ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ
ಸದಲಗಾ ಪೊಲೀಸ್ ಠಾಣೆ
Follow us
TV9 Web
| Updated By: ಆಯೇಷಾ ಬಾನು

Updated on: Jul 09, 2021 | 9:55 AM

ಬೆಳಗಾವಿ: ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ಬಲೆಗೆ ಬಿದ್ದಿದ್ದಾರೆ. ಸದಲಗಾ ಪೊಲೀಸ್ ಠಾಣೆ ಎಸ್‌ಐ ಕುಮಾರ್ ಹಿತ್ತಲಮನಿ ಕಾನ್ಸ್‌ಟೇಬಲ್‌ ಮಾಯಪ್ಪ ಗಡ್ಡೆ, ಶ್ರೀಶೈಲ ಮಂಗಿ ಬಲೆಗೆ ಬಿದ್ದ ಪೊಲೀಸರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನೊಂದ ರಾಜು ಪಾಶ್ಚಾಪುರೆ ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆ ತಡರಾತ್ರಿ 40 ಸಾವಿರ ರೂ. ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು ಪಿಎಸ್‌ಐ, ಇಬ್ಬರು ಪಿಸಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ರಕ್ಷಿಸಬೇಕಾದವರೆ ಹೆದರಿಸಿ, ಬೆದರಿಸಿ ಹಣ ವಸೂಲಿಗೆ ಮುಂದಾಗಿದ್ದು ಮಾತ್ರ ವಿಪರ್ಯಾಸ. ಸದ್ಯ ಇಂತಹ ಲಂಚಬಾಕರ ಕೃತ್ಯವನ್ನು ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಬಯಲು ಮಾಡಿದ್ದಾರೆ.

ACB Raid On Police Station

ಪಿಎಸ್‌ಐ, ಇಬ್ಬರು ಪಿಸಿಗಳು

ಇದನ್ನೂ ಓದಿ: ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್