ಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜ ಕುಮಾರ್​ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ.

ಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ
ಕುಮಾರ್ ಬಂಗಾರಪ್ಪ, ಶಿವರಾಜ್​ ಕುಮಾರ್​
Follow us
ವಿವೇಕ ಬಿರಾದಾರ
|

Updated on:Jun 08, 2024 | 2:42 PM

ಬೆಂಗಳೂರು, ಜೂನ್​ 08: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga Lok Sabha Constituency) ಗೀತಾ ಶಿವರಾಜಕುಮಾರ್ (Geeta Shivarajkumar) ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ (Shivarajkumar)​ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ (Kumar Bangarppa) ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜಕುಮಾರ್​ ಪತ್ನಿ ಗೀತಾ ಶಿವರಾಜಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಚುನಾವಣೆ 2024 ಫಲಿತಾಂಶ: ಬಿವೈ ರಾಘವೇಂದ್ರ ಗೆಲುವು, ಗೀತಾಗೆ ಸೋಲು

ಕುಮಾರ್​ ಬಂಗಾರಪ್ಪ ಫೋಸ್ಟ್​ನಲ್ಲಿ ಏನಿದೆ?

ಕುಮಾರ್ ಬಂಗಾರಪ್ಪ ಫೇಸ್​ಬುಕ್​ನಲ್ಲಿ ಪೋಸ್ಟ್, ತಮ್ಮ ಸಹೋದರ ಮಧು ಬಂಗಾರಪ್ಪ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಟೀಕಿಸಿರುವ ಜೊತೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಲಘುವಾಗಿ ಬರೆದಿದ್ದರು. “ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು” ಎಂದಿದ್ದರು.

ಅಷ್ಟಕ್ಕೆ ಸುಮ್ಮನಾಗದೆ, “ನನ್ನ ತಂಗಿ (ಗೀತಾ ಶಿವರಾಜ್ ಕುಮಾರ್) ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಎಚ್ಚರಿಕೆಯನ್ನು ಸಹ ಕೊಟ್ಟಿದ್ದರು.

ಕುಮಾರ್​ ಬಂಗಾರಪ್ಪ ಅವರ ಈ ಫೋಸ್ಟ್​​ನಿಂದ ಆಕ್ರೋಶಗೊಂಡಿರುವ ಶಿವಣ್ಣ ಅಭಿಮಾನಿಗಳು, ಕುಮಾರ ಬಂಗಾರಪ್ಪ ಅವರ ನಿವಾಸದ ಗೇಟ್ ಒಳಗೆ ನುಗ್ಗಿ ದಿಕ್ಕಾರ ಕೂಗಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯಿಂದ ಹೊರಗೆ ಹೋಗುವಂತೆ ಮನವಿ ಮಾಡಿದರು. ಈ ವೇಳೆ ಅಭಿಮಾನಿಗಳು ಮತ್ತು ಪೊಲೀಸರ ಮಾತಿನ ಚಕಮಕಿ ಏರ್ಪಟ್ಟಿತು.

“ಶಿವರಾಜಕುಮಾರ್ ಅವರ ಬಗ್ಗೆ ರಾಜಕುಮಾರ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಇದು ನಮಗೆ ನೋವಾಗಿದೆ. ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಹೇಳಿ” ಎಂದು ಅಭಿಮಾಬಿಗಳು ಒತ್ತಾಯಿಸಿದರು. ಪೊಲೀಸರು ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Sat, 8 June 24

ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಬಿಜೆಪಿ ಶಾಸಕ ಪ್ರಭು ಚವ್ಹಾಣ್​ಗೆ ಮಹಾರಾಷ್ಟ್ರ ಶಿವಸೇನೆ ಪುಂಡರಿಂದ ಕಿರಿಕ್
ಯತ್ನಾಳ್ ಹೆಸರೇಳದೆ ನಾಯಿ-ಕುರಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಕಾಶಪ್ಪನವರ್
ಯತ್ನಾಳ್ ಹೆಸರೇಳದೆ ನಾಯಿ-ಕುರಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಕಾಶಪ್ಪನವರ್
ಅವಿವಾಹಿತ ಜಯಣ್ಣ ನಾಳೆ ಗೃಹಪ್ರವೇಶ ಕಾರ್ಯಕ್ರಮ ಇಟ್ಟುಕೊಂಡಿದ್ದರು!
ಅವಿವಾಹಿತ ಜಯಣ್ಣ ನಾಳೆ ಗೃಹಪ್ರವೇಶ ಕಾರ್ಯಕ್ರಮ ಇಟ್ಟುಕೊಂಡಿದ್ದರು!