ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆದ ಸಚಿವ ಸಿ.ಪಿ.ಯೋಗೇಶ್ವರ್

ಅರಮನೆಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿದ್ದು, ಹೆಲಿ ಟೂರಿಸಂ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಜತೆ ಚರ್ಚೆ ನಡೆಸಿದ್ದಾರೆ.

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆದ ಸಚಿವ ಸಿ.ಪಿ.ಯೋಗೇಶ್ವರ್
ಮೈಸೂರು ಅರಮನೆಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ
Follow us
shruti hegde
|

Updated on: Mar 07, 2021 | 3:34 PM

ಮೈಸೂರು: ಅರಮನೆಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಭೇಟಿ ನೀಡಿದ್ದು, ಹೆಲಿ ಟೂರಿಸಂ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಜತೆ ಚರ್ಚೆ ನಡೆಸಿದ್ದಾರೆ. ಸದ್ಯ, ರಾಜವಂಶಸ್ಥರ ಒಡೆತನದಲ್ಲಿರುವ ಮೈಸೂರು ಹೆಲಿಪ್ಯಾಡ್‌ ಇದ್ದು, ಹೆಲಿಪ್ಯಾಡ್ ಮೈದಾನ ಬಳಸಿಕೊಳ್ಳುವ ಉದ್ದೇಶವಾಗಿ ಮಾತನಾಡಿದ್ದಾರೆ.

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ರಾಜವಂಶಸ್ಥರಿಂದ ಸಲಹೆ ಪಡೆಯಲಾಗಿದೆ. ಸಚಿವರಿಗೆ ನಟಿ ಶ್ರುತಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

CP Yogeshwar

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್

ಈ ಕುರಿತಂತೆ ಮಾತನಾಡಿದ ಸಚಿವ ಸಿ.ಪಿ.ಯೋಗೇಶ್ವರ್, ಪ್ರವಾಸೋದ್ಯಮವನ್ನ ಬ್ರಾಂಡ್ ಮೈಸೂರು ಹೆಸರಿನಲ್ಲಿ ಮಾಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜಕೀಯ ಉದ್ದೇಶದಿಂದ ನಾನು ಮೈಸೂರಿಗೆ ಬರುತ್ತಿಲ್ಲ. ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಬರುತ್ತಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಮೈಸೂರು ಉಸ್ತುವಾರಿ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ. ನನಗೆ ರಾಮನಗರ ಉಸ್ತುವಾರಿ ನೀಡುವಂತೆ ಕೇಳಿದ್ದೇನೆ. ಆದರೆ ಈ ಬಗ್ಗೆ ಇನ್ನೂ ಸಿಎಂ ಬಿಎಸ್‌ವೈ ಸ್ಪಷ್ಟಪಡಿಸಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಪ್ರವಾಸೋದ್ಯಮ ಬಹಳ ಹಿಂದೆ ಇದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆ ಬಗ್ಗೆ ನಿರಾಸೆಯಾಗುತ್ತಿದೆ. ಇದನ್ನೆಲ್ಲ ನಿವಾರಿಸುವ ದೃಷ್ಟಿಯಿಂದ ವಿವಿಧ ಯೋಜನೆ ರೂಪಿಸಿದ್ದೇನೆ. ಈ ಉದ್ದೇಶದಿಂದ ಪದೆ ಪದೇ ಮೈಸೂರಿಗೆ ಬರುತ್ತಿದ್ದೇನೆ ಎಂದು ಮಾತನಾಡಿದ್ದಾರೆ.

CP Yogeshwar

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಮೈಸೂರು ಅರಮನೆಗೆ ಭೇಟಿ

ಇದನ್ನೂ ಓದಿ: ಮೈಸೂರು ಅರಮನೆಯಲ್ಲಿ ಸರಳ ದಸರಾ: ಆಯುಧ, ಗಜಪಡೆ ಮತ್ತು ಫಿರಂಗಿ ಗಾಡಿಗಳಿಗೆ ಪೂಜೆ

ಇದನ್ನೂ ಓದಿ: ಮೈಸೂರು ಅರಮನೆಯಲ್ಲಿ ಪಟ್ಟದ ಆನೆ, ಕುದುರೆ ಮತ್ತು ಹಸುಗೆ ಪೂಜೆ