ಗೌರಿ ಗಣೇಶ ಹಬ್ಬಕ್ಕೆ ಅನುಮತಿ ವಿಚಾರ: ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಯೋಜಕರಿಗೆ ಅನುಮತಿ; ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ

ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಯೋಜಕರಿಗೆ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸುತ್ತೋಲೆ ಹೊರಡಿಸಿದ್ದಾರೆ.

ಗೌರಿ ಗಣೇಶ ಹಬ್ಬಕ್ಕೆ ಅನುಮತಿ ವಿಚಾರ: ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಆಯೋಜಕರಿಗೆ ಅನುಮತಿ; ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುತ್ತೋಲೆ
ಗಣೇಶ
Edited By:

Updated on: Aug 23, 2022 | 7:50 PM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಗೌರಿ ಗಣೇಶ ಹಬ್ಬಕ್ಕೆ (Ganesh Chaturthi) ಆಯೋಜಕರಿಗೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸುತ್ತೋಲೆ ಹೊರಡಿಸಿದ್ದಾರೆ. ಗಣೇಶ ವಿಗ್ರಹ ಸ್ಥಾಪನೆಗೆ ಏಕಗವಾಕ್ಷಿ ಅಡಿಯಲ್ಲಿ ಪರವಾನಗೆ ನೀಡಲಾಗುತ್ತದೆ. ಕಾರ್ಯಕ್ರಮ ಆಯೋಜಕರು ಮುಂಚಿತವಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಅರ್ಜಿಯನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ ಮೂರು ದಿನಗಳಲ್ಲಿ ನಿಯಮಾನುಸಾರ ಪರವಾನಿಗೆ ನೀಡಬೇಕು. ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕೋರ್ಟ್ ನಿರ್ದೇಶನ ಮತ್ತು ಸರ್ಕಾರಿ ಇಲಾಖೆಗಳ ಸೂಚನೆ ಪಾಲನೆ ಬಗ್ಗೆ ಮುಚ್ಚಳಿಕೆ ಪಡೆಯಬೇಕು. ಅಗತ್ಯವಿರುವ ಕಡೆ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಬೇಕು. ಹೈ ಟೆನ್ಷನ್ ತಂತಿ ಹಾದು ಹೋಗಿರುವ ಕಡೆ ಅನುಮತಿ ನಿರ್ಬಂಧಿಸಬೇಕೆಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ , ಎಸ್ಪಿ ಮತ್ತು‌ ಪೊಲೀಸ್ ಆಯುಕ್ತರಿಗೆ ಸುತ್ತೋಲೆ ರವಾನೆ ಮಾಡಿದ್ದಾರೆ.

ನಿಯಮಗಳು
1. ಗಣೇಶ ಪ್ರತಿಷ್ಟಾಪನೆಗೆ ಅಗತ್ಯವಿರುವ ಸ್ಥಳ: ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ಪರವಾನಿಗೆಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕದಳ ಮತ್ತು ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಗಣೇಶ ವಿಗ್ರಹ ಸ್ಥಾಪನೆಗೆ ಅಗತ್ಯವಿರುವ ಪರವಾನಗಿಯನ್ನು ಏಕಗವಾಕ್ಷಿ ಅಡಿಯಲ್ಲಿ ನೀಡಲು ಸೂಕ್ತ ಕ್ರಮ ವಹಿಸುವುದು.

2. ಎಲ್ಲಾ ನಗರ ಸಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ, ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ವ್ಯಾಪಿಸಿ ಪ್ರಚುರ ಪಡಿಸುವುದು.

3. ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಕಾಲಕಾಲಕ್ಕೆ ಮಾತ್ರ ಮಾನ್ಯ ನ್ಯಾಯಲಯದ ನಿರ್ದೇಶನಗಳನ್ನು ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಂದ ನೀಡಿರುವ ಸೂಚನೆಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆಯನ್ನು ಪಡೆಯುವುದು.

4.ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ, ಆಯೋಜಕರಿಂದ ಖಾತರಿಪಡಿಸಿಕೊಳ್ಳುವುದು, ಅಗತ್ಯವಿರುವ ಕಡ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.

5.ವಿಶೇಷವಾಗಿ ಹೈ-ಟೆನ್ಸನ್ ತಂತಿ ಹಾದು ಹೋಗಿರುವ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ, ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ನಿರ್ಬಂಧಿಸುವುದು.

6. ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಅಯೋಜಿಸಲು ಕ್ರಮ ವಹಿಸುವುದು. ಈ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿದೆ.

Published On - 4:17 pm, Tue, 23 August 22