ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೆ ACB ದಾಳಿ ನಡೆದಿದೆ
ಆಯೇಷಾ ಬಾನು

Updated on: Mar 09, 2021 | 9:08 AM

ಮಂಡ್ಯ: ಬೆಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಶುರು ಮಾಡಿದ್ದಾರೆ. ಮಂಡ್ಯ ಹಾಗೂ ಯಾದಗಿರಿ ಸೇರಿದಂತೆ ಕೆಲ ಕಡೆ ಎಸಿಬಿ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ RTO ಪ್ರಥಮ ದರ್ಜೆ ಸಹಾಯಕ ಏ.ವಿ. ಚನ್ನವೀರಪ್ಪನವರ ಮನೆ ಮೇಲೆ ದಾಳಿ ನಡೆದಿದೆ. ಮಂಡ್ಯದ ಕುವೆಂಪುನಗರ, ಮಂಡ್ಯ ತಾಲೂಕು ಆಲಕೆರೆ ಗ್ರಾಮದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ನು ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೂ ACB ದಾಳಿ ನಡೆದಿದೆ. ಎಸಿಬಿ SP ಮಹೇಶ ಮೇಗ್ಗಣ್ಣನವರ್ ಹಾಗೂ DySP ಉಮಾಶಂಕರ ನೇತೃತ್ವದಲ್ಲಿ ಯಾದಗಿರಿ ನಗರದ ಸಹರಾ ಕಾಲೋನಿಯಲ್ಲಿರುವ ನಿವಾಸದಲ್ಲಿ ದಾಳಿ ನಡೆದಿದ್ದು ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.

ಆದಾಯ ಮೀರಿ ಆಸ್ತಿ ಹೊಂದಿದ್ದ ದೂರು ಹಿನ್ನೆಲೆ ಎಸಿಬಿ ದಾಳಿ ನಡೆದಿದೆ. ರಾಜು ಪತ್ತಾರ ಕಳೆದ 20 ವರ್ಷದಿಂದ ಯಾದಗಿರಿ ಕೆಇಬಿ‌ ಕಚೇರಿಯಲ್ಲಿ ‌ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ದಾಳಿ ವೇಳೆ ರಾಜು ಮನೆಯಲ್ಲಿ ನಗದು, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಪತ್ತೆಯಾಗಿವೆ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯದಲ್ಲಿ ಏಕಕಾಲಕ್ಕೆ 28 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 9 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು ರಾಜ್ಯದ 11 ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ಮುನಿಗೋಪಾಲರಾಜು, ಮೈಸೂರು ನಗರ ಯೋಜನೆ ಇಲಾಖೆ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಕೆ.ವಡ್ಡರ್, ಮೈಸೂರು ಆರ್‌ಟಿಒ, ಎಫ್‌ಡಿಎ ಚೆನ್ನವೀರಪ್ಪ, ಚಿಕ್ಕಬಳ್ಳಾಪುರದ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ, ಬೆಳಗಾವಿ ವಿಭಾಗ ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಹನಮಂತ ಶಿವಪ್ಪ ಚಿಕ್ಕಣ್ಣನವರ್, ಯಾದಗಿರಿ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತರ್, ಬಿಎಂಟಿಎಫ್ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸಿಮೊನ್, ದಾವಣಗೆರೆ ವಿಭಾಗ ಫ್ಯಾಕ್ಟರೀಸ್ & ಬಾಯ್ಲರ್ಸ್ ಡೆಪ್ಯುಟಿ ಡೈರೆಕ್ಟರ್ ಕೆ.ಎಂ.ಪ್ರಥಮ್, ಯಲಹಂಕ ವಿಭಾಗ ಬಿಬಿಎಂಪಿ ನಗರ ಯೋಜನೆ ಕಚೇರಿ ಅಸಿಸ್ಟೆಂಟ್ ಡೈರೆಕ್ಟರ್, ಜೂನಿಯರ್ ಇಂಜಿನಿಯರ್ ಕೆ.ಸುಬ್ರಹ್ಮಣ್ಯಂ ಸೇರಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

Published On - 7:58 am, Tue, 9 March 21

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us