ಚಿಕ್ಕಬಳ್ಳಾಪುರ, ರಾಯಚೂರಿನಲ್ಲಿ ಅಪಘಾತ: ನಾಲ್ವರ ಸಾವು
ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ: ಲಾರಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಬಂಡಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹಾಸನ ಮೂಲದ ಅಶೋಕ್(38), ಗರುಡಚಾರ್ಲಹಳ್ಳಿ ಗ್ರಾಮದ ಶಿವಪ್ಪ (45) ಮೃತರು. ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೀರಿನ ಟ್ಯಾಂಕ್‌ಗೆ ಕಾರು ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು ರಾಯಚೂರು: ತಾಲೂಕಿನ ಹರವಿ ಕ್ಯಾಂಪ್ ಬಳಿ ನೀರಿನ ಟ್ಯಾಂಕ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ಠಾಣಾ ವ್ಯಾಪ್ತಿಯ ಕ್ಯಾಂಪ್ ಹನುಮೇಶ (21), ರಾಜೇಶ (22) ಮೃತರು. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೆ ಗಂಭೀರ ಗಾಯವಾಗಿದೆ. ಮಾನ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಬ್ಬಳ್ಳಿಯಲ್ಲಿ ಯುವಕನ ಭೀಕರ ಹತ್ಯೆ ಹುಬ್ಬಳ್ಳಿ: ನಗರದಲ್ಲಿ ಭೀಕರ ಕೊಲೆ ಪ್ರಕರಣವೊಂದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಯುವಕನ ರುಂಡ, ಮುಂಡ ಪ್ರತ್ಯೇಕ ಸ್ಥಳಗಳಲ್ಲಿ ಪತ್ತೆಯಾಗಿದೆ. ದೇವರಗುಡಿಹಾಳ ಅರಣ್ಯ ಪ್ರದೇಶದಲ್ಲಿ ರುಂಡ ಪತ್ತೆಯಾಗಿದ್ದರೆ, ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಮುಂಡ ಪತ್ತೆಯಾಗಿದೆ. ಕೇಶ್ವಾಪುರ ಮತ್ತು ಹುಬ್ಬಳ್ಳಿ ಗ್ರಾಮೀಣ ಪೊಲೀಸರಿಂದ ತನಿಖೆ ನಡೆಯುತ್ತಿದೆ.
ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ ಮಂಡ್ಯ: ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿರುವ ಕಾಶಿವಿಶ್ವನಾಥ ದೇವಾಲಯದಲ್ಲಿ ಬೀಗ ಮುರಿದು ಶಿವಲಿಂಗ ಕಳ್ಳತನ ಮಾಡಲಾಗಿದೆ. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
(Accidents in Chikkaballapur and Raichur Four Dead)
ಇದನ್ನೂ ಓದಿ: ಬೈಕ್ ಅಡ್ಡ ಬಂದು ತಪ್ಪಿಸಲು ಹೋಗಿ ಅಪಘಾತವಾಯಿತು, ಮದ್ಯ ಸೇವಿಸಿರಲಿಲ್ಲ: ವಿನಯ್ ಕುಲಕರ್ಣಿ ಸೋದರ ವಿಜಯ್
ಇದನ್ನೂ ಓದಿ: ಡಿ.ಜೆ. ಹಳ್ಳಿ ಮಸೀದಿ ಆಡಳಿತ ಮಂಡಳಿ ವಿಚಾರವಾಗಿ ಮಚ್ಚು ಬೀಸಿದ ದುಷ್ಕರ್ಮಿಗಳು, ಕ್ಯಾಮೆರಾ ಮುಂದೆಯೇ ಕೊಲೆ
Published On - 9:05 pm, Tue, 13 April 21