AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್​ನಲ್ಲಿ ದೊಡ್ಡ ಮಟ್ಟಿನ ನಿರಾಳತೆ ಒದಗಿದೆ. ಪ್ರಕರಣ ಸಂಬಂಧ ಜನವರಿ 30ರ ವರೆಗೆ ಅವರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಹೇಳಿದೆ. ಹೈಕೋರ್ಟ್​ನಲ್ಲಿ ನಡೆದ ವಾದ ವಿವಾದದ ವಿವರ ಇಲ್ಲಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್
ಸಿಟಿ ರವಿ
Ramesha M
| Edited By: |

Updated on:Jan 23, 2025 | 3:07 PM

Share

ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್​​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.

ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

ಏನಿದು ಪ್ರಕರಣ?

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ಸಚಿವೆ ಹೆಬ್ಬಾಳ್ಕರ್ ಅವರನ್ನು ಅಶ್ಲೀಲವಾಗಿ ನಿಂದಿಸಿದ್ದಾರೆ ಎಂದು ಆರೋಪವಿದೆ. ಆದರೆ ಈ ಆರೋಪವನ್ನು ಸಿಟಿ ರವಿ ಅಲ್ಲಗಳದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

ಇದನ್ನೂ ಓದಿ: ಅವಾಚ್ಯ ಶಬ್ಧ ಬಳಕೆ ಕೇಸ್: ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿಟಿ ರವಿ ಕೋರ್ಟ್​ ಬಿಗ್ ಶಾಕ್!

ಘಟನೆ ರಾಜ್ಯದಾದ್ಯಂತ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಸಿಟಿ ರವಿ ಅವರನ್ನು ಬಂಧಿಸಿದ್ದ ಬೆಳಗಾವಿ ಪೊಲೀಸರು ರಾತ್ರಿ ಇಡೀ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಡಿಸಿದ್ದರು. ಈ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು. ಟಿ ರವಿ ಅವರನ್ನು ಎನ್​ಕೌಂಟರ್ ಮಾಡಲು ಸರ್ಕಾರ ಸಂಚು ಹೂಡಿತ್ತು ಎಂದು ಕೆಲವು ಮಂದಿ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Thu, 23 January 25