Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್​ ಸ್ವಾಮಿ ಮತ್ತೊಂದು ವಂಚನೆ: ನಿವೃತ್ತ ಮಹಿಳಾ ಜಡ್ಜ್​​ 8 ಕೋಟಿ ಕೊಟ್ಟು ವಿಶೇಷ ಹುದ್ದೆ ಬಯಸಿದ್ದರು!

ಕೇಂದ್ರ ಸರ್ಕಾರದ ಕಡೆಯಿಂದ ರಾಜ್ಯಪಾಲರಾಗಿ ನೇಮಕ ಮಾಡಿಸುವುದಾಗಿ ಯುವರಾಜ್ ಅಲಿಯಾಸ್ ಸ್ವಾಮಿಯಿಂದ ವಿಲ್ಸನ್ ಗಾರ್ಡನ್ ನಿವಾಸಿಯಾಗಿರುವ ನಿವೃತ್ತ ನ್ಯಾಯಾಧೀಶರಿಗೆ ವಂಚನೆ ಮಾಡಿರುವುದು ಈಗ ಬೆಳಕಿಗೆ ಬಂದಿದೆ.

ಯುವರಾಜ್​ ಸ್ವಾಮಿ ಮತ್ತೊಂದು ವಂಚನೆ: ನಿವೃತ್ತ ಮಹಿಳಾ ಜಡ್ಜ್​​ 8 ಕೋಟಿ ಕೊಟ್ಟು ವಿಶೇಷ ಹುದ್ದೆ ಬಯಸಿದ್ದರು!
ಯುವರಾಜ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 09, 2021 | 1:02 PM

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿಯ ವಂಚನೆ ಪ್ರಕರಣಗಳು ಇನ್ನಷ್ಟು ಬಹಿರಂಗವಾಗುತ್ತಿದೆ.

ಕೇಂದ್ರ ಸರ್ಕಾರದ ವತಿಯಿಂದ ರಾಜ್ಯಪಾಲರಾಗಿ ನೇಮಕ ಮಾಡಿಸುವುದಾಗಿ ಯುವರಾಜ್ ಅಲಿಯಾಸ್ ಸ್ವಾಮಿಯಿಂದ ವಿಲ್ಸನ್ ಗಾರ್ಡನ್ ನಿವಾಸಿಯಾಗಿರುವ ನಿವೃತ್ತ ನ್ಯಾಯಾಧೀಶರಿಗೆ ವಂಚನೆಯಾಗಿರುವುದು ಈಗ ಬೆಳಕಿಗೆ ಬಂದಿದೆ. ವಂಚನೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ನ್ಯಾಯಾಧೀಶರ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ.

8.8 ಕೋಟಿ ಹಣ ಪಡೆದು ಯುವರಾಜ್ ವಂಚಿಸಿದ್ದ.. ಸಿಸಿಬಿ ಎಸಿಪಿ ನಾಗರಾಜ್, ಇನ್ಸ್‌ಪೆಕ್ಟರ್ ಕೇಶವಮೂರ್ತಿ ಅವರಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ನಿವೃತ್ತ ನ್ಯಾಯಾಧೀಶರು ಅನಾರೋಗ್ಯದಿಂದ ಬಳಲುತಿದ್ದ ಕಾರಣದಿಂದಾಗಿ ಅವರ ಮನೆಗೇ ತೆರಳಿ ಹೇಳಿಕೆ ದಾಖಲಿಸಲಾಗಿದೆ. ಕೇಂದ್ರದಲ್ಲಿ ಉನ್ನತ ಹುದ್ದೆ ಕೊಡಿಸುವುದಾಗಿ ನಿವೃತ್ತ ನ್ಯಾಯಾಧೀಶರ ಬಳಿ ಸುಮಾರು 8.8 ಕೋಟಿ ಹಣ ಪಡೆದು ಯುವರಾಜ್ ವಂಚಿಸಿದ್ದ ಎಂದು ಹೇಳಿಕೆಯಿಂದ ತಿಳಿದುಬಂದಿದೆ.

ಯುವರಾಜ್ ಅಲಿಯಾಸ್ ಸ್ವಾಮಿ ವಂಚನೆಯ ಬಗ್ಗೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸಿಸಿಬಿ ಪೊಲೀಸರು ಇದೀಗ ಈ ಎಫ್ಐಆರ್ ಆಧಾರದಲ್ಲಿ ಹೇಳಿಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಆಧಿಕಾರಿಯೊಬ್ಬರ ಮೂಲಕ ಯುವರಾಜ್ ನನಗೆ ಪರಿಚಯವಾಗಿದ್ದು, ಬಿಜೆಪಿ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಯುವರಾಜ್ ನನಗೆ ನಂಬಿಸಿದ್ದಾನೆ ಎಂದು ಆ ನಿವೃತ್ತ ನ್ಯಾಯಾಧೀಶರು ಸಿಸಿಬಿಗೆ ಹೇಳಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮೂಲಕ ರಾಜ್ಯಪಾಲರ ಹುದ್ದೆ ಕೊಡಿಸುವ ಅಮಿಷವೊಡ್ಡಿದ್ದ ಬಗ್ಗೆ ಹಾಗೂ ಹಣ ಪಡೆದು ವಂಚನೆ ಎಸಗಿದ ಬಗ್ಗೆ ನಿವೃತ್ತ ನ್ಯಾಯಾಧೀಶರು ಯುವರಾಜ್ ವಂಚನೆ ಸಂಬಂಧ ವಿಸ್ತೃತವಾದ ಹೇಳಿಕೆ ದಾಖಲು ಮಾಡಿದ್ದಾರೆ.

ನಿವೃತ್ತ ನ್ಯಾಯಾಧೀಶರ ಹೇಳಿಕೆಯಲ್ಲಿ ಇರುವುದೇನು? ಯುವರಾಜ್ ಪ್ರಕರಣದಲ್ಲಿ ಮತ್ತೊಬ್ಬ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರೂ ಕೇಳಿಬಂದಿದೆ. ಮಂಗಳೂರು ಮೂಲದ ಆ ಅಧಿಕಾರಿ ಯಾರೆಂದ್ರೆ ಎಸ್ ಪಿ ಹುದ್ದೆಯಿಂದ ನಿವೃತ್ತಿ ಹೊಂದಿರುವ ಮಾಜಿ ಪೊಲೀಸ್ ಅಧಿಕಾರಿ ಪಾಪಯ್ಯ ಎಂಬುದಾಗಿ  ತಿಳಿದುಬಂದಿದೆ. ನ್ಯಾಯಾಧೀಶರ ಹೇಳಿಕೆ ವೇಳೆಯಲ್ಲಿ ಪಾಪಯ್ಯ ಹೆಸರು ಉಲ್ಲೇಖವಾಗಿದ್ದು, ವಿಚಾರಣೆ ವೇಳೆ ಆರೋಪಿ ಯುವರಾಜ್ ಸಹ ಮಾಜಿ ಪೊಲೀಸ್ ಅಧಿಕಾರಿ ಪಾಪಯ್ಯ ಅವರ ಹೆಸರನ್ನು ಹೇಳಿದ್ದಾನೆ.

ಇಬ್ಬರು ಸೇರಿ ಕೇಂದ್ರದ ಕೃಷಿ ಖಾತೆಯ ಗುಜರಾತ್ ರಾಜ್ಯ ಸಚಿವ‌, ಹಾಲಿ ರಾಜ್ಯಸಭಾ ಸದಸ್ಯ ಪುರುಷೋತ್ತಮ ರೂಪಾಲರನ್ನು ಭೇಟಿ ಮಾಡಿಸಿದ್ದರು. ಅಲ್ಲದೆ ಬೆಂಗಳೂರಿನಿಂದ ದೆಹಲಿಗೆ ಮೂರು ಬಾರಿ ಕರೆದುಕೊಂಡು ಹೋಗಿ ಭೇಟಿ ಮಾಡಿಸಿದ್ದರು. ಈ ವೇಳೆ ಹಂತ ಹಂತವಾಗಿ ಒಟ್ಟು ಎಂಟು ಕೋಟಿ ಎಂಬತ್ತು ಲಕ್ಷ ಹಣವನ್ನು ಯುವರಾಜ್ ವಸೂಲಿ ಮಾಡಿಕೊಂಡಿದ್ದಾನೆ ಎಂದು ನಿವೃತ್ತ ಜಡ್ಜ್​ ಸಿಸಿಬಿ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಒಟ್ಟು ಹಣದಲ್ಲಿ ಎರಡು ಕೋಟಿ ಎಪ್ಪತ್ತೈದು ಲಕ್ಷ ಹಣ ಪಾಪಯ್ಯಗೆ ನೀಡಿದ್ದಾಗಿ ಯುವರಾಜ್ ಹೇಳಿಕೆ ನೀಡಿದ್ದಾನೆ. ಆದರೆ ನಿವೃತ್ತ ಜಡ್ಜ್ ಅವರನ್ನು ಯುವರಾಜ್​ಗೆ ಪರಿಚಯ ಮಾಡಿಸಿದ್ದು ನಾನೇ. ಅದರೆ ಹಣದ ಬಗ್ಗೆ ನನಗೆ ಏನೂ ಗೊತ್ತಿಲ್ಲಾ ಎಂದು ಎಸ್ಪಿ ಪಾಪಯ್ಯ ಹೇಳಿದ್ದಾರೆ.

ರಾಧಿಕಾ ಕುಮಾರಸ್ವಾಮಿ-ಯುವರಾಜ್​ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಏನಂದ್ರು?

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ