ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಉಪನ್ಯಾಸಕನಿಂದ ಅತ್ಯಾಚಾರ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಘಟನೆ ನಡೆದಿದೆ. ಶಿವಮೊಗ್ಗ ಮಹಿಳಾ ಪೊಲೀಸ್​​ ಠಾಣೆಗೆ ವಿದ್ಯಾರ್ಥಿನಿ ದೂರು ಹಿನ್ನೆಲೆ ಆರೋಪಿ ಉಪನ್ಯಾಸಕ​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ
ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Sep 01, 2024 | 10:03 PM

ಶಿವಮೊಗ್ಗ, ಸೆಪ್ಟೆಂಬರ್​ 01: ಉಪನ್ಯಾಸಕನಿಂದ ವಿದ್ಯಾರ್ಥಿನಿ (student) ಮೇಲೆ ಅತ್ಯಾಚಾರ ಆರೋಪ ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಸಾಗರ ಖಾಸಗಿ ಕಾಲೇಜಿನ ನಡೆದಿದೆ.  ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಉಪನ್ಯಾಸಕ ಪುನೀತ್ ವಿರುದ್ಧ ಆರೋಪಿಸಲಾಗಿದೆ. ಶಿವಮೊಗ್ಗ ಮಹಿಳಾ ಪೊಲೀಸ್​​ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪುನೀತ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿದ್ಯುತ್ ತಂತಿ ತಗುಲಿ ವೃದ್ದೆ ಸಾವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವೃದ್ದೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಪಾರ್ವತಮ್ಮ (67) ಮೃತ ದುರ್ದೈವಿ. ತೋಟದ ಪಂಪ್ ಸೆಟ್ಟಿನ ವಿದ್ಯುತ್ ವೈಯರ್ ಬೇಲಿಗೆ ಸುತ್ತಿಟ್ಟಿದ್ದ ಪರಿಣಾಮ ವಿದ್ಯುತ್ ಪ್ರವಹಿಸಿ ಬೇಲಿ ಮುಟ್ಟಿದಾಗ ಮಹಿಳೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್​ & ರನ್​ಗೆ ಪಾದಚಾರಿ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಹಿಟ್​ ಮತ್ತು ರನ್​ಗೆ ಪಾದಚಾರಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ನಡೆದಿದೆ. ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಮತ್ತೆ ಲವ್ ಜಿಹಾದ್ ಸದ್ದು: ವಿವಾಹಿತ ಹಿಂದೂ ಮಹಿಳೆ ಜತೆ ಓಡಿಹೋದ ಮುಸ್ಲಿಂ ವ್ಯಕ್ತಿ

ಕಾರು ಡಿಕ್ಕಿಯಾಗಿ 35 ವರ್ಷದ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಅಪಘಾತದ ‌ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾರೆ. ಕೆಂಪೇಗೌಡ ಏರ್​​​ಪೋರ್ಟ್​​ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಬಳಿ ನಡೆದಿದೆ. ಪರಶುರಾಮ(40), ಹನುಮಂತ(35) ಮೃತ ದುರ್ದೈವಿಗಳು.

ಇದನ್ನೂ ಓದಿ: 8 ಜನರ ಮುದ್ದಿನ ಹೆಂಡ್ತಿ: ಜೆಡಿಎಸ್ ಕಾರ್ಯಾಧ್ಯಕ್ಷೆಯ ಕರಾಳ ಮುಖವಾಡ ಬಯಲು!

ಮೃತರು ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಗಳು. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ