AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು. ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ […]

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Oct 28, 2020 | 4:04 PM

Share

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು.

ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ ಕೋರ್ಟನಲ್ಲಿ ನಡೆಯುತ್ತಿದ್ದಾಗ, ಕೋರ್ಟೇ ಖುದ್ದಾಗಿ ಭಟ್ ಅವರನ್ನು ಶ್ರೀರಾಮನ ಪರವಾಗಿ ವಾದಿಸಲು ಕೇಳಿತ್ತು. ಈ ಸಂಬಂಧ ಕೆಲಸ ಪ್ರಾರಂಭಿಸಿದ ಭಟ್ ಅವರು ಬೇರೆ ಬೇರೆ ಜನರನ್ನು ಭೇಟಿ ಮಾಡಿ ಅಪರೂಪದ ದಾಖಲೆಗಳನ್ನು ಕಲೆ ಹಾಕಿ ಕೋರ್ಟಿಗೆ ಸಲ್ಲಿಸಿದ್ದಷ್ಟೇ ಅಲ್ಲ, ಮೂರು ವರ್ಷ ತಮ್ಮ ವಾದವನ್ನು ಯಶಸ್ವಿಯಾಗಿ ಮಂಡಿಸಿದರು.

ಅಲಹಾಬಾದ್ ಹೈಕೋರ್ಟ ತೀರ್ಪು 2010 ರಲ್ಲಿ ಹೊರಬಿದ್ದಿತ್ತು. ಅದಾದ ನಂತರ ಬಂದ ಸುಪ್ರೀಂ ಕೋರ್ಟ ತೀರ್ಪಿನಲ್ಲಿ, ಶ್ರೀರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ ಬಗ್ಗೆ ಸಾಕ್ಷ್ಯಾಧಾರ ಇದೆ ಎಂದು ಹೇಳಿದ್ದು ಭಟ್ ಅವರ ವೃತ್ತಿಪರತೆ ಮತ್ತು ಕೌಶಲ್ಯವನ್ನು ಎತ್ತಿ ಹಿಡಿದಿತ್ತು.

1940 ರಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಹುಟ್ಟಿದ ಭಟ್ ಅವರು 1962 ದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. 1986 ರಲ್ಲಿ ಸುಪ್ರೀಂ ಕೋರ್ಟ್​ ಅವರನ್ನು ಹಿರಿಯ ನ್ಯಾಯವಾದಿಯಾಗಿ ಗೌರವಿಸಿದೆ. 1996 ರಲ್ಲಿ ಅವರನ್ನು ಕೇಂದ್ರ ಸರಕಾರ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ನೇಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ

Published On - 1:46 pm, Wed, 28 October 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?