AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಅವರ ವಿರುದ್ಧ ವಾಗ್ದಾಳಿ ಆರಂಭಿಸಿವೆ. ಒಂದೆಡೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ, ಇತ್ತ ಜೆಡಿಎಸ್ ಟ್ವೀಟ್ ಮೂಲಕ ಕುಹಕವಾಡಿದೆ.

ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ
ಸಿದ್ದರಾಮಯ್ಯ
Sunil MH
| Edited By: |

Updated on: Sep 24, 2024 | 2:12 PM

Share

ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್​ ಅನುಮತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ. ಬಿಜೆಪಿ ಜತೆ ಇದೀಗ ಎನ್​ಡಿಎ ಮಿತ್ರಪಕ್ಷ ಜೆಡಿಎಸ್ ಕೂಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.

ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್, “ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಎಂದು ಉಲ್ಲೇಖಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

‘ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ’ ಎಂದು ಜೆಡಿಎಸ್ ಆಗ್ರಹಿಸಿದೆ.

ಇದನ್ನೂ ಓದಿ: ಮುಡಾ ಹಗರಣ: ಹೈಕೋರ್ಟ್ ತೀರ್ಪು ಬಂದಾಯ್ತು, ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಇಲ್ಲಿದೆ ವಿವರ

ಮುಡಾ ಹಗರಣ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಸಿಎಂ ವಿರುದ್ಧದ ಆರೋಪಗಳ ತನಿಖೆ ಅಗತ್ಯ ಎಂದಿದೆ. ಸಿಎಂ ಪತ್ನಿಯೇ ಫಲಾನುಭವಿಯಾಗಿರುವುದರಿಂದ ತನಿಖೆ ಅಗತ್ಯ ಎಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೀಡಾಡಿ ಮಂತ್ರಿಗಳಿಂದ ಆರೋಪ; ಕುಮಾರಸ್ವಾಮಿ ವಾಗ್ದಾಳಿ

ಇನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕೆಲವು ಸಚಿವರು ಮಾಡಿರುವ ಆರೋಪಗಳಿಗೆ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವೊಬ್ಬರು ಬಿಡಾಡಿ ಮಂತ್ರಿಗಳು ನನ್ನ ವಿರುದ್ಧ ಆಪಾದನೆ ಮಾಡಿದ್ದಾರೆ. ನಾನು ಕೇಂದ್ರ ಸಚಿವನಾಗಿರುವುದನ್ನು ಅವರಿಗೆ ಸಹಿಸಲು ಆಗ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ