ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್
ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ವಜಾ ಮಾಡಲಾದ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮುರುಗೆಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. ಮುರುಗೆಪ್ಪನ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈತ ಹಲವು ಬಾರಿ ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಜೈಲು ಸೇರಿದ್ದನು.

ಬೆಂಗಳೂರು, ಫೆಬ್ರವರಿ 23: ಲೋಕಾಯುಕ್ತ (Lokayukta) ಡಿವೈಎಸ್ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ (Government Officers) ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ. ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಮುರುಗೆಪ್ಪ ವಿರುದ್ಧ ರಾಜ್ಯದ ವಿವಿಧ ಠಾಣೆಯಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.
ಆರೋಪಿ ಮುರುಗಪ್ಪ ಲೋಕಾಯುಕ್ತ ಹೆಸರಿನಲ್ಲಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದನು. ಲೋಕಾಯುಕ್ತ ಡಿವೈಎಸ್ಪಿ ಬಸವರಾಜು ಆರ್. ಮಗದಮ್ ನೀಡಿದ ದೂರಿನ ಆಧಾರದ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ತನಿಖೆಗೆ ಅರ್ಹವಲ್ಲ ಎಂದ ಲೋಕಾಯುಕ್ತ
ಆರೋಪಿ ಮುರುಗಪ್ಪ ಅಪರಿಚಿತ ನಂಬರ್ನಿಂದ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ, ಲೋಕಾಯುಕ್ತ ಡಿವೈಎಸ್ಪಿ ಅಂತ ಪರಿಚಯ ಮಾಡಿಕೊಳ್ಳುತ್ತಿದ್ದನು. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ ಹಾಕಲಾಗುತ್ತಿದೆ ಅಂತ ಬೆದರಿಕೆ ಹಾಕುತ್ತಿದ್ದನು. ನಿಮ್ಮ ವಿರುದ್ಧ ಪ್ರಕರಣ ದಾಖಲಿಸಬಾರದು ಎಂದರೇ ಹಣ ನೀಡಿ ಅಂತ ಡಿಮ್ಯಾಂಡ್ ಮಾಡುತ್ತಿದ್ದನು. ಇದೇ ರೀತಿ ಮುರುಗಪ್ಪ ಹಲವು ಸರ್ಕಾರಿ ಅಧಿಕಾರಿಗಳ ಬೆದರಿಸಿ ಹಣ ವಸೂಲಿ ಮಾಡಿದ್ದನು. ಇನ್ನು, ಬ್ಲ್ಯಾಕ್‌ಮೇಲ್ ಆರೋಪದ ಮೇಲೆ ಮುರುಗಪ್ಪ ಹಲವು ಬಾರಿ ಜೈಲು ಸೇರಿದ್ದನು. ಬಿಡುಗಡೆಯಾದ ಬಳಿಕ ಮತ್ತೆ ಲೋಕಾಯುಕ್ತ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:34 am, Sun, 23 February 25