AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ

Shanaya Katwe: ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ
ಸಾಂದರ್ಭಿಕ ಚಿತ್ರ
ಮದನ್​ ಕುಮಾರ್​
| Edited By: |

Updated on:Apr 23, 2021 | 11:25 AM

Share

ಹುಬ್ಬಳ್ಳಿ: ಪ್ರೀತಿಗೆ ಅಡ್ಡ ಬಂದ ಯುವತಿಯ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆಗೆ ಹೊಸ ಟ್ವಿಸ್ಟ್​ ಸಿಗುತ್ತಿದೆ. ಏ.12ರಂದು ಹುಬ್ಬಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯಾದ ವ್ಯಕ್ತಿಯ ಸಹೋದರಿಯೇ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆ ಮೂಲಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕೊಲೆ ಹಿಂದಿನ ರಹಸ್ಯಗಳೆಲ್ಲ ಹೊರಬರುತ್ತಿವೆ.

ಮಾಡೆಲ್​ ಆಗಿ ಗುರುತಿಸಿಕೊಂಡಿರುವುದೂ ಅಲ್ಲದೆ, ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಶನಾಯ ಕಾಟವೆ ಈಗ ಪೊಲೀಸರ ಅತಿಥಿ ಆಗಿರುವ ಯುವತಿ. ಶನಾಯ ಮತ್ತು ನಿಯಾಜ್​ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಶನಾಯ ಸಹೋದರ ರಾಕೇಶ್​ ಅಡ್ಡಿಪಡಿಸಿದ್ದ. ಹಾಗಾಗಿ ನಿಯಾಜ್​ ತನ್ನ ಸಹಚರರೊಂದಿಗೆ ಸೇರಿ ರಾಕೇಶ್​ನನ್ನು ಹತ್ಯೆ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಶನಾಯ ಕೂಡ ಭಾಗಿ ಆಗಿರುವ ಬಗ್ಗೆ ಶಂಕೆ ವ್ಯಕ್ತಿವಾಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ. ಯಾವುದೇ ಸುಳಿವು ನೀಡಬಾರದು ಎಂಬ ಕಾರಣಕ್ಕೆ ರಾಕೇಶ್​ ಮೃತದೇಹದ ರುಂಡ-ಮುಂಡ ಕತ್ತರಿಸಲಾಗಿತ್ತು. ಕೊಲೆ ನಂತರ ಶನಾಯ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಆದರೆ ಈಗ ಈ ನಟಿ ಕಮ್​ ಮಾಡೆಲ್​ ಖಾಕಿ ಬೆಲೆಗೆ ಬಿದ್ದಿದ್ದಾಳೆ.

ಭೀಕರವಾಗಿ ನಡೆದ ಈ ಕೊಲೆಯ ಹಿಂದಿನ ರಹಸ್ಯವನ್ನು ಭೇದಿಸಲು 5 ತಂಡಗಳನ್ನು ಪೊಲೀಸರು ರಚಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಈ ವಿವರಗಳು ಸಿಕ್ಕಿವೆ. ಕೇಸ್​ಗೆ ಸಂಬಂಧಿಸಿದಂತೆ ನಿಯಾಜ್​, ಶನಾಯ, ಮಲ್ಲಿಕ್, ಫಿರೋಜ್, ಸೈಫುದ್ದೀನ್ ಬಂಧನಕ್ಕೆ ಒಳಗಾಗಿದ್ದಾರೆ. ಪೊಲೀಸ್​ ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ

(Actress Shanaya Katwe arrested in brother murder case in Hubballi)

Published On - 10:30 am, Fri, 23 April 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ