AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ನೇಹಾ ಮನೆಗೆ ಭೇಟಿ ನೀಡಿದ್ದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on: May 19, 2024 | 6:34 PM

Share

ಹುಬ್ಬಳ್ಳಿ, ಮೇ 19: ನೇಹಾ (Neha) ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಇಡೀ ರಾಜ್ಯವಲ್ಲದೇ ರಾಷ್ಟ್ರಮಟ್ಟದಲ್ಲಿ ಕೂಡ ಸಾಕಷ್ಟು ಸುದ್ದಿಯಾಗಿದೆ. ಒಂದರ ಹಿಂದೆ ಒಂದರಂತೆ ನಗರದಲ್ಲಿ ಕೊಲೆ ಹಿನ್ನಲೆ ಇಡೀ ಹುಬ್ಬಳ್ಳಿ (Hubballi) ಜನರು ಬೆಚ್ಚಿಬಿದ್ದಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಮಾತನಾಡಿದ್ದರು. ಇದೆಲ್ಲದರ ನಡುವೆ ಇಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ  ನೇಹಾ ಮನೆಗೆ ಭೇಟಿ ಮಾಡಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು ತರಾಟೆ ತೆಗೆದುಕೊಂಡಿದ್ದಾರೆ.

ಅಧಿಕಾರಿಗಳಿಗೆ ಕ್ಲಾಸ್​

ಹು-ಧಾ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಕೇಳಿದ್ದಾರೆ. ಅವಳಿ ನಗರದ ಕ್ರೈಂ ಮಾಹಿತಿ ಪಡೆದಿದ್ದಾರೆ. ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಯಾವ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಆಗಿದೆ ಅನ್ನುವ ಮಾಹಿತಿ ಪಡೆದಿದ್ದು, ಅಪರಾಧ ಪ್ರಕರಣಗಳು ಹೆಚ್ಚಾಗಲು ಏನು ಕಾರಣ? ಏನೆಲ್ಲ ದಿಟ್ಟ ಕ್ರಮ ಕೈಗೊಂಡಿದ್ದೀರಿ?, ಅಪರಾಧಿಗಳ ಮೇಲೆ ನಿಗಾ ಇಟ್ಟಿದ್ದೀರಾ? ರೌಡಿಶೀಟರ್‌ಗಳ ವಿರುದ್ಧ ಕಾಲಕಾಲಕ್ಕೆ ಕ್ರಮ ಆಗಿದೆಯಾ? ಹು-ಧಾ ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗಲು ಏನು ಕಾರಣ? ಠಾಣೆಗೆ ಬರುವ ಜನರ ದೂರು ಆಲಿಸುವಲ್ಲಿ ಸಿಬ್ಬಂದಿ ವರ್ತನೆ ಹೇಗಿದೆ ಎಂದು ಸಭೆಯಲ್ಲಿ ಹೀಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ

ಸಭೆ ಬಳಿಕ ಆರ್‌.ಹಿತೇಂದ್ರ ಮಾತನಾಡಿದ್ದು, ಎಲೆಕ್ಷನ್ ಸಹ ಇತ್ತು, ಇದೇ ವೇಳೆ ಇಬ್ಬರು ಯುವತಿಯರ ಹತ್ಯೆಯಾಗಿದೆ. ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳು ಬಂದಿದ್ದವು. ಹೀಗಾಗಿ ನಾನೇ ಬಂದು ಸಭೆ ಮಾಡಿದ್ದೇನೆ, ಸಮಗ್ರ ಮಾಹಿತಿ ಪಡೆದಿದ್ದೇನೆ. ಆದರೆ ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದರೆ ಕ್ರೈಂ ಅಂಕಿ-ಅಂಶಗಳ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಅಪರಾಧಗಳ ಅಂಕಿ-ಅಂಶ ನೋಡಿದ್ರೆ ಹಿಂದಿಗಿಂತ ಈ ಸಲ ಕಡಿಮೆ ಇದೆ. ಆದರೆ ಹು-ಧಾ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿದೆ. ಹೀಗಾಗಿ ಸಭೆಯಲ್ಲಿ ಪೊಲೀಸ್‌ ಅಧಿಕಾರಿಗಳಿಗೆ ಕೆಲ ಸೂಚನೆ ಕೊಟ್ಟಿದ್ದೇನೆ. ಇದರಂತೆ ಅಪರಾಧ ಪ್ರಕರಣ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸುವ ಕೆಲಸ ಪೊಲೀಸರು ಮಾಡಲಿದ್ದಾರೆ.

ಇದನ್ನೂ ಓದಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರಗಳ ಬಗ್ಗೆ ನಾನು ಬಹಿರಂಗವಾಗಿ ಹೇಳುವುದಿಲ್ಲ. ಪೊಲೀಸರ ವಿರುದ್ಧ ಸಾರ್ವಜನಿಕರಿಂದ ಕೆಲ ದೂರುಗಳು ಬಂದಿದ್ದವು. ದೂರು ಬಂದಾಗ ಕೆಲ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಂಜಲಿ ಅಜ್ಜಿ ಮೊದಲೇ ದೂರು ಕೊಡಲು ಬಂದಿದ್ದಳೆಂಬ ವಿಚಾರ ಬಂದಿತ್ತು. ಹೀಗಾಗಿ ಸಂಬಂಧಿಸಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹು-ಧಾ ಅವಳಿ ನಗರದಲ್ಲಿ ಪೊಲೀಸ್ ಠಾಣೆಗಳ ಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳಲಿದ್ದು, ಸಭೆಯ ಸಮಗ್ರವಾದ ವರದಿ ಗೃಹ ಸಚಿವರಿಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
VIDEO: ಮ್ಯಾಕ್ಸ್​ವೆಲ್ ಮ್ಯಾಜಿಕ್... ಎಂತಹ ಅದ್ಭುತ ಕ್ಯಾಚ್
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
ಮೈಸೂರು ದಸರಾ 2025 ರ ಉದ್ಘಾಟಕರು ಯಾರು? ಸಚಿವ ಮಹದೇವಪ್ಪ ಕೊಟ್ಟರು ಸುಳಿವು
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
171 ರನ್​ ಗಳಿಸಿದ ಪಾಕಿಸ್ತಾನ್: 184 ರನ್​ ಚೇಸ್ ಮಾಡಿ ಗೆದ್ದ ವಿಂಡೀಸ್
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily Devotional: ಮಕ್ಕಳಿಗೆ ಬಾಲಾರಿಷ್ಟ ದೋಷಕ್ಕೆ ಪರಿಹಾರ ತಿಳಿಯಿರಿ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ವಿದ್ಯುತ್​ ದೀಪಾಲಂಕಾರ ನೋಡುತ್ತ ಮೈಸೂರು ಅರಮನೆಗೆ ಬಂದ ದಸರಾ ಆನೆಗಳು
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ.: ಯತ್ನಾಳ್
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ