AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಚಲೋ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಪಾದಯಾತ್ರೆಗೆ ಮುಂದಾದ ಬಿಜೆಪಿ

ಇತ್ತೀಚೆಗೆ ‘ಬಳ್ಳಾರಿ ಚಲೋ’ ಪಾದಯಾತ್ರೆ ಮಾಡಿದ್ದ ಬಿಜೆಪಿ ಇದೀಗ ಮತ್ತೆ ಪಾದಯಾತ್ರೆಗೆ ಮುಂದಾಗಿದೆ. ಸೆಪ್ಟೆಂಬರ್​ 15ರಿಂದ ಐದು ದಿನಗಳ ಕಾಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ. ಹಾಗಾದರೆ ಬಿಜೆಪಿ ಏಕಾಏಕಿ ಮತ್ತೆ ಪಾದಯಾತ್ರೆಗೆ ಮುಂದಾಗಿರುವುದು ಏಕೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಳ್ಳಾರಿ ಚಲೋ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಪಾದಯಾತ್ರೆಗೆ ಮುಂದಾದ ಬಿಜೆಪಿ
ಪಾದಯಾತ್ರೆImage Credit source: tv9 kannada
ಕಿರಣ್​ ಹನಿಯಡ್ಕ
| Edited By: |

Updated on: Sep 12, 2026 | 3:13 PM

Share

ಬೆಂಗಳೂರು, ಸೆಪ್ಟೆಂಬರ್​ 12: ರಾಜ್ಯ ರಾಜಕಾರಣದಲ್ಲಿ ಸದ್ಯ ವಂದೇಮಾತರಂ ವಿವಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಕದನಕ್ಕೆ ಕಾರಣ ಆಗಿದೆ. ವಂದೇ ಮಾತರಂ ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಿದರೆ ಸಾಕು ಅಂತಾ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರದ ಈ ನಿರ್ಧಾರ ವಿರೋಧಿಸಿ ಸೆಪ್ಟೆಂಬರ್​​ 15ರಿಂದ ಐದು ದಿನಗಳ ಕಾಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗಿದೆ.

ಸೆಪ್ಟೆಂಬರ್ 15ರಿಂದ 5 ದಿನಗಳ ಕಾಲ ರಾಜ್ಯಾದ್ಯಂತ ಪಾದಯಾತ್ರೆ

ಸರ್ಕಾರದ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅರ್ಧ ಕಿ.ಮೀನಿಂದ ಒಂದು ಕಿ.ಮೀವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಲಾಗುತ್ತದೆ. ಈ ಮೂಲಕ ಸಚಿವ ಸಂಪುಟದ ಆದೇಶವನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ತೀವ್ರ ಒತ್ತಡ ಹೇರಲು ಮುಂದಾಗಿದೆ.

LIVE TV

ಡಿಕೆ ಶಿವಕುಮಾರ್​​ ವಿರುದ್ಧ ವಿಜಯೇಂದ್ರ ಕಿಡಿ

ಇನ್ನು ರಾಜ್ಯದಲ್ಲಿ ವಂದೇ ಮಾತರಂ ಎರಡು ಚರಣ ಮಾತ್ರ ಹಾಡುವ ಸಂಪುಟ ನಿರ್ಧಾರ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದು, ‘ವಂದೇ ಮಾತರಂ ಕೇವಲ ಹಾಡು ಅಲ್ಲ. ಸಿಎಂ ಡಿಕೆ ಶಿವಕುಮಾರ್ ಎರಡೇ ಚರಣ ಹಾಡಬೇಕು ಎಂದು ತೀರ್ಮಾನಿಸಿರುವುದು ದುರ್ದೈವ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ವಂದೇ ಮಾತರಂ’ ಗೀತೆ ಬಗ್ಗೆ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಿಎಂ, ಕೆಪಿಸಿಸಿ ಅಧ್ಯಕ್ಷ

ಅಲ್ಪಸಂಖ್ಯಾತರ ಓಲೈಕೆಗೆ ಈ ತೀರ್ಮಾನ ಎಂದ ವಿಜಯೇಂದ್ರ

‘ಅಲ್ಪಸಂಖ್ಯಾತರ ಓಲೈಕೆಗೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಸೆ. 15 ರಿಂದ ಐದು ದಿನಗಳ ಕಾಲ 224 ಕ್ಷೇತ್ರಗಳಲ್ಲಿ ಪಾದಯಾತ್ರೆ ಮೂಲಕ ತಹಶಿಲ್ದಾರ್ ಮತ್ತು ಡಿಸಿಗಳನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹ ಮಾಡಲಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಈ ನಿರ್ಧಾರ ಮಾಡಿದ್ದಾರೆ. ಡಿಕೆ ಶಿವಕುಮಾರ್ ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಅವರಿಂದ ಪಾಠ ಕಲಿಯಬೇಕು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ