Madal Virupakshappa: ಲೋಕಾಯುಕ್ತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ ಮಾಡಾಳ್ ವಿರೂಪಾಕ್ಷಪ್ಪ

|

Updated on: Mar 06, 2023 | 3:15 PM

ಲೋಕಾಯುಕ್ತ ಎಫ್ಐಆರ್ ರದ್ದು ಮಾಡುವಂತೆ ಮನವಿ ಮಾಡುವುದಕ್ಕೂ ಮುನ್ನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

Madal Virupakshappa: ಲೋಕಾಯುಕ್ತ ಎಫ್ಐಆರ್ ರದ್ದು ಕೋರಿ ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದ ಮಾಡಾಳ್ ವಿರೂಪಾಕ್ಷಪ್ಪ
ಮಾಡಾಳ್ ವಿರೂಪಾಕ್ಷಪ್ಪ
Follow us on

ಬೆಂಗಳೂರು: ಲಂಚ ಹಾಗೂ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರಿಗೆ ಬೇಕಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಇನ್ನೂ ತಲೆಮರೆಸಿಕೊಂಡೇ ಇದ್ದಾರೆ. ಅವರ ಬಂಧನಕ್ಕಾಗಿ ಲೋಕಾಯುಕ್ತ ಪೊಲೀಸರ ಶೋಧ ಮುಂದುವರಿದಿದೆ. ಈ ಮಧ್ಯೆ, ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಮಾಡಾಳ್ ಪರ ವಕೀಲರು ಸೋಮವಾರ ಹೈಕೋರ್ಟ್​ಗೆ (Karnataka High Court) ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಸುಳಿಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಅವರು ಇದೀಗ ಹೈಕೋರ್ಟ್​ ಮೊರೆಹೋಗಿದ್ದಾರೆ. ಮಾಡಾಳ್ ಅವರ ಪುತ್ರ ಪ್ರಶಾಂತ್ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದರು. ನಂತರ ಪ್ರಶಾಂತ್ ಹಾಗೂ ವಿರೂಪಾಕ್ಷಪ್ಪ ಅವರ ನಿವಾಸಗಳಲ್ಲಿ ಶೋಧ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ನಗದು, ಚಿನ್ನ, ಆಭರಣಗಳು ದೊರೆತಿದ್ದವು. ಇದರ ಬೆನ್ನಲ್ಲೇ ವಿರೂಪಾಕ್ಷಪ್ಪ ಹಾಗೂ ಅವರ ಮಕ್ಕಳ ಮೇಲೆ ಲೋಕಾಯುಕ್ತ ಪೊಲೀಸರು ಎಫ್​​ಐಆರ್ ದಾಖಲಿಸಿದ್ದರು. ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯಾಗಿ ಉಲ್ಲೇಖಿಸಲಾಗಿತ್ತು.

ಲೋಕಾಯುಕ್ತ ಎಫ್ಐಆರ್ ರದ್ದು ಮಾಡುವಂತೆ ಮನವಿ ಮಾಡುವುದಕ್ಕೂ ಮುನ್ನ ಅವರು, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಮಾಡಾಳ್​​ ವಿರೂಪಾಕ್ಷಪ್ಪ

ಲೋಕಾಯುಕ್ತ ದಾಳಿ ವಿಚಾರ ತಿಳಿದ ಬೆನ್ನಲ್ಲೇ ದಾವಣಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಶಾಸಕರು, ತಮ್ಮ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬುದರ ಅರಿವಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದರು.

ಮಾಡಾಳ್ ರಕ್ಷಿಸುವ ಪ್ರಶ್ನೆಯೇ ಇಲ್ಲ; ಬಿಎಸ್​ವೈ

ಭ್ರಷ್ಟಾಚಾರ ಯಾರೇ ಮಾಡಿದ್ದರೂ ಅದು ಅಕ್ಷಮ್ಯ ಅಪರಾಧ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು. ನಮ್ಮ ಪಕ್ಷ ಪ್ರಕರಣ ಮುಚ್ಚಿ ಹಾಕುವ ಕೆಲಸ ಮಾಡಿಲ್ಲ. ವಿರೂಪಾಕ್ಷಪ್ಪರನ್ನು ಬಂಧಿಸಿ ಕ್ರಮಕೈಗೊಳ್ಳಬೇಕು. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಂದು ಅಥವಾ ನಾಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗಬಹುದು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ತಿಳಿಸಿದ್ದಾರೆ.

ಏನಿದು ಪ್ರಕರಣ?

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿವೆ. ಈ ಮಧ್ಯೆ, ಕಳೆದ ವಾರ ಬೆಂಗಳುರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ