ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪುನೀತ್​ ಕೆರೆಹಳ್ಳಿ 14 ದಿನ ನ್ಯಾಯಾಂಗ ಬಂಧನ

|

Updated on: Jul 27, 2024 | 9:49 PM

ನಗರದಲ್ಲಿ ನಾಯಿ ಮಾಂಸ ಸೇಲ್ ಮಾಡಲಾಗುತ್ತಿದೆ ಎಂಬ ಆರೋಪ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ 2 ಕೇಸ್ ಜಡಿದು ಅರೆಸ್ಟ್ ಮಾಡಿದ್ದರು. ಇದೀಗ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪುನೀತ್​ ಕೆರೆಹಳ್ಳಿ 14 ದಿನ ನ್ಯಾಯಾಂಗ ಬಂಧನ
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಪುನೀತ್​ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ
Follow us on

ಬೆಂಗಳೂರು, ಜುಲೈ 27: ಹಿಂದೂ ಸಂಘಟನೆ ಮುಖಂಡ ಪುನೀತ್​ ಕೆರೆಹಳ್ಳಿ (Puneeth Kerehalli) ಜೈಲುಪಾಲಾಗಿದ್ದಾರೆ. 14 ದಿನ ನ್ಯಾಯಾಂಗ ಬಂಧನಕ್ಕೆ (Judicial custody) ನೀಡಿ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶರಿಂದ ಆದೇಶ ಹೊರಡಿಸಲಾಗಿದೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಿನ್ನೆ ಬಂಧಿಸಲಾಗಿತ್ತು. ಇಂದು ಎನ್​​ಜಿವಿಯಲ್ಲಿರುವ ನಿವಾಸದಲ್ಲಿ ಜಡ್ಜ್ ಮುಂದೆ​ ಪೊಲೀಸರು ಹಾಜರುಪಡಿಸಿದ್ದರು. ಸೋಮವಾರ ಜಾಮೀನು ಅರ್ಜಿ ಸಲ್ಲಿಸುವಂತೆ ಜಡ್ಜ್‌ ಸೂಚನೆ ನೀಡಿದ್ದಾರೆ.

ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಹೇಳಿದ್ದಿಷ್ಟು 

ಪುನೀತ್ ಕೆರೆಹಳ್ಳಿ ಪರ ವಕೀಲ ಉಮಾಶಂಕರ್ ಪ್ರತಿಕ್ರಿಯಿಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೇಸ್ ದಾಖಲಾಗಿತ್ತು. ಕಾಟನ್ ಪೇಟೆ ಪೊಲೀಸರು ಪುನೀತ್ ಬಂಧಿಸಿದ್ದರು. ಈಗ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ವಿಚಾರಣೆಗೆ ಬರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಯಿ ಮಾಂಸ ಮಾರಾಟ ಆರೋಪ: ಅಬ್ದುಲ್ ರಜಾಕ್​ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ, ಶ್ರೀನಿವಾಸ್

ನಗರದಲ್ಲಿ ನಾಯಿ ಮಾಂಸ ಸೇಲ್ ಮಾಡಲಾಗುತ್ತಿದೆ ಎಂಬ ಆರೋಪ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಜೈಪುರದಿಂದ ಬಂದಿದ್ದ ಲೋಡ್​ಗಟ್ಟಲೇ ಬಾಕ್ಸ್​ಗಳು ಶುಕ್ರವಾರ ಮೆಜೆಸ್ಟಿಕ್​ನಲ್ಲಿ ಅನ್​ಲೋಡ್ ಆಗ್ತಿದ್ದಂತೆ ಪುನೀತ್ ಕೆರೆಹಳ್ಳಿ ತಂಡ ದಾಳಿ ಮಾಡಿತ್ತು. ಬಾಕ್ಸ್​ಗಳಲ್ಲಿ ಇರುವುದು ನಾಯಿ ಮಾಂಸ. ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನೂ ಮಿಕ್ಸ್ ಮಾಡಿದ್ದಾರೆ ಅಂತ ಆರೋಪಿಸಿ, ಹೈಡ್ರಾಮಾ ಮಾಡಿದ್ದರು.

ಇದನ್ನೂ ಓದಿ: ನಾಯಿ ಮಾಂಸ ಸಾಗಾಟ ಪ್ರಕರಣ: ಠಾಣೆಯಲ್ಲಿ ಹಿಂದೂ ಮುಖಂಡ ಪುನೀತ್​ ಕೆರೆಹಳ್ಳಿ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್

ಈ ವೇಳೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹಾಗೂ ಪುನೀತ್ ಕೆರೆಹಳ್ಳಿ ನಡುವೆ ವಾಗ್ವಾದವೂ ನಡೆದಿತ್ತು. ಇದೇ ಪ್ರಕರಣ ಇದೀಗ ಪೊಲೀಸ್ ಠಾಣೆ ಹಾಗೂ ಆಹಾರ ಇಲಾಖೆಯ ಮೆಟ್ಟಿಲೇರಿದೆ. ರಸ್ತೆಯಲ್ಲಿ ಗಲಾಟೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ 2ಕೇಸ್ ಜಡಿದು ಅರೆಸ್ಟ್ ಮಾಡಿದ್ದರು. ಜೈಪುರದಿಂದ ಬಂದ ಬಾಕ್ಸ್​ಗಳ ಮೇಲೂ FIR ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Sat, 27 July 24