Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳ ಸೇರ್ಪಡೆ: ಸರ್ಕಾರ ಆದೇಶ

ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು, ವಿಜಯಪುರ ಜಿಲ್ಲೆಯ ತಿಕೋಟಾ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ ಕಂದಾಯ‌ ಇಲಾಖೆಯಿಂದ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ.

ಬರಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳ ಸೇರ್ಪಡೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರImage Credit source: en.m.wikipedia
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Nov 04, 2023 | 6:27 PM

ಬೆಂಗಳೂರು, ನವೆಂಬರ್​​​​ 04: ಬರಪೀಡಿತ (drought) ತಾಲೂಕುಗಳ ಪಟ್ಟಿಗೆ ಮತ್ತೆ 7 ತಾಲೂಕುಗಳನ್ನು ಸೇರ್ಪಡೆ ಮಾಡುವ ಮೂಲಕ ಕಂದಾಯ‌ ಇಲಾಖೆಯಿಂದ ಶನಿವಾರ ಅಧಿಕೃತ ಆದೇಶ ಹೊರಡಿಸಿದೆ. ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು, ವಿಜಯಪುರ ಜಿಲ್ಲೆಯ ತಿಕೋಟಾ ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳಹಾನಿ ಸಮೀಕ್ಷೆ ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೊಸದಾಗಿ 07 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: ಈ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸಿಎಂಗೆ ಪತ್ರ ಬರೆದ ಎಂಬಿ ಪಾಟೀಲ್​

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರು ಪ್ರಸ್ತಾವನೆಯಲ್ಲಿ ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರಲ್ಲಿ ಬರ ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳನ್ನು ಹಂತ-1ರಲ್ಲಿ ಕಡ್ಡಾಯ ಮಾನದಂಡಗಳಾದ ಮಳೆ ಕೊರತೆ (ಶೇ.60ಕ್ಕಿಂತ ಹೆಚ್ಚು) ಅಥವಾ ಸತತ ಮೂರು ವಾರಗಳ ಅಥವಾ ಅದಕ್ಕಿಂತ ಹೆಚ್ಚು ಶುಷ್ಕ ವಾತಾವರಣ ಕಂಡು ಬಂದಿರಬೇಕು.

ಹಂತ-2 ರಲ್ಲಿ ತತ್ಪರಿಣಾಮ ಮಾನದಂಡಗಳಾದ ಕೃಷಿ ಬಿತ್ತನೆ ಪ್ರದೇಶ, ಉಪಗ್ರಹ ಆಧಾರಿತ ಬೆಳೆ ಆರೋಗ್ಯ ಸೂಚ್ಯಂಕ ತೇವಾಂಶ ಕೊರತೆ ಹಾಗೂ ನದಿಗಳಲ್ಲಿನ ಹರಿವು ಜಲಾಶಯಗಳ ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟ ಸೂಚ್ಯಂಕಗಳಲ್ಲಿನ ತೀವ್ರತೆಯನ್ನು ಆಧರಿಸಿ ಹೆಚ್ಚುವರಿಯಾಗಿ 07 ತಾಲ್ಲೂಕುಗಳು ಬರ ಪರಿಸ್ಥಿತಿ ಉದ್ಭವಿಸಿರುವ ತಾಲ್ಲೂಕುಗಳೆಂದು ಗುರುತಿಸಲಾಗಿದೆ.

ಇದನ್ನೂ ಓದಿ: ಗದಗ: ಭೀಕರ ಬರಕ್ಕೆ ಬರಡಾದ ಅನ್ನದಾತನ ಬದುಕು! ಬರಗಾಲ ಘೋಷಣೆ ಮಾಡಿ ಸರ್ಕಾರ ಗಪ್ ಚುಪ್; ನೇಗಿಲಯೋಗಿ ವಿಲವಿಲ

ವಿಜಯಪುರ ಜಿಲ್ಲೆಯ ತಿಕೋಟ ತಾಲೂಕು ಬರ ಪೀಡಿಯ ತಾಲೂಕಾಗಿ ಘೋಷಣೆ ಮಾಡಲಾಗಿದೆ. ತಿಕೋಟಾ ತಾಲೂಕು ಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನ ಬರ ಪೀಡಿತ ತಾಲೂಕು ಅಂತ ಘೋಷಣೆ ಮಾಡಲಾಗಿತ್ತು. ವಿಜಯಪುರ ಜಿಲ್ಲೆಯ 13 ತಾಲೂಕು ಪೈಕಿ 12 ತಾಲೂಕುಗಳನ್ನ ಬರ ಪೀಡಿತ ಅಂತ ಘೋಷಣೆ ಮಾಡಲಾಗಿತ್ತು. ಈಗ ಸರ್ಕಾರದಿಂದ ತಿಕೋಟ ತಾಲೂಕು ಅಂತಾ ಘೋಷಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಹೆಚ್ಚುವರಿಯಾಗಿ ಘೋಷಣೆಯಾದ ಪಟ್ಟಿಯಲ್ಲಿ ತಿಕೋಟವನ್ನು ಸರ್ಕಾರ ಪರಿಗಣಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:27 pm, Sat, 4 November 23

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ