ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ: ಹೆಚ್​​​ಡಿ ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟುಹೋಗದಂತೆ ಆಗ್ರಹ

ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್​ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್​​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು‌ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ: ಹೆಚ್​​​ಡಿ ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟುಹೋಗದಂತೆ ಆಗ್ರಹ
ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 22, 2024 | 7:44 PM

ರಾಮನಗರ, ಮಾರ್ಚ್​ 22: ಮಂಡ್ಯ ಕ್ಷೇತ್ರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸ್ಪರ್ಧೆ ಸಾಧ್ಯತೆ ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಯನ್ನು ಮುಖಂಡರು, ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದಾರೆ. ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್​ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್​​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು‌ ಬಿಡುವುದಿಲ್ಲ ಎಂದು ಹೇಳಿದ್ದಾರೆ. JDS ಕಾರ್ಯಕರ್ತರ ಮಾತಿಗೆ ನಿಖಿಲ್ ಕುಮಾರಸ್ವಾಮಿ ತಲೆದೂಗಿದ್ದಾರೆ.

ಡಾ.ಮಂಜುನಾಥ್ ಅವರ ಗೆಲುವು ನಿಶ್ಚಿತ ಎಂದ ನಿಖಿಲ್ ಕುಮಾರಸ್ವಾಮಿ

ಬಳಿಕ ಮಾತನಾಡಿ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಇಂದು ಕುಣಿಗಲ್​​ನಲ್ಲಿ ಸಭೆ ಮಾಡಿ ಈಗ ಚನ್ನಪಟ್ಟಣ ಕಾರ್ಯಕರ್ತರ ಸಭೆ ಮಾಡ್ತಿದ್ದೇನೆ. ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಡಾ.ಮಂಜುನಾಥ್ ಸರಳ, ಸಜ್ಜನಿಕೆಯ ವ್ಯಕ್ತಿ. ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಗೇಮ್​ ಚೇಂಜ್​, ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

ಮುಂದಿನ ತಿಂಗಳು ದಿನಾಂಕ 1ರ ಒಳಗೆ ಚುನಾವಣಾ ಕಾರ್ಯಕ್ರಮಗಳಲ್ಲಿ ಕುಮಾರಣ್ಣ ಭಾಗಿಯಾಗುತ್ತಾರೆ. ಡಾ.ಮಂಜುನಾಥ್ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ ವಿಚಾರ ಭಾನುವಾರ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ. ಬಳಿಕ ಈ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಪುಟ್ಟರಾಜು ಮನಸ್ಸಿನ ಭಾವನೆ ಹೇಳಿದ್ದಾರೆ

ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಿನ್ನೆ ಸಿ.ಎಸ್.ಪುಟ್ಟರಾಜು ಹೇಳಿದ್ದನ್ನು ಗಮನಿಸಿದ್ದೇನೆ. ಅವರು ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಹೆಚ್​ಡಿ ದೇವೇಗೌಡ ಮತ್ತು ಪಕ್ಷದ ನಾಯಕರು ತೀರ್ಮಾನಿಸಿಲ್ಲ. ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಪಡೆಯಬೇಕು. ಎಲ್ಲರ ಜೊತೆಗೂ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಷಯವೊಂದರ ಮೇಲೆ ಒಂದೇ ವೇದಿಕೆಯಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬೇರೆ ಬೇರೆ ಹೇಳಿಕೆ ನೀಡುತ್ತಾರೆ: ನಿಖಿಲ್ ಕುಮಾರಸ್ವಾಮಿ

ಯಾರೇ ನಿಂತ್ರೂ ಕುಮಾರಣ್ಣನೇ ಅಭ್ಯರ್ಥಿ ಅನ್ನೋದು ನಮ್ಮ ಭಾವನೆ. ಅವರ ಮೇಲೆ ಮಂಡ್ಯ ಜಿಲ್ಲೆ ಜನತೆ ಪ್ರೀತಿ, ಭರವಸೆ ಇಟ್ಟಿದ್ದಾರೆ. ಚನ್ನಪಟ್ಟಣ, ರಾಮನಗರ ಜನರ ಅಭಿಪ್ರಾಯ ಪಡೆದು ತೀರ್ಮಾನ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:11 pm, Fri, 22 March 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?