‘ಕರಾಳ ಶನಿವಾರ‘ ಎಂದು ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿದ ರಸ್ತೆ ಸುರಕ್ಷತೆ ADGP ಅಲೋಕ್ ಕುಮಾರ್

ADGP Alok Kumar tweet: ಪೊಲೀಸರು ಎಷ್ಟೇ ಮುನ್ನೆಚ್ಚರಿಕೆ, ಕಠಿಣ ಕ್ರಮಗಳನ್ನು ಕೈಗೊಂಡರೂ ಸವಾರರ ನಿರ್ಲಕ್ಷ್ಯದಿಂದಾಗಿ ಅಪಘಾತ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿವೆ. ಅದರಲ್ಲೂ ಬೈಕ್ ಸವರಾರೇ ಅಪಘಾತಗಳಲ್ಲಿ ಹೆಚ್ಚಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಆ್ಯಕ್ಸಿಡೆಂಟ್ ಕೇಸ್ ಗಳು ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗ್ತಿವೆ. ‘ಕರಾಳ ಶನಿವಾರ‘ ಎಂದು ಬಣ್ಣಿಸಿರುವ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್​ ಸಾರಾಂಶ ಇಲ್ಲಿದೆ:

‘ಕರಾಳ ಶನಿವಾರ‘ ಎಂದು ಟ್ವೀಟ್ ಮಾಡಿ ಕಳವಳ ವ್ಯಕ್ತಪಡಿಸಿದ ರಸ್ತೆ ಸುರಕ್ಷತೆ ADGP ಅಲೋಕ್ ಕುಮಾರ್
ಕರ್ನಾಟಕ ರಸ್ತೆ ಸುರಕ್ಷತೆ ADGP ಅಲೋಕ್ ಕುಮಾರ್
Follow us
| Updated By: ಸಾಧು ಶ್ರೀನಾಥ್​

Updated on:Aug 14, 2023 | 9:51 AM

ಬೆಂಗಳೂರು, ಆಗಸ್ಟ್​ 14: ಕರ್ನಾಟಕ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ಆಯುಕ್ತ (ADGP) ಅಲೋಕ್ ಕುಮಾರ್ ಅವರು (IPS Alok Kumar) ಕರ್ತವ್ಯನಿರತರಾಗಿ ಖುದ್ದಾಗಿ ಹೆದ್ದಾರಿಗಳಿಗೆ ಭೇಟಿ ಕೊಟ್ಟು ಅಲ್ಲಿನ ಸಂಚಾರ ಮತ್ತು ರಸ್ತೆ ಸುರಕ್ಷತೆ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ, ಸೂಚನೆಗಳನ್ನು ನೀಡುತ್ತಿದ್ದಾರೆ. ತತ್ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​​​ವೇ ಅಂತಹ ಅಪಘಾತಪೀಡಿತ ಮಾರ್ಗಗಳಲ್ಲಿ ಅಪಘಾತಗಳು (Road Accident) ತಕ್ಕಮಟ್ಟಿಗೆ ಕಡಿಮೆಯಾಗಿವೆ. ಈ ಬಗ್ಗೆ ಕಳೆದ ವಾರ ಸ್ವತಃ ADGP ಅಲೋಕ್ ಕುಮಾರ್ ಅವರೇ ಟ್ವೀಟ್ ಮಾಡಿ ಸಮಾಧಾನದ ನಿಟ್ಟುಸಿರುಬಿಟ್ಟಿದ್ದರು. ಆದರೆ ಕಳೆದ ವಾರಾಂತ್ಯ ಸದಾ ಅಪಘಾತ ಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊತ್ತಿರುವ ಅದೊಂದು ಪ್ರದೇಶದಿಂದ ಕೇಳಿಬಂದ ಅಪಘಾತದ ಸುದ್ದಿಗೆ ಹಿರಿಯ ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್ ಅವರೇ ಸ್ವತಃ ಬೆಚ್ಚಿಬಿದ್ದಿದ್ದಾರೆ. ಆ ಬಗ್ಗೆ ಟ್ವೀಟ್​ ಮಾಡಿ ಮಮ್ಮಲಮರುಗಿದ್ದಾರೆ. ಕಳೆದ ಶನಿವಾರ (Black saturday) ಒಂದೇ ದಿನ ಅಪಘಾತಗಳಿಂದ ರಾಜ್ಯದಲ್ಲಿ 37 ಜನ ಸಾವಿಗೀಡಾಗಿದ್ದಾರೆ. ಚಿತ್ರದುರ್ಗದ ಕಾರು-ಲಾರಿ ಅಪಘಾತದಲ್ಲೇ ಐದು ಮಂದಿ ಸಾವನ್ನಪ್ಪಿದ್ದಾರೆ. ‘ಕರಾಳ ಶನಿವಾರ‘ ಎಂದು ADGP ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಹೌದು, ಪೊಲೀಸರು ಎಷ್ಟೇ ಮುನ್ನೆಚ್ಚರಿಕೆ, ಕಠಿಣ ಕ್ರಮಗಳನ್ನು ಕೈಗೊಂಡರೂ ಸವಾರರ ನಿರ್ಲಕ್ಷ್ಯದಿಂದಾಗಿ ಅಪಘಾತ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿವೆ. ಅದರಲ್ಲೂ ಬೈಕ್ ಸವರಾರೇ ಅಪಘಾತಗಳಲ್ಲಿ ಹೆಚ್ಚಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಆ್ಯಕ್ಸಿಡೆಂಟ್ ಕೇಸ್ ಗಳು ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಾಗ್ತಿವೆ.

‘ಕರಾಳ ಶನಿವಾರ‘ ಎಂದು ಬಣ್ಣಿಸಿರುವ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್​ ಸಾರಾಂಶ ಇಲ್ಲಿದೆ:

Black saturday. 37 lives lost including 5 deaths near Chitradurga in early morning today , where the car hit the lorry from behind. Bike riders form the largest chunk. Inexperienced driver must avoid Night driving. Two wheeler riders should use Helmet for their own safety

ಈ ಶಾಕಿಂಗ್ ವಿಚಾರ ಶೇರ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್ ಅವರು ಕಳೆದ ಶನಿವಾರ (ಆಗಸ್ಟ್​ 12) ಒಂದೇ ದಿನ ಅಪಘಾತಗಳಿಂದ ರಾಜ್ಯದಲ್ಲಿ 37 ಜನ ಸಾವು ಸಂಭವಿಸಿದೆ. ಚಿತ್ರದುರ್ಗದ ಕಾರು-ಲಾರಿ ಅಪಘಾತದಲ್ಲೇ ಐವರು ಸಾವಿಗೀಡಾಗಿದ್ದಾರೆ ಎಂದು ಟ್ವೀಟ್ ಮಾಡಿರುವ ADGP ಅಲೋಕ್ ಕುಮಾರ್ ಅವರು ಸಾರ್ವಜನಿಕರಲ್ಲಿ ಮನವಿಯನ್ನೂ ಮಾಡಿಕೊಂಡಿದ್ದಾರೆ. ಅನುಭವ ಇಲ್ಲದವರು ನೈಟ್ ಟ್ರಾವೆಲ್ ಅವಾಯ್ಡ್​​ ಮಾಡಿ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಎಂದು ಸಲಹೆ ನೀಡಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 am, Mon, 14 August 23

ತಾಜಾ ಸುದ್ದಿ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ