ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ತುರ್ತು ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ

ಸಿದ್ದರಾಮಯ್ಯ ನಾಳೆಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿ ಇರುವಂತೆ ಖಡಕ್​ ಸೂಚನೆ ನೀಡಿದ್ದಾರೆ. ಬೆಳಗ್ಗೆ 10:30ಕ್ಕೆ ವಿಧಾನಸೌಧದ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಲಿದೆ.

ಗೋ ಹತ್ಯೆ ನಿಷೇಧ ವಿಧೇಯಕ ಅಂಗೀಕಾರ: ತುರ್ತು ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ
ಸಿದ್ದರಾಮಯ್ಯ
Edited By:

Updated on: Dec 09, 2020 | 9:47 PM

ಬೆಂಗಳೂರು: ಬಹುಚರ್ಚಿತ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿಂದು ಅಂಗೀಕಾರ ದೊರೆತಿದೆ. ಈ ಬೆಳವಣಿಗೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ. ಈ ವೇಳೆ ಗೋ ಹತ್ಯೆ ನಿಷೇಧ ವಿಧೇಯಕದ ಬಗ್ಗೆ ಪ್ರತಿಭಟನೆ ನಡೆಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಇಂದು, ವಿಧಾನಸಭೆಯಲ್ಲಿ ಮಂಡನೆ ಆದ ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆಯನ್ನೂ ನಡೆಸಿದರು. ಗೋವಾದಲ್ಲೂ ಬಿಜೆಪಿ ಸರ್ಕಾರವಿದೆ. ಆದರೆ, ಅಲ್ಲಿ ಇಲ್ಲದ ಗೋ ಹತ್ಯೆ ನಿಷೇಧ ಇಲ್ಲೇಕೆ ಎನ್ನುವ ಪ್ರಶ್ನೆಯನ್ನು ಸಿದ್ದರಾಮಯ್ಯ ಮುಂದಿಟ್ಟರು. ಆದಾಗ್ಯೂ ಈ ವಿಧೇಯಕಕ್ಕೆ ಒಪ್ಪಿಗೆ ಸಿಕ್ಕಿತ್ತು.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಾಳೆಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿ ಇರುವಂತೆ ಖಡಕ್​ ಸೂಚನೆ ನೀಡಿದ್ದಾರೆ. ಬೆಳಗ್ಗೆ 10:30ಕ್ಕೆ ವಿಧಾನಸೌಧದ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಯಲಿದೆ.

ಗೋಹತ್ಯೆ ಕಾಯ್ದೆ ಮಂಡನೆ ವಿರುದ್ಧದ ಹೋರಾಟದ ರೂಪುರೇಷೆ ಬಗ್ಗೆ ನಾಳೆ ಸಿದ್ದರಾಮಯ್ಯ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಯಾವ ರೀತಿಯಲ್ಲಿ ಹೋರಾಟ ಮಾಡಬೇಕು, ಈ ವಿಚಾರದಲ್ಲಿ ಬಿಜೆಪಿಯನ್ನು ಹೇಗೆ ಕಟ್ಟಿ ಹಾಕಬೇಕು ಎನ್ನುವ ಬಗ್ಗೆ ಸಿದ್ದರಾಮಯ್ಯ ಇತರ ಶಾಸಕರಿಂದ ಅಭಿಪ್ರಾಯ ಕೇಳಲಿದ್ದಾರೆ. ಇದರ ಜೊತೆಗೆ ನಾಳಿನ ಕಲಾಪವನ್ನು ಬಹಿಷ್ಕರಿಸಲು ಕೂಡ ನಿರ್ಧರಿಸಲಾಗಿದೆ.

ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ; ಪ್ರತಿಭಟನೆ ಬಿಡದ ಕಾಂಗ್ರೆಸ್​

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us