ಆರೋಪಿ ದರ್ಶನ್​ ಕೇಸ್: SSP ಪ್ರಸನ್ನಕುಮಾರನ್ನ ಬದಲಾವಣೆ ಮಾಡಿದರೂ ತಪ್ಪಿಲ್ಲ; ಪರಮೇಶ್ವರ್

|

Updated on: Jun 19, 2024 | 1:44 PM

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್‌ ಹೆಸರು ಬರಬಾರದೆಂದು ಡಿ ಗ್ಯಾಂಗ್‌ ಆರೋಪಿಗಳು ಸಖತ್‌ ಕ್ರಿಮಿನಲ್‌ ಮೈಂಡ್‌ ಓಡಿಸಿದ್ದರು. ಪೊಲೀಸರ ಖಡಕ್‌ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್‌ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್‌ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಈ ಅನುಮಾನಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ್​ ಅವರ ಹೇಳಿಕೆ ಪುಷ್ಠಿ ನೀಡುವಂತಿದೆ.

ಆರೋಪಿ ದರ್ಶನ್​ ಕೇಸ್: SSP ಪ್ರಸನ್ನಕುಮಾರನ್ನ ಬದಲಾವಣೆ ಮಾಡಿದರೂ ತಪ್ಪಿಲ್ಲ; ಪರಮೇಶ್ವರ್
ಗೃಹ ಸಚಿವ ಜಿ ಪರಮೇಶ್ವರ್​
Follow us on

ಬೆಂಗಳೂರು, ಜೂನ್​ 19: ಆರೋಪಿ ದರ್ಶನ್ (Accused Darshan)​ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರ ವಕೀಲ ​ಎಸ್​ಪಿಪಿ ಪ್ರಸನ್ನಕುಮಾರ್ (SPP Prasanna Kumar)​ ಅವರನ್ನು ಬದಲಾವಣೆ ಮಾಡಿದರೂ ತಪ್ಪಿಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ್ (G Pameshwara) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಸ್​ಪಿಪಿ ಬದಲಾವಣೆ ಆಗಬೇಕಾದರೂ ಒಂದು ಕಾರಣ ಇರಲಿದೆ. ಮುಖ್ಯಮಂತ್ರಿಗಳಾಗಲಿ ಅಥವಾ ನಾನಾಗಲಿ, ಕಾನೂನು ಸಲಹೆ ಪಡೆದು ನಿರ್ಧಾರ ತೀರ್ಮಾನಿಸುತ್ತೇವೆ. ಯಾರನ್ನೇ ನೇಮಿಸಿದರೂ ಕಾನೂನು ಪ್ರಕಾರವೇ ಮಾಡಬೇಕು ಎಂದು ಹೇಳಿದರು.

ದರ್ಶನ್ ತಪ್ಪೊಪ್ಪಿಕೊಂಡಿರುವುದರ ಬಗ್ಗೆ ನನಗೆ ಗೊತ್ತಿಲ್ಲ. ನಾವು ಪ್ರಕರಣವನ್ನು ಯಾವುದೇ ಕಾರಣಕ್ಕೂ ಸಡಿಲ ಮಾಡಲ್ಲ. ಅಂತಹ ಚಿಂತನೆ ಕೂಡ ಸರ್ಕಾರದ ಮುಂದೆ ಇಲ್ಲ. ಯಾವುದೇ ಮುಲಾಜು, ಒತ್ತಡ ಇಲ್ಲದೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ದರ್ಶನ್ ಮ್ಯಾನೇಜರ್ ನಾಪತ್ತೆ ಬಗ್ಗೆ ಯಾವ ಮಾಹಿತಿ ಬಂದಿಲ್ಲ. ದರ್ಶನ್ ಇದರಲ್ಲಿ ಭಾಗಿಯಾಗಿದ್ದರೆ ಅದಕ್ಕೆ ಸರ್ಕಾರ ಕೂಡ ತನಿಖೆಗೆ ಅನುಮತಿ ಕೊಡಲಿದೆ. ಏನು ‌ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರ ಪ್ರತಿಭಟನೆಗೆ ಏನು ಕ್ರಮ ತಗೆದುಕೊಳ್ಳಬೇಕು ತೆಗೆದುಕೊಳ್ಳುತ್ತೇವೆ. ಪ್ರತಿಭಟನೆ ಮಾಡುವುದಕ್ಕೆ ಬೇಡ ಅನ್ನಲ್ಲ, ಅದು ಅವರ ಹಕ್ಕು. ಆದರೆ ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ ಲಾಠಿ ಚಾರ್ಜ್ ಮಾಡುತ್ತೇವೆ. ರಸ್ತೆಗೆ ಇಳಿದು ಪ್ರತಿಭಟನೆ ಮಾಡ್ತೇವೆ ಅಂದರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರು ಅನುಮತಿ ಕೊಟ್ಟರೆ ಮಾತ್ರ ಪ್ರತಿಭಟನೆ ಮಾಡಬಹುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ದರ್ಶನ್‌ ರಕ್ಷಣೆಗೆ ನಡೆಯುತ್ತಿದೆಯಾ ತೆರೆಮರೆ ಕಸರತ್ತು, ಎಸ್​​ಪಿಪಿ ಪ್ರಸನ್ನಕುಮಾರ್​ ಬದಲಾವಣೆಗೆ ಚಿಂತನೆ!

ಈಗಾಗಲೇ ತೈಲ ದರ ಹೆಚ್ಚಳ ಆದೇಶ ಹೊರಡಿಸಿದ್ದೇವೆ. ಜನರು ಸಹ ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ಳುತ್ತಿದ್ದಾರೆ. ನೆರೆ ರಾಜ್ಯದವರು ನಮ್ಮಲ್ಲಿ ಬಂದು ಹಾಕಿಸಿಕೊಳ್ಳುತ್ತಿದ್ದಾರೆ. ನೀರು, ಬಸ್ ದರ ಏರಿಕೆ ಬಗ್ಗೆ ಆಯ ಇಲಾಖೆ ನಿರ್ಧಾರ ಮಾಡುತ್ತೆ. ಹೀಗಾಗಿ ಇಲಾಖೆ ಸಚಿವರು ಗಮನಿಸ್ತಾರೆ. ನಮಗೆ ದೂರು ಬಂದರೆ, ಆ ಬಳಿಕ ನಾನು ಕ್ರಮ ವಹಿಸುತ್ತೇನೆ ಎಂದರು.

ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಅದನ್ನ ಬಿಜೆಪಿಯವರು ಸಾಬೀತುಪಡಿಸಲಿ. ಸಿಬಿಐಗೆ ಕೊಡಿ ಅಂತ‌ ಕೂಗಾಡುತ್ತಿದ್ದರು, ಈಗ ಸಿಬಿಐ ಕೂಡ ಪ್ರಕರಣದ ತನಿಖೆ ನಡೆಸುತ್ತಿದೆ. ಬ್ಯಾಂಕ್​ನವರು ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣ ತನಿಖೆ ನಡೆಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ