ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ಎಸ್ಎಸ್ಎಲ್​ಸಿ, ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ; ಸಚಿವ ಸುರೇಶ್ ಕುಮಾರ್

ಜೂನ್ 21ರಿಂದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ.

ಕೊರೊನಾ ನಿಯಂತ್ರಣಕ್ಕೆ ಬಂದ ಬಳಿಕ ಎಸ್ಎಸ್ಎಲ್​ಸಿ, ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ; ಸಚಿವ ಸುರೇಶ್ ಕುಮಾರ್
ಸಾಂದರ್ಭಿಕ ಚಿತ್ರ
Follow us
sandhya thejappa
|

Updated on: May 17, 2021 | 12:20 PM

ಚಾಮರಾಜನಗರ: ಕೊರೊನಾ ಸೋಂಕು ಕಡಿಮೆಯಾದ ಬಳಿಕ ಎಸ್ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮುಂಬೈ ನಗರದಲ್ಲಿಯೇ ಕೊರೊನಾ ಕಡಿಮೆಯಾಗಿದೆ. ಇನ್ನು ರಾಜ್ಯದಲ್ಲಿ ಕೊರೊನಾ ಕಡಿಮೆಯಾಗುವುದಿಲ್ಲವೇ. ಮೊದಲು ಕೊರೊನಾ ನಿಯಂತ್ರಣದ ಬಗ್ಗೆ ಗಮನಹರಿಸೋಣ. ಬಳಿಕ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಮಾಡೋಣ ಎಂದು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಜೂನ್ 21ರಿಂದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿದ ಸಚಿವರು, ಹೈಕೋರ್ಟ್ ಮುಂದಿನ ವಿಚಾರಣೆ ವೇಳೆಗೆ ಕ್ರಮ ತಿಳಿಸುವಂತೆ ಹೇಳಿದೆ. ಪರಿಹಾರದ ಬಗ್ಗೆ ಸಿಎಂ ಬಳಿ ಮಾತನಾಡಿದ್ದೇನೆ. ಯೋಚಿಸಿ ಯಾರಿಗೆ? ಎಷ್ಟು ಪ್ರಮಾಣದಲ್ಲಿ ಪರಿಹಾರ ಕೊಡಬೇಕು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ

ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡುವವರಿಗೆ ಆಯಸ್ಸು ಕಮ್ಮಿಯಾಗುವ ಅಪಾಯ: ವಿಶ್ವ ಆರೋಗ್ಯ ಸಂಸ್ಥೆ ವರದಿ

ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡುವವರಿಗೆ ಆಯಸ್ಸು ಕಮ್ಮಿಯಾಗುವ ಅಪಾಯ: ವಿಶ್ವ ಆರೋಗ್ಯ ಸಂಸ್ಥೆ ವರದಿ

(After Corona comes under control we will make a decision on SSLC and PUC exams said Suresh Kumar)

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ