AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವ ವಿವಾಹಿತರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ತಡರಾತ್ರಿ ನಡೆದಿದೆ.

Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಮೃತ ನವದಂಪತಿ
Follow us
ವಿವೇಕ ಬಿರಾದಾರ
|

Updated on:Jun 14, 2023 | 9:08 AM

ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ (Accident) ನವ ವಿವಾಹಿತರು (Married Couple) ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ (Solapur Bypass) ಬಳಿ ತಡರಾತ್ರಿ ನಡೆದಿದೆ. ಹೊನಮಲ್ಲ ತೆರದಾಳ (31), ಅವರ ಪತ್ನಿ ಗಾಯತ್ರಿ (24) ಸ್ಥಳದಲ್ಲೇ ಮೃತದುರ್ದೈವಿಗಳು. ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ನಡೆದ ದುರ್ಘಟನೆ ಸಂಭವಿಸಿದೆ. ಮೃತ ಹೊನಮಲ್ಲ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಕಳೆದ ತಿಂಗಳು ಮೇ 22 ರಂದು ಹೊನಮಲ್ಲ ಹಾಗೂ ಗಾಯತ್ರಿಯ ವಿವಾಹವಾಗಿತ್ತು. ಮದುವೆಯಾಗಿ 24 ದಿನಗಳಲ್ಲೇ ನವ ಜೋಡಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ, ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ. ತಡರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ.

ಇದನ್ನೂ ಓದಿ: ಬೆಂಗಳೂರು ಮತ್ತು ಮೈಸೂರಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತಗುಲಿ ರೈತ, ಎತ್ತು ಸಾವು

ಕಾರಿನಲ್ಲಿದ್ದ ಐವರು ಯುವಕರು, ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ತಂಡ ಬರುತ್ತಿದ್ದರು. ಗಾಯಗೊಂಡ ಮೂವರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Wed, 14 June 23

ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಸ್ಲಿಪ್​ನಲ್ಲಿ ನಿಂತ ವಿಕೆಟ್ ಕೀಪರ್: ಎದುರಾಳಿ ತಂಡಕ್ಕೆ ಸಿಕ್ತು 5 ರನ್​
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಎದೆ ಹಿಡಿದುಕೊಳ್ಳುತ್ತಿದ್ದ ರಾಕೇಶ್ ಪೂಜಾರಿ
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಲಷ್ಕರ್ ಉಗ್ರನನ್ನು ಮುಗ್ದ ವ್ಯಕ್ತಿ, ಧರ್ಮ ಪ್ರಚಾರಕ ಎಂದು ಕರೆದ ಪಾಕ್
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ಭಾರತ-ಪಾಕ್​ ಮಧ್ಯೆ ಉದ್ವಿಗ್ನ: ಸೈಬರ್ ದಾಳಿ ಬಗ್ಗೆ​ ದಯಾನಂದ್ ಎಚ್ಚರಿಕೆ!​​
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
ರಾಕೇಶ್ ಪೂಜಾರಿ ಸಾಯುವುದಕ್ಕೂ ಮೊದಲು ಏನೆಲ್ಲ ಆಯ್ತು? ವಿವರಿಸಿದ ಜಿಜಿ
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
Daily Devotional: ಹನುಮಂತನಿಗೆ ಯಾವ ರೀತಿಯ ಹಾರ ಹಾಕಿದರೆ ಏನು ಫಲ?
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ಮೀನ ರಾಶಿಯವರಿಗೆ ಸ್ಥಾನ ಪಲ್ಲಟ, ಅವಿವಾಹಿತರಿಗೆ ವಿವಾಹ ಯೋಗ ಸಾಧ್ಯತೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ತುಮಕೂರು ರೈಲು ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಮಾಡಿದ ಉಪ್ಪಿ ಮತ್ತು ಕುಟುಂಬ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ
ಐಪಿಎಲ್ ಆದಷ್ಟು ಬೇಗ ಆರಂಭವಾಗಲಿದೆ; ರಾಜೀವ್ ಶುಕ್ಲಾ