ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ

ವಿಧಾನಪರಿಷತ್​ನ ತೆರವಾಗುವ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಷ್ಟೇ ಅಲ್ಲದೆ, ಒಟ್ಟು 18 ಪರಿಷತ್ ಸ್ಥಾನಗಳಿಗೆ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಬಹುಮತ ಗಳಿಸುವತ್ತ ಕಾಂಗ್ರೆಸ್ ದೃಷ್ಟಿ ನೆಟ್ಟಿದೆ.

ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ
ಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ
Follow us
Ganapathi Sharma
|

Updated on: May 09, 2024 | 2:35 PM

ಬೆಂಗಳೂರು, ಮೇ 9: ಲೋಕಸಭೆ ಚುನಾವಣೆಯ (Lok Sabha Elections) ಕಾವು ರಾಜ್ಯದಲ್ಲಿ ಕಡಿಮೆಯಾದರೂ ರಾಜಕೀಯದ ಜಿದ್ದಾಜಿದ್ದಿ ಸದ್ಯಕ್ಕೆ ಮುಗಿಯಲಾರದು. ಕಾರಣವೆಂದರೆ, ವಿಧಾನಪರಿಷತ್​ನ ತೆರವಾಗುವ ಸ್ಥಾನಗಳಿಗೆ (MLC Elections) ನಡೆಯಲಿರುವ ಚುನಾವಣೆ. ಎಲ್ಲವೂ ನಿರೀಕ್ಷೆಯಂತೆ ಸಾಗಿದರೆ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ (Congress) ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು, ಇದರೊಂದಿಗೆ ಸಭಾಪತಿ ಸ್ಥಾನವೂ ಪಕ್ಷದ ಪಾಲಾಗಲಿದೆ ಎಂದು ಅಂದಾಜಿಸಲಾಗಿದೆ.

ಮುಂದಿನ ಕೆಲವು ವಾರಗಳಲ್ಲಿ ಹಲವು ಮಂದಿ ಹಾಲಿ ಎಂಎಲ್‌ಸಿಗಳ ಅವಧಿ ಮುಕ್ತಾಯವಾಗಲಿದೆ. ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳು ಸೇರಿದಂತೆ 18 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪ್ರಸ್ತುತ, ಪರಿಷತ್ತಿನ ಅಧ್ಯಕ್ಷರು ಸೇರಿದಂತೆ 75 ಸದಸ್ಯರ ಸದನದಲ್ಲಿ 70 ಎಂಎಲ್‌ಸಿಗಳಿದ್ದಾರೆ. ಈ ಪೈಕಿ, ಕೆಲವರು ಕೆಲವು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಜೂನ್‌ನಲ್ಲಿ 18 ಹುದ್ದೆಗಳು ಖಾಲಿಯಾಗಲಿವೆ. ಇವರಲ್ಲಿ 11 ಮಂದಿ ಶಾಸಕರಿಂದ ಆಯ್ಕೆಯಾಗಿದ್ದರೆ, ಆರು ಮಂದಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷವು ವಿಧಾನಸಭೆಯಲ್ಲಿ 136 ಶಾಸಕರನ್ನು ಹೊಂದಿದ್ದು, ಮೇಲುಗೈ ಹೊಂದಿದೆ. ಹೀಗಾಗಿ ಪಕ್ಷವು ಎಂಟು ಎಂಎಲ್‌ಸಿಗಳನ್ನು ಆಯ್ಕೆ ಮಾಡಬಹುದಾಗಿದೆ. ಮತ್ತೊಂದೆಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಾಲ್ವರನ್ನು ಆರಿಸಬಹುದಾಗಿದೆ.

ಏತನ್ಮಧ್ಯೆ, ಚುನಾವಣಾ ಆಯೋಗವು ಆರು ಸ್ಥಾನಗಳಿಗೆ ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪ್ರಸ್ತುತ, ಕಾಂಗ್ರೆಸ್ ಒಂದು ಸ್ಥಾನವನ್ನು ಹೊಂದಿದ್ದು, ಉಳಿದ ಐದು ಸ್ಥಾನಗಳನ್ನು ಬಿಜೆಪಿ ಮತ್ತು ಜೆಡಿಎಸ್ ಎಂಎಲ್​ಸಿಗಳು ಪ್ರತಿನಿಧಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ.

ಮೇಲ್ಮನೆಯಲ್ಲಿ ಕಾಂಗ್ರೆಸ್​​ಗೆ ಇಲ್ಲ ಬಹುಮತ

ಮೇಲ್ಮನೆಯಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲದ ಕಾರಣ ವಿಧಾನಸಭೆಯಲ್ಲಿ ಅಂಗೀಕರಿಸಿದ ಹಲವು ಮಸೂದೆಗಳು ಪರಿಷತ್​​ನಲ್ಲಿ ಬಾಕಿ ಆಗುತ್ತಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ನಾವು 75 ಸದಸ್ಯರಲ್ಲಿ 29 ಎಂಎಲ್‌ಸಿಗಳನ್ನು ಹೊಂದಿದ್ದೇವೆ. ಆದರೆ ನಾವು 8 ರಿಂದ 9 ಸ್ಥಾನಗಳನ್ನು ಹೆಚ್ಚು ಪಡೆದರೆ, ಬಹುಮತ ಪಡೆಯುತ್ತೇವೆ ಮತ್ತು ಮಸೂದೆಗಳನ್ನು ಅಂಗೀಕರಿಸಬಹುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್​​ ಬಹುಮತ ಗಳಿಸಿದರೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಪೆನ್​ಡ್ರೈವ್ ಬಿಡುಗಡೆ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾರ್ತಿಕ್​​ ಸೇರಿ ಇತರರಿಗೆ ಬಂಧನ ಭೀತಿ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಪ್ರತಿ ಕ್ಷೇತ್ರಕ್ಕೆ ಪಕ್ಷವು ಈಗಾಗಲೇ ಎರಡು ಅಥವಾ ಮೂರು ಹೆಸರುಗಳನ್ನು ಶಿಫಾರಸು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಲ್ಲಿ ರಾಜ್ಯ ಬಿಜೆಪಿ ನಾಯಕರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ