ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು: ದಾಖಲಾತಿ ಪ್ರಮಾಣದಲ್ಲಿ ಹೆಚ್ಚಳ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 01, 2021 | 9:58 PM

ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಖಾಸಗಿ ಶಾಲೆಯಿಂದ ಸರ್ಕಾರಿ‌ ಶಾಲೆಯತ್ತ ಮುಖ ಮಾಡುತ್ತಿರುವ ಮಕ್ಕಳ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಸರ್ಕಾರಿ ಶಾಲೆಗಳು: ದಾಖಲಾತಿ ಪ್ರಮಾಣದಲ್ಲಿ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿಯಲ್ಲಿ ಹೆಚ್ಚಳ ಕಂಡುಬಂದಿದೆ. 1ರಿಂದ 10ನೇ ತರಗತಿವರೆಗೂ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಾರಂಭವಾಗಿ ಕೇವಲ 15 ದಿನದಲ್ಲೇ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜೂನ್ 15ರಿಂದ ಈವರೆಗೆ ಸರ್ಕಾರಿ ಶಾಲೆಗಳಿಗೆ 16 ಲಕ್ಷಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಖಾಸಗಿ ಶಾಲೆಯಿಂದ ಸರ್ಕಾರಿ‌ ಶಾಲೆಯತ್ತ ಮುಖ ಮಾಡುತ್ತಿರುವ ಮಕ್ಕಳ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಜೂನ್ 15ರಿಂದ ಈವರೆಗೆ ಒಟ್ಟು 16,52,613 ಮಕ್ಕಳು ಸರ್ಕಾರಿ ಶಾಲೆಗೆ ಸೇರ್ಪಡೆಯಾಗಿದ್ದಾರೆ. ಅನುದಾನಿತ ಶಾಲೆಗಳಲ್ಲಿ 3,10,883 ಮಕ್ಕಳು ದಾಖಲಾಗಿದ್ದರೆ, ಖಾಸಗಿ ಶಾಲೆಗಳಲ್ಲಿ 4,48,699 ಮಕ್ಕಳು ಸೇರಿದ್ದಾರೆ. ಈ ವರ್ಷ‌ ದಾಖಲಾತಿಗೆ ಮತ್ತಷ್ಟು ಸಮಯಾವಕಾಶ ನೀಡಿರುವ ಹಿನ್ನೆಲೆಯಲ್ಲಿ ಈ ಪ್ರಮಾಣವೂ ಮತ್ತಷ್ಟು ಹೆಚ್ಚಾಗಬಹುದಾದ ನಿರೀಕ್ಷೆಯಿದೆ.

ಕೊರೊನಾ ಕಾರಣದಿಂದ ಪೋಷಕರ ಆದಾಯ ಕಡಿಮೆಯಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ. ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಶೇ 10ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಿ ಶಾಲೆಗಳ ಗುಣಮಟ್ಟವೂ ಇತ್ತೀಚೆಗೆ ಸುಧಾರಿಸಿದೆ. ರಾಜಕಾರಿಣಿಗಳೂ ಸೇರಿದಂತೆ ಹಲವು ಸ್ಥಿತಿವಂತರು ಸರ್ಕಾರಿ ಶಾಲೆಗಳನ್ನು ದತ್ತುಪಡೆಯುತ್ತಿದ್ದಾರೆ. ಇದರಿಂದ ಶಾಲೆಗಳ ಮೂಲಸೌಕರ್ಯವೂ ತಕ್ಕಮಟ್ಟಿಗೆ ಸುಧಾರಿಸಿದೆ. ಹೀಗಾಗಿ ಜನರೂ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂಜರಿಯುತ್ತಿಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

(Admission Numbers Improved in Karnataka Govt Schools)

ಇದನ್ನೂ ಓದಿ: ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಖಾಸಗಿ ಶಾಲೆಗಳ ಒತ್ತಾಯ; ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದ ರುಪ್ಸಾ

ಇದನ್ನೂ ಓದಿ: ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಯಾವಾಗ? ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

Published On - 9:40 pm, Thu, 1 July 21