ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್​ ರಿಜಿಸ್ಟ್ರಾರ್ ಎಸಿಬಿ ಬಲೆಗೆ

ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್​ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್​ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ: ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ […]

ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್​ ರಿಜಿಸ್ಟ್ರಾರ್ ಎಸಿಬಿ ಬಲೆಗೆ
ಸಾಧು ಶ್ರೀನಾಥ್​

Updated on: Dec 12, 2019 | 7:25 PM

ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್​ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್​ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ:
ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ನರೇಗಾ ಯೋಜನೆಯಲ್ಲಿ ಮಾಡಿದ ಕಾಮಗಾರಿಗಳ ಮೂರೂವರೆ ಲಕ್ಷ ಹಣ ಬಿಡುಗಡೆ ಮಾಡಲು ಒಂದೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ಗುತ್ತಿಗೆದಾರ ಮಹೇಶ ಸಾಲಮನಿ ಎಂಬುವರಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:14 pm, Thu, 12 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us