ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೊವಿಡ್​-19 ರೋಗಿಗಳಿಗೆ ಲಭ್ಯವಿರುವ ಬೆಡ್​ಗಳೆಷ್ಟು?- ಬಿಬಿಎಂಪಿ ನೀಡುತ್ತಿದೆ ರಿಯಲ್ ಟೈಮ್ ಮಾಹಿತಿ

ಸದ್ಯ 1272 ಬೆಡ್​ಗಳು ಮಾತ್ರ ಖಾಲಿ ಇರುವುದರಿಂದ ಇನ್ನಷ್ಟು ಸಿದ್ಧಗೊಳಿಸುವ ಅನಿವಾರ್ಯತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ದಿನನಿತ್ಯ ದಾಖಲಾಗುವ ಕೊರೊನಾ ಕೇಸ್​ಗಳ ಪ್ರಮಾಣ ಮಿತಿಮೀರಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೊವಿಡ್​-19 ರೋಗಿಗಳಿಗೆ ಲಭ್ಯವಿರುವ ಬೆಡ್​ಗಳೆಷ್ಟು?- ಬಿಬಿಎಂಪಿ ನೀಡುತ್ತಿದೆ ರಿಯಲ್ ಟೈಮ್ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Apr 19, 2021 | 5:15 PM

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಬಗ್ಗೆ ಬಿಬಿಎಂಪಿ ತಿಳಿಸಿದೆ. ಯಾವ್ಯಾವ ಆಸ್ಪತ್ರೆಗಳಲ್ಲಿ ಎಷ್ಟೆಷ್ಟು ಬೆಡ್​ಗಳು ಲಭ್ಯ ಇವೆ.. ಎಷ್ಟರಲ್ಲಿ ರೋಗಿಗಳು ತುಂಬಿದ್ದಾರೆ ಎಂಬ ಬಗ್ಗೆ ರಿಯಲ್ ಟೈಮ್ ಮಾಹಿತಿ ನೀಡಿದೆ. ಈ ರಿಯಲ್ ಟೈಮ್ ಡ್ಯಾಶ್​ಬೋರ್ಡ್​ನಲ್ಲಿ ನೀಡಲಾದ ಅಂಕಿ-ಸಂಖ್ಯೆಯ ಅನ್ವಯ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಂದ ಕೊವಿಡ್​-19 ರೋಗಿಗಳಿಗಾಗಿ 1272 ಬೆಡ್​ಗಳು ಲಭ್ಯ ಇವೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳೂ ಸಹ ಶೇ.50 ರಷ್ಟು ಹಾಸಿಗೆಯನ್ನು ಕೊವಿಡ್​ 19 ರೋಗಿಗಳಿಗೆ ಮೀಸಲಿಡಬೇಕು ಎಂದು ಸರ್ಕಾರ ಆದೇಶಿಸಿದೆ. ಆದರೆ ಕೆಲವು ಖಾಸಗಿ ಆಸ್ಪತ್ರೆಗಳು ಈ ನಿಯಮ ಪಾಲನೆ ಮಾಡದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದರು. ಅದರ ಬೆನ್ನಲ್ಲೇ ಬಿಬಿಎಂಪಿ ಇದೀಗ ಬೆಡ್ ಲಭ್ಯತೆಯ ರಿಯಲ್​ ಟೈಮ್ ಮಾಹಿತಿಯನ್ನು ಬಿಡುಗಡೆ ಮಾಡಿದೆ.

ಬಿಬಿಎಂಪಿ ವೆಬ್​ಸೈಟ್​ನಲ್ಲಿ ಬಿಡುಗಡೆಯಾದ ಮಾಹಿತಿ ಅನ್ವಯ ಇಂದು ಮಧ್ಯಾಹ್ನ 3.30ರಹೊತ್ತಿಗೆ, ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 50ಬೆಡ್​ಗಳಷ್ಟೇ ಖಾಲಿ ಇವೆ. ಇಲ್ಲಿ 550ಹಾಸಿಗೆಗಳನ್ನು ಕೊವಿಡ್ ರೋಗಿಗಳಿಗೆ ಮೀಸಲಿಡಲಾಗಿತ್ತು. ಅದರಲ್ಲಿ 500 ಬೆಡ್​ಗಳು ಅದಾಗಲೇ ತುಂಬಿವೆ ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 833 ಬೆಡ್​ಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡಲಾಗಿತ್ತು. ಅದರಲ್ಲಿ 747 ಭರ್ತಿಯಾಗಿದ್ದು, 86 ಖಾಲಿ ಇವೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 577 ಬೆಡ್​ಗಳು ಖಾಲಿ ಇದ್ದು, ಇದೇ ಗರಿಷ್ಠ ಸಂಖ್ಯೆಯಾಗಿದೆ. ಈ ಖಾಸಗಿ ವೈದ್ಯಕೀಯ ಕಾಲೇಜುಗಳಿಂದ 2420 ಬೆಡ್​ಗಳನ್ನು ಇಡಲಾಗಿತ್ತು. ಅವುಗಳಲ್ಲಿ 1843 ತುಂಬಿವೆ. ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದ್ದ 1,787 ಹಾಸಿಗೆಗಳಲ್ಲಿ 1298 ಬೆಡ್​ಗಳು ಭರ್ತಿಯಾಗಿದ್ದು, 489 ಖಾಲಿ ಉಳಿದಿವೆ. ಹಾಗೇ ಸರ್ಕಾರಿ ಕೊವಿಡ್​-19 ಸೆಂಟರ್​ಗಳಲ್ಲಿ 70 ಹಾಸಿಗಳಷ್ಟೇ ಖಾಲಿ ಇವೆ. ಇಲ್ಲಿ ಒಟ್ಟು 576 ಬೆಡ್​ಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಈ ಡಾಟಾ ಒಂದೇ ತರ ಇರುವುದಿಲ್ಲ. ಹೆಚ್ಚುಕಡಿಮೆ ಆಗುತ್ತಿರುತ್ತದೆ. ಹಾಗೇ ಬಿಬಿಎಂಪಿ ಅದನ್ನು ಅಪ್​ಡೇಟ್ ಮಾಡಲಿದೆ.

ಸದ್ಯ 1272 ಬೆಡ್​ಗಳು ಮಾತ್ರ ಖಾಲಿ ಇರುವುದರಿಂದ ಇನ್ನಷ್ಟು ಸಿದ್ಧಗೊಳಿಸುವ ಅನಿವಾರ್ಯತೆ ಕಾಣುತ್ತಿದೆ. ಬೆಂಗಳೂರಿನಲ್ಲಿ ದಿನನಿತ್ಯ ದಾಖಲಾಗುವ ಕೊರೊನಾ ಕೇಸ್​ಗಳ ಪ್ರಮಾಣ ಮಿತಿಮೀರಿದೆ. ಈ ಮಧ್ಯೆ ಕೊರೊನಾ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗಳಿಗೆ ಬರುವುದು ಬೇಡ. ಮನೆಯಲ್ಲಿಯೇ ಐಸೋಲೇಟ್​ ಆಗಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡರೆ, ಆಕ್ಸಿಜನ್ ಅಗತ್ಯ ಇದ್ದರೆ ಆಸ್ಪತ್ರೆಗೆ ದಾಖಲಾಗಿ ಎಂದು ಕೂಡ ಸರ್ಕಾರದ ವತಿಯಿಂದ ಹೇಳಲಾಗುತ್ತಿದೆ.

ಇದನ್ನೂ ಓದಿ: ವೈಷ್ಣವಿ ಮಾಡಿದ ತಪ್ಪಿಗೆ ತಪ್ಪಲಿಲ್ಲ ಕಠಿಣ ಶಿಕ್ಷೆ; ಮನೆಯವರಿಗೆ ಸುಸ್ತೋ ಸುಸ್ತು

ಅಕ್ಕಪಕ್ಕದ ಜಿಲ್ಲೆಗಳಿಂದಲೂ ಶವಗಳು ಬೆಂಗಳೂರಿಗೆ ಬರುತ್ತಿರೋದು ಸಮಸ್ಯೆ ಆಗಿದೆ – ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ