ಪಿಡಿಒಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆಪ್ತ ಸಹಾಯಕ ಸಸ್ಪೆಂಡ್
ಬೆಳಗಾವಿ: ಗ್ರಾಮೀಣ ಭಾಗದ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದ ಅಪರ ಜಿಲ್ಲಾಧಿಕಾರಿಯ ಆಪ್ತ ಸಹಾಯಕ ಅಮಾನತಾಗಿದ್ದಾರೆ. ಅಧಿಕಾರ ದುರ್ಬಳಕೆ ಆರೋಪದಡಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅಮಾನತು ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕರೆ ಮಾಡಿ ಕೆಲಸಕ್ಕೆ ಒತ್ತಡ ಹಾಕುತ್ತಿದ್ದರು. ಕೆಲಸ ಮಾಡದಿದ್ದರೆ ಅಪರ ಜಿಲ್ಲಾಧಿಕಾರಿ ಆಪ್ತ ಸಹಾಯಕ ಐ.ಎಸ್.ಪಾಟೀಲ್ ಬೆದರಿಕೆ ಹಾಕುತ್ತಿದ್ದರು. ಪ್ರಕರಣ ಕುರಿತು ಜಿಲ್ಲಾಧಿಕಾರಿ ಆಂತರಿಕ ತನಿಖೆ ನಡೆಸಿದ್ದರು. ಅಧಿಕಾರ ದುರ್ಬಳಕೆ ಆರೋಪದಡಿ ಅಮಾನತು ಮಾಡಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಆದೇಶಿಸಿದ್ದಾರೆ.
ಬೆಳಗಾವಿ: ಗ್ರಾಮೀಣ ಭಾಗದ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದ ಅಪರ ಜಿಲ್ಲಾಧಿಕಾರಿಯ ಆಪ್ತ ಸಹಾಯಕ ಅಮಾನತಾಗಿದ್ದಾರೆ. ಅಧಿಕಾರ ದುರ್ಬಳಕೆ ಆರೋಪದಡಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅಮಾನತು ಮಾಡಿದ್ದಾರೆ.
ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕರೆ ಮಾಡಿ ಕೆಲಸಕ್ಕೆ ಒತ್ತಡ ಹಾಕುತ್ತಿದ್ದರು. ಕೆಲಸ ಮಾಡದಿದ್ದರೆ ಅಪರ ಜಿಲ್ಲಾಧಿಕಾರಿ ಆಪ್ತ ಸಹಾಯಕ ಐ.ಎಸ್.ಪಾಟೀಲ್ ಬೆದರಿಕೆ ಹಾಕುತ್ತಿದ್ದರು. ಪ್ರಕರಣ ಕುರಿತು ಜಿಲ್ಲಾಧಿಕಾರಿ ಆಂತರಿಕ ತನಿಖೆ ನಡೆಸಿದ್ದರು. ಅಧಿಕಾರ ದುರ್ಬಳಕೆ ಆರೋಪದಡಿ ಅಮಾನತು ಮಾಡಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಆದೇಶಿಸಿದ್ದಾರೆ.