ಹೆದ್ದಾರಿಯಲ್ಲಿ ರಾಂಗ್ ಸೈಡ್ ವಾಹನ ಚಲಾಯಿಸಿದರೆ ಎಫ್ಐಆರ್, ಲೈಸನ್ಸ್ ರದ್ದು: ಅಲೋಕ್ ಕುಮಾರ್ ಎಚ್ಚರಿಕೆ
ಬೆಂಗಳೂರು-ಮೈಸೂರು ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುತ್ತಿರುವ ವಿಡಿಯೋವನ್ನು ಎಕ್ಸ್ನಲ್ಲಿ (ಟ್ವಿಟರ್) ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರು, ಸೆ.5: ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸಿದರೆ ಜೈಲು ಪಾಲಾಗಬಹುದು ಮತ್ತು ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳ್ಳಬಹುದು. ಈ ಬಗ್ಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ (Alok Kumar) ಮಂಗಳವಾರ ಎಕ್ಸ್ (ಟ್ವಿಟರ್) ಎಂಬ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸದಿರಿ. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದರು.
ವಿನಯ್‌ಕುಮಾರ್ ಘನಶ್ಯಾಮ್ ಎಬವರು ಬೆಂಗಳೂರು-ಮೈಸೂರು ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡ ನಂತರ ಅಲೋಕ್ ಕುಮಾರ್ ಎಚ್ಚರಿಕೆಯನ್ನು ನೀಡಿದ್ದಾರೆ.
ರಾಂಗ್ಸೈಡ್ನಲ್ಲಿ ವಾಹನ ಚಲಾಯಿಸುತ್ತಿರುವ ವಿಡಿಯೋ ಹಂಚಿಕೊಂಡ ಘನಶ್ಯಾಮ್, “ಅಲೋಕ್ ಕುಮಾರ್ ಸರ್, ಇಂದು ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನಗಳು ಸೇರಿದಂತೆ ಹಲವಾರು ವಾಹನಗಳು ವಿರುದ್ಧ ದಿಕ್ಕಿನಲ್ಲಿ ಬರುತ್ತಿವೆ. ಈ ರಸ್ತೆಯಲ್ಲಿ ಏನೂ ಬದಲಾಗಿಲ್ಲ, ದಯವಿಟ್ಟು ಕೆಲವು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಿ” ಎಂದಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಜನ ಸಾವು, ಈ ಪೈಕಿ ಬೈಕ್ ಸವಾರರೇ ಹೆಚ್ಚು
ಇದಕ್ಕೆ ಪ್ರತಿಕ್ರಿಯಿಸಿದ ಅಲೋಕ್ ಕುಮಾರ್, ಅಪಾಯಕಾರಿ ಚಾಲನೆಗಾಗಿ ವಾಹನದ ವಿರುದ್ಧ 184 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ ಮತ್ತು ಡಿಎಲ್ ಅನ್ನು ಸಹ ಅಮಾನತುಗೊಳಿಸಲು ನಾವು ಶಿಫಾರಸು ಮಾಡುತ್ತಿದ್ದೇವೆ. ನೋಟಿಸ್ ನೀಡಲಾಗಿದೆ. ಇನ್ನು ಮುಂದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವ ಸವಾರರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಮತ್ತು ಡಿಎಲ್ ಅಮಾನತಿಗೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
The vehicle in question is being booked u/s 184 IMV Act for dangerous driving and we are recommending suspension of DL too. Notice has been issued
Henceforth, FIR will be registered against persons driving in opposite direction on NH & action will be taken for DL suspension too https://t.co/jS4U9X4kzS
— alok kumar (@alokkumar6994) September 5, 2023
ಭಾನುವಾರ, ರೆಂಜಿತ್ ಥಾಮಸ್ ಎಂಬ ವ್ಯಕ್ತಿಯೊಬ್ಬರು ಬೆಂಗಳೂರು-ಮೈಸೂರು ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ಕಾರು ಚಲಿಸುತ್ತಿರುವ ವಿಡಿಯೋವನ್ನು ಶೇರ್ ಮಾಡಿದ್ದರು. ಈ ವಿಡಿಯೋಗೂ ಪ್ರತಿಕ್ರಿಯೆ ನೀಡಿದ ಅಲೋಕ್ ಕುಮಾರ್ ಅವರು, ಕಾರು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
https://twitter.com/alokkumar6994/status/1698286198844735500?ref_src=twsrc%5Etfw%7Ctwcamp%5Etweetembed%7Ctwterm%5E1698286198844735500%7Ctwgr%5Eb2d0e7cf67b4d75884018eae4d2e07d3e7daa584%7Ctwcon%5Es1_&ref_url=https%3A%2F%2Fwww.news9live.com%2Fstate%2Fkarnataka%2Ffir-for-driving-on-wrong-side-of-national-highway-karnataka-adgp-alok-kumar-warns-2275255
ಈ ಬಗ್ಗೆ ಮಂಡ್ಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ರಸ್ತೆ ನಡವಳಿಕೆಯು ಅನಾಗರಿಕ ಮತ್ತು ಅನಕ್ಷರಸ್ಥ ವ್ಯಕ್ತಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಇತ್ತೀಚೆಗಷ್ಟೇ, ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದಲ್ಲಿ ನಡು ರಸ್ತೆಯಲ್ಲೇ ಕೆಎಸ್ಆರ್ಟಿಸಿ ಬಸ್ ಯೂ ಟರ್ನ್ ಮಾಡಿತ್ತು. ಟೋಲ್ ಉಳಿಸುವ ಕಾರಣಕ್ಕೆ ಯೂ ಟರ್ನ್ ಮಾಡಲಾಗಿದೆ ಎನ್ನಲಾಗಿತ್ತು. ಈ ವೇಳೆ ಬಸ್ನಲ್ಲಿದ್ದ ಪ್ರಯಾಣಿಕರು ಮಾತ್ರವಲ್ಲದೆ, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರಲ್ಲೂ ಆತಂಕ ಮೂಡಿಸಿತ್ತು. ಇದರ ವಿಡಿಯೋ ಕೂಡ ವೈರಲ್ ಆಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ