ರಸ್ತೆಯಲ್ಲಿ ಸಂಚರಿಸುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಜ್ಞೆತಪ್ಪಿ ಬಿದ್ದ ವ್ಯಕ್ತಿ; ಬೊಮ್ಮನಹಳ್ಳಿ ವೃತ್ತದ ಬಳಿ ಘಟನೆ

ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿ ಓರ್ವ ಪೊಲೀಸರನ್ನು ಕಂಡ ತಕ್ಷಣ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದ ಘಟನೆ ಬೆಂಗಳೂರು ನಗರದ ಬೊಮ್ಮನಹಳ್ಳಿ ವೃತ್ತದ ಬಳಿ ನಡೆದಿದೆ.

ರಸ್ತೆಯಲ್ಲಿ ಸಂಚರಿಸುವಾಗ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಪ್ರಜ್ಞೆತಪ್ಪಿ ಬಿದ್ದ ವ್ಯಕ್ತಿ; ಬೊಮ್ಮನಹಳ್ಳಿ ವೃತ್ತದ ಬಳಿ ಘಟನೆ
ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುತ್ತಿರುವ ವಾಹನಗಳನ್ನು ತಡೆಯುತ್ತಿರುವ ಪೊಲೀಸರು
Follow us
shruti hegde
|

Updated on: May 09, 2021 | 12:05 PM

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ರಸ್ತೆಯಲ್ಲಿ ಅನಗತ್ಯವಾಗಿ ತಿರುಗಾಡಬಾರದು ಎಂಬ ನಿರ್ಬಂಧನೆ ಹೇರಿದ್ದರೂ ಕೂಡಾ ಜನರು ರಸ್ತೆಯಲ್ಲಿ ತಿರುಗಾಡುತ್ತಿದ್ದಾರೆ. ವಿಷಯ ತಿಳಿದ ಪೊಲೀಸರು ರಸ್ತೆಗೆ ಇಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ರಸ್ತೆಯಲ್ಲಿ ತಿರುಗಾಡುತ್ತಿರುವವರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿ ಓರ್ವ ಪೊಲೀಸರನ್ನು ಕಂಡ ತಕ್ಷಣ ತಪ್ಪಿಸಿಕೊಳ್ಳಲು ಹೋಗಿ ಬೈಕ್​ನಿಂದ ಬಿದ್ದ ಘಟನೆ ನಗರದ ಬೊಮ್ಮನಹಳ್ಳಿ ವೃತ್ತದ ಬಳಿ ನಡೆದಿದೆ.

ಅತಿ ವೇಗವಾಗಿ ಆಕ್ಟೀವ್ ಹೊಂಡಾದಲ್ಲಿ ಬಾಣಸವಾಡಿ ನಿವಾಸಿ ರಾಜ ಎಂಬಾತ ಬರುತಿದ್ದ. ರಸ್ತೆಯಲ್ಲಿ ಪೊಲೀಸರು ನಿಂತಿರುವುದನ್ನು ಕಂಡು ಗಾಬರಿಗೊಂಡು ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ನಡುರಸ್ತೆಯಲ್ಲಿಯೇ ಬಿದ್ದಿದ್ದಾನೆ. ಕೆಲ ಸಮಯ ಪರಜ್ಞೆಯೇ ಇಲ್ಲದಂತಾಗಿತ್ತು. ಬೆಳ್ಳಂಬೆಳಿಗ್ಗೆಯೇ ಓಪನ್ ಆಗಿದ್ದ ಎಣ್ಣೆ ಅಂಗಡಿಗೆ ಹೋಗಿ ಕಂಠಪೂರ್ತಿ ಕುಡಿದು ವೇಗವಾಗಿ ಬೈಕ್​ ಓಡಿಸಿಕೊಂಡು ಬರುತ್ತಿದ್ದ. ಮನೆಗೆ ವಾಪಾಸ್​ ಹಿಂತಿರುಗುವಾಗ ಬೊಮ್ಮನಹಳ್ಳಿ ಸರ್ಕಲ್ ಬಳಿ ಘಟನೆ ನಡೆದಿದೆ. ಸಣ್ಣಪುಟ್ಟ ಗಾಯಗಳಾಗಿರುವುದರಿಂದ ರಾಜು ಅವರನ್ನು ಪೊಲೀಸರು ಆಟೋ ಮಾಡಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮೈಸೂರಿನಲ್ಲಿ ರಸ್ತೆಯಲ್ಲೇ ಬೈಕ್ ನಿಲ್ಲಿಸಿ ಬಿದ್ದು ಹೊರಳಾಡಿದ ಸವಾರ ಮೈಸೂರಿನಲ್ಲಿ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಿರುವಾಗ ಬೈಕ್​ ಸವಾರನೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವುದನ್ನು ಕಂಡ ಪೊಲೀಸರು ವ್ಯಕ್ತಿಯನ್ನು ಎಚ್ಚರಿಸಿದ್ದಾರೆ. 10 ಗಂಟೆಯ ನಂತರ ರಸ್ತೆಯಲ್ಲಿ ಓಡಾಡಬಾಡರು ಎಂದಿದ್ದಕ್ಕೆ ವ್ಯಕ್ತಿ ರಸ್ತೆಯಲ್ಲಿಯೇ ಮಲಗಿ ಹೊರಳಾಡಿ ಪೊಲೀಸರ ಮುಂದೆ ಡ್ರಾಮಾ ಮಾಡಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಬಳಿ ನಡೆದಿದೆ.

ಇದನ್ನೂ ಓದಿ: ಎಲ್ಲೂ ಬೆಡ್ ಸಿಗದೆ ಮುಖ್ಯಮಂತ್ರಿ ನಿವಾಸದ ಬಳಿಗೆ ಆಗಮಿಸಿದ ಕೊರೊನಾ ಸೋಂಕಿತ; ಘಟನೆ ಬಳಿಕ ಕುಮಾರಕೃಪಾ ರಸ್ತೆ ಬಂದ್

ಒಂದು ಬೈಕ್​, ಆರು ಜನ, ಸಕುಟುಂಬ ಸಮೇತರಾಗಿ ಮದುವೆಗೆ ಪಯಣ; ಚಾಲಕನಿಗೆ ನಡು ರಸ್ತೆಯಲ್ಲೇ ಕೈ ಮುಗಿದ ಪೊಲೀಸರು

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್