ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್ ರಿಜಿಸ್ಟ್ರಾರ್ ಎಸಿಬಿ ಬಲೆಗೆ
ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ: ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ […]
ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ: ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ನರೇಗಾ ಯೋಜನೆಯಲ್ಲಿ ಮಾಡಿದ ಕಾಮಗಾರಿಗಳ ಮೂರೂವರೆ ಲಕ್ಷ ಹಣ ಬಿಡುಗಡೆ ಮಾಡಲು ಒಂದೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ಗುತ್ತಿಗೆದಾರ ಮಹೇಶ ಸಾಲಮನಿ ಎಂಬುವರಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 7:14 pm, Thu, 12 December 19