ಸಿಎಂ BSY ನೈಟ್ ಕರ್ಫ್ಯೂ, ಲಾಕ್ಡೌನ್, ಸೀಲ್ಡೌನ್ ಘೋಷಿಸದೆ ಇರಲು ಇದಾ ಅಸಲಿ ಕಾರಣ?
ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಬೆಂಗಳೂರು: ಕಳೆದ 14 ದಿನಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಹೆಚ್ಚಾಗಿದೆ. ದೇವರ ದಯೆಯಿಂದ ಮರಣ ಪ್ರಮಾಣ ಕಡಿಮೆ ಇದೆ. ಆದರೆ, ಯಾವುದೇ ಕಾರಣಕ್ಕೂ ಜನ ಮೈಮರೆಯಬಾರದು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಇದೇ ವೇಳೆ ನೈಟ್ ಕರ್ಫ್ಯೂ, ಲಾಕ್ಡೌನ್ ಅಥವಾ ಸೀಲ್ಡೌನ್ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ ಎಂದು ಕೊವಿಡ್ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದರು.
ಜನರು ಸ್ವತಃ ಜಾಗೃತಿವಹಿಸಿ ಅಂತಹ ಕಠಿಣ ನಿರ್ಧಾರ ಕೈಗೊಳ್ಳದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದರು. ನಾವು ಕಠಿಣ ನಿಯಮ ಜಾರಿಗೊಳಿಸುವುದು ಬೇಡ ಎಂದೇ ಬಯಸುತ್ತೇವೆ. ಜನತೆಗೂ ಅದೇ ಬಯಕೆ ಇದ್ದರೆ ಅವರೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದರು.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಇಂದು ಸಿಎಂ ಯಡಿಯೂರಪ್ಪ ಸಭೆ ನಡೆಸಿದ್ದರು. ಈ ವೇಳೆ, ವೈದ್ಯರಾದ ಡಾ.ಮಂಜುನಾಥ, ಡಾ.ಸುದರ್ಶನ್ ಬಲ್ಲಾಳ್, ಡಾ.ರವಿ, ಡಾ.ಗಿರಿಧರ ಬಾಬುರವರು ಮುಖ್ಯಮಂತ್ರಿಗಳಿಗೆ ಕೆಲ ಸಲಹೆಗಳನ್ನು ನೀಡಿದ್ದರು.
ಇದೀಗ, ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಹೀಗಾಗಿ, ಸಭೆಯಲ್ಲಿ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ