6 ಮಂದಿ ಸಚಿವರು ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆಂದು ನನಗೆ ಗೊತ್ತಿಲ್ಲ: ದಿನೇಶ್ ಕಲ್ಲಹಳ್ಳಿ

ನಾನು ಅಕ್ರಮಕ್ಕೆ ಸಂಬಂಧಪಟ್ಟ ಮಾಹಿತಿ ಇದೆ ಅಂತಾ ಹೇಳಿದ್ದೆ. ಆದರೆ, ಇವರು ಯಾವ ಹಂತದಲ್ಲಿ ಯಾವ ವಿಚಾರಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ತಿಳಿದಿಲ್ಲ.

6 ಮಂದಿ ಸಚಿವರು ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆಂದು ನನಗೆ ಗೊತ್ತಿಲ್ಲ: ದಿನೇಶ್ ಕಲ್ಲಹಳ್ಳಿ
ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ
Follow us
TV9 Web
| Updated By: ganapathi bhat

Updated on:Apr 06, 2022 | 7:24 PM

ರಾಮನಗರ: ರಾಜ್ಯದ 6 ಮಂದಿ ಸಚಿವರು ಯಾವ ವಿಚಾರವಾಗಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಇಂದು (ಮಾರ್ಚ್ 6) ತಿಳಿಸಿದ್ದಾರೆ. ನಾನು ಅಕ್ರಮಕ್ಕೆ ಸಂಬಂಧಪಟ್ಟ ಮಾಹಿತಿ ಇದೆ ಅಂತಾ ಹೇಳಿದ್ದೆ. ಆದರೆ, ಇವರು ಯಾವ ಹಂತದಲ್ಲಿ ಯಾವ ವಿಚಾರಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಸಿಡಿ ಪ್ರಕರಣದ ಮೂಲಕ ಸುದ್ದಿಯಲ್ಲಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇಂದು ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ಸಂದರ್ಶನ ನೀಡಿದ್ದಾರೆ. ಆ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ಸಿಡಿ ವಿಚಾರವಾಗಿ ಸುಪ್ರೀಂ ಕೋರ್ಟ್ ವಕೀಲರ ಜತೆಗೆ ಚರ್ಚೆ ಮಾಡುತ್ತಿದ್ದೇನೆ. ನಮ್ಮ ವಕೀಲರು ಏನು ಸಲಹೆ ಕೊಡುತ್ತಾರೆ ಎಂದು ಕಾಯುತ್ತಿದ್ದೇನೆ. ನಂತರ ನಿಮಗೆ ತಿಳಿಸುತ್ತೇನೆ ಎಂದು ಕಲ್ಲಹಳ್ಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನನ್ನ ವಿರುದ್ಧ ಪ್ರತಿಭಟನೆ ಮಾಡುವವರು ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ನನ್ನ ತಕರಾರು ಏನು ಇಲ್ಲ. ತನಿಖೆ ಯಾವ ರೀತಿ ಆಗುತ್ತದೊ ಅದರ ಮೇಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ನಿಗದಿಯಾಗುತ್ತದೆ ಎಂದು ದಿನೇಶ್ ಕಲ್ಲಹಳ್ಳಿ ತಮ್ಮ ವಿರುದ್ಧದ ಅಭಿಪ್ರಾಯಗಳಿಗೆ ಉತ್ತರಿಸಿದ್ದಾರೆ. ತನಿಖೆ ಇನ್ನೂ ಪೂರ್ಣವಾಗಿಲ್ಲ. ಮೊದಲು ತನಿಖೆಯಾಗಲಿ. ಅಕ್ರಮದ ಬಗ್ಗೆ ಮಾಹಿತಿಯನ್ನು ನನ್ನ ವಕೀಲರ ಜತೆಗೆ ಚರ್ಚೆಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ದಿನೇಶ್ ಕಲ್ಲಹಳ್ಳಿ ಮನೆಯ ಬಳಿ, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಸರದಿ ಪ್ರಕಾರ ಪಾಯಿಂಟ್ ಕರ್ತವ್ಯಕ್ಕೆಂದು ಸಿಬ್ಬಂದಿ ನೇಮಿಸಿರುತ್ತಾರೆ ಹಾಗೂ ದಿನೇಶ್ ಕಲ್ಲಹಳ್ಳಿ ಅವರ ಭದ್ರತೆಗೆಂದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಒಬ್ಬರು ಎ.ಎಸ್.ಐ. ಮತ್ತು ಒಬ್ಬರು ಗನ್ ಮ್ಯಾನ್ ವ್ಯವಸ್ಥೆ ಮಾಡಿರುತ್ತಾರೆಂದು ತಿಳಿದುಬಂದಿದೆ.

ವಿಡಿಯೋದಲ್ಲಿ ಇರುವ ಮಹಿಳೆ ನನಗೆ ಪರಿಚಯವಿಲ್ಲ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 4 ಗಂಟೆಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿ ಹೊರಗೆ ಬಂದಿರುವ ದಿನೇಶ್​ ಕಲ್ಲಹಳ್ಳಿ, ಪೊಲೀಸರಿಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇನೆ. ತನಿಖೆಗೆ ಪೂರಕವಾಗಿ ಮಾಹಿತಿ ಕೊಟ್ಟಿದ್ದೀನಿ. ತನಿಖೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳಲು ಬರುವುದಿಲ್ಲ. ಮುಚ್ಚಿದ ಲಕೋಟೆಯಲ್ಲಿ ನನಗೆ ಕೊಟ್ಟ ಸಿಡಿಯನ್ನೇ ಪೊಲೀಸರಿಗೆ ಕೊಟ್ಟಿದ್ದೇನೆ. ಅವತ್ತು ಕೊಟ್ಟ ದೂರಿಗೆ ನಾನು ಬದ್ಧನಾಗಿದ್ದೇನೆ. ನನ್ನ ದೂರಿನಲ್ಲಿ ಮೊದಲ ದಿನವೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದೇನೆ. ಈ ಸಿಡಿಯ ಸತ್ಯಾಸತ್ಯತೆ ಬಯಲಿಗೆಳೆಯಿರಿ ಅಂತ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದರು.

ಆ ವಿಡಿಯೋದಲ್ಲಿ ಇರುವ ಮಹಿಳೆ ನನಗೆ ಪರಿಚಯವಿಲ್ಲ. ಆಕೆಯ ಕುಟುಂಬಸ್ಥರು ನನ್ನನ್ನು ಭೇಟಿ ಮಾಡಿದ್ದರು. ನನಗೆ ಯಾರು ಪರಿಚಯ ಅಂತ ಬಹಿರಂಗಪಡಿಸಲು ಆಗಲ್ಲ. ಎಫ್​ಐಆರ್ ಮಾಡ್ತಾರಾ ಇಲ್ವಾ ಅಂತ ಗೊತ್ತಿಲ್ಲ. ಪೊಲೀಸರು ತನಿಖೆ ಮಾಡ್ತೀವಿ ಅಂತ ಹೇಳಿದ್ದಾರೆ. ಕೆಲವು ವಿಷಯಗಳನ್ನು ಮಾಧ್ಯಮಗಳ ಮೂಲಕ ಹೇಳಲು ಆಗುವುದಿಲ್ಲ. ನನಗೆ ಗೊತ್ತಿರುವುದನ್ನು ಪೊಲೀಸರಿಗೆ ಹೇಳಿದ್ದೇನೆ ಎಂದು ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರಿಂದ ಸುದೀರ್ಘ ವಿಚಾರಣೆಯ ನಂತರ ಮಾಧ್ಯಮಗಳಿಗೆ ದಿನೇಶ್ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ಸಹಮತವಿದೆ. ಬ್ಲಾಕ್​ಮೇಲ್ ಆಗಿದೆ ಆಂದ್ರೆ ತನಿಖೆ ಆಗಲಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಕೇಸ್: ಕಬ್ಬನ್​ ಪಾರ್ಕ್ ಪೊಲೀಸರಿಗೆ ದಿನೇಶ್​ ಕಲ್ಲಹಳ್ಳಿ ಕೊಟ್ಟ ಹೇಳಿಕೆಯಲ್ಲಿ ಜೊಳ್ಳೇ ಜಾಸ್ತಿ

ಗಂಟೆಗಟ್ಟಲೆ ಹಾಕಿ ಪಂಚ್ ಮಾಡ್ತೀರಿ.. ನಿಮ್ಮ ಭಯಕ್ಕಾಗಿ ಕೋರ್ಟ್​​ಗೆ ಹೋಗುವಂತಾಯ್ತು: ಸಚಿವ ಶಿವರಾಂ ಹೆಬ್ಬಾರ್

Published On - 8:43 pm, Sat, 6 March 21

ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ