AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಾರೆ. ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ

ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು
ಅಪಘಾತ
TV9 Web
| Edited By: |

Updated on: Jun 14, 2023 | 7:58 PM

Share

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident)  ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ. ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಸಾವಿಗೀಡಾದವರು  ಒಂದೇ ಕುಟುಂಬದವರಾಗಿದ್ದಾರೆ.  ಇದರಲ್ಲಿ ಒಬ್ಬ ಬಾಲಕಿ ವಯಸ್ಸು 13, ಮತ್ತೊಬ್ಬಳದ್ದು 20.  ಹೆಚ್.ಡಿ.ಕೋಟೆಯಿಂದ ಮದುವೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಅಫಘಾತ ಸಂಭವಿಸಿದೆ. ಕಾರ್ ನಲ್ಲಿ ಹೋಗುತ್ತಿದ್ದವರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ,

ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಾರೆ. ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ