ಮೈಸೂರು, ನವೆಂಬರ್ 06: ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಈ ಮಧ್ಯೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಕರ್ತವ್ಯಲೋಪವೆಸಗಿದ್ದಾರೆ ಎಚ್ಚರಿಕೆ ನೀಡಿ ಎಂದು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ(Snehamayi Krishna) ದೂರು ನೀಡಿದ್ದಾರೆ.
ಎಸ್‌ಪಿ ಉದೇಶ್ ವಿರುದ್ಧ ಲಿಖಿತ ದೂರನ್ನು ಪೋಸ್ಟ್ ಮೂಲಕ ಸ್ನೇಹಮಯಿ ಕಳಿಸಿದ್ದು, ಮಹಜರಿನಲ್ಲಿ ಲೋಪ, ದಾಖಲೆ ಅವರ ಬಳಿಯೇ ಇಟ್ಟುಕೊಳ್ಳಬೇಕಿತ್ತು. ಆದರೆ ಅವರ ಬಳಿ ಇಟ್ಟುಕೊಳ್ಳದೇ ಕರ್ತವ್ಯಲೋಪವೆಸಗಿದ್ದಾರೆ. ದಾಖಲೆ ಪತ್ರಕ್ಕೆ ವೈಟ್ನರ್ ಹಾಕಿದ ಸಂಬಂಧ ವಿಚಾರಣೆ ನಡೆಸಿಲ್ಲ. ಲೈಟ್ ಬಿಟ್ಟವರನ್ನು ವಿಚಾರಣೆ ಮಾಡಿಲ್ಲ, ಈ ಬಗ್ಗೆ ತನಿಖೆ ನಡೆಸಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ: 2 ಗಂಟೆ ವಿಚಾರಣೆ ಎದುರಿಸಿದ ಸಿದ್ದರಾಮಯ್ಯ, ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಹಾಲಿ ಸಿಎಂ ವಿಚಾರಣೆ
ಎ1 ಆರೋಪಿಯನ್ನು ಮೊದಲು ವಿಚಾರಣೆ ನಡೆಸಬೇಕಿತ್ತು. ಆದರೆ A2, A3 A4 ಆರೋಪಿಗಳನ್ನ ಮೊದಲು ವಿಚಾರಣೆ ಮಾಡಿದ್ದಾರೆ. ಸಿಬಿಐಗೆ ವಹಿಸುವಂತೆ ನಾನು ಹಾಕಿದ ಅರ್ಜಿ ಕೋರ್ಟ್ನಲ್ಲಿ ಬರುತ್ತಿದ್ದಂತೆ ವಿಚಾರಣೆಗೆ ಕರೆದಿದ್ದಾರೆ. ಅವರ ಅಣತಿಯಂತೆ ಸಿಎಂ ಸಿದ್ದರಾಮಯ್ಯನವರೇ 10 ಗಂಟೆಯಿಂದ 12 ಗಂಟೆಯವರೆರೆ ವಿಚಾರಣೆಗೆ ಹಾಜರಾಗುತ್ತೇನೆಂದು ಸಮಯ ನಿಗದಿ ಪಡಿಸಿ ವಿಚಾರಣೆಗೆ ಬಂದಿದ್ದಾರೆ. ಅದೇ ರೀತಿ 10 ರಿಂದ 12 ಗಂಟೆಯವರೆಗೆ ವಿಚಾರಣೆ ನಡೆಸಿ ಮುಗಿಸಿದ್ದಾರೆ.
ಇದನ್ನೂ ಓದಿ: ಮತ್ತೆ ವಿಚಾರಣೆಗೆ ಕರೆದಿಲ್ಲ, ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ
1ನೇ ಆರೋಪಿಯನ್ನ ವಿಚಾರಣೆಗೆ ಒಳಪಡಿಸಿಸಬೇಕಾದ ಅಂಶಗಳ ಬಗ್ಗೆ ತಿಳಿಸಿರುತ್ತೇನೆ. ಆದರೆ ಕೇವಲ 1 ಗಂಟೆ 45 ನಿಮಿಷದಲ್ಲಿ ವಿಚಾರಣೆ ಮುಗಿಸಿದ್ದಾರೆ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಸರ್ವೆ ನಂಬರ್ 464ರ ಫೋಟೋ, ವಿಡಿಯೋಗಳನ್ನ ಪಡೆದುಕೊಳ್ಳಲು ಮನವಿ ಮಾಡಿದೆ. ಆದರೆ ಅದನ್ನ ಮಾಡಿಲ್ಲ. ಈ ಎಲ್ಲಾ ಅಂಶಗಳನ್ನ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಉಲ್ಲೇಖಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.