಶ್ ರೆಡ್ಡಿ, ಇನ್ಸ್ಪೆಕ್ಟರ್ ಮಂಜುನಾಥ್ ಸೇರಿ ಒಟ್ಟು 9 ಜನ್ರ ಅಧಿಕಾರ ತಂಡದಿಂದ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ. ಮಧ್ಯವರ್ತಿ ತೇಜು ಅಲಿಯಾಸ್ ತೇಜಸ್ ಮನೆ ಮೇಲೆ ದಾಳಿ ಮಾಡಲಾಗಿದೆ. ಆರ್ ಆರ್ ನಗರದಲ್ಲಿ ತೇಜು ಭವ್ಯ ಬಂಗಲೆ ಹೊಂದಿದ್ದು, ಮನೆಯೊಳಗೆ ಸ್ವಿಮ್ಮಿಂಗ್ ಫುಲ್ ಹೊಂದಿದ್ದಾರೆ. ನಟ ಗೋಲ್ಡನ್ ಸ್ಟಾರ್ ಗಣೇಶ್ ಮನೆ ಪಕ್ಕದಲ್ಲೇ ತೇಜು ಮನೆಯಿದೆ.

ಬ್ರೋಕರ್ ಮುನಿರತ್ನ ಅಲಿಯಾಸ್ ರತ್ನವೇಲುಗೆ ಎಸಿಬಿ ಶಾಕ್ ನೀಡಿದ್ದು, ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿರುವ ಮುನಿರತ್ನ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಮುನಿರತ್ನನ ಐಷಾರಾಮಿ ಮನೆ ಕಂಡು ಅಧಿಕಾರಿಗಳು ಶಾಕ್​ ಆಗಿದ್ದು, ಮನೆಯಲ್ಲಿ ಈಜುಕೊಳ, ಜಿಮ್ ಕೂಡ ಇದೆ. ಎಸಿಬಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ದೊಮ್ಮಲೂರಿನ ಬ್ರೋಕರ್ ಮನೋಜ್ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ದೇಶ ಹಾಗೂ ವಿದೇಶಗಳ ಪ್ರತಿಷ್ಟಿತ ಬ್ರಾಂಡ್​ನ 19 ಸನ್ ಗ್ಲಾಸಸ್ ಹಾಗೂ 22 ಗಡಿಯಾರಗಳು ಪತ್ತೆಯಾಗಿವೆ. ಇದನ್ನೂ ಓದಿ:

ಕಸದ ಲಾರಿಗೆ ಬಾಲಕಿ ಬಲಿ: ಚಾಲಕನ ಬಂಧನ, ಇಂದು ಮೃತಳ ಅಂತ್ಯಕ್ರಿಯೆ

ಬ್ಯಾಂಕ್‌ ನಿಮ್ಮನ್ನು ಸುಸ್ತಿದಾರ ಎಂದು ಘೋಷಿಸಿಬಿಟ್ಟರೆ ಅದಕ್ಕೆ ಪರ್ಯಾಯ ಏನು?

Published On - 7:47 am, Tue, 22 March 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು