15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಜಾರಿಯಾಗಲಿದೆ.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ
ಸಾಂದರ್ಭಿಕ ಚಿತ್ರ
Follow us
Vinayak Hanamant Gurav
| Updated By: ವಿವೇಕ ಬಿರಾದಾರ

Updated on:Apr 01, 2024 | 11:09 AM

ಬೆಂಗಳೂರು, ಏಪ್ರಿಲ್​ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ (Electricity bill reduce) ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೆ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಇದನ್ನೂ ಓದಿ: 50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಆದರೆ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್​ನಲ್ಲಿ ಬರುವ ಬಿಲ್​​ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್​ನಲ್ಲಿ ಈ ದರ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Mon, 1 April 24

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?