AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಶಾಲಾ ಪ್ರವಾಸದ ಸಂದರ್ಭದಲ್ಲಿ ಮುರುಡೇಶ್ವರ ಕಡಲತೀರದಲ್ಲಿ ನಡೆದ ದುರ್ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ಇದರಿಂದಾಗಿ ಜಿಲ್ಲಾಡಳಿತ ತಾತ್ಕಾಲಿಕವಾಗಿ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ ಕಡಲತೀರಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನು ನಾಳೆ ಕೋಲಾರದಲ್ಲಿ ಜಿಲ್ಲಾಡಳಿತದಿಂದ ವಿದ್ಯಾರ್ಥಿನಿಯರಿಗೆ ಅಂತಿಮ ನಮನ ಸಲ್ಲಿಸಲಾಗುತ್ತಿದೆ.

ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ನಾಲ್ವರು ವಿದ್ಯಾರ್ಥಿಗಳ ಸಾವು ಬೆನ್ನಲ್ಲೇ ಮುರ್ಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 11, 2024 | 7:23 PM

Share

ಕಾರವಾರ, ಡಿಸೆಂಬರ್​ 11: ಶಾಲಾ ಮಕ್ಕಳು ಪ್ರವಾಸಕ್ಕೆಂದು ಮುರುಡೇಶ್ವರ ಕಡಲ ತೀರಕ್ಕೆ ಹೋಗಿದ್ದರು. ನೋಡ ನೋಡುತ್ತಿದ್ದಂತೆ, ಅಲೆಗಳ ಅಬ್ಬರಕ್ಕೆ ಕೊಚ್ಚಿಕೊಂಡು ಹೋದ ಏಳು ಜನರ ಪೈಕಿ ನಾಲ್ವರು ವಿದ್ಯಾರ್ಥಿನಿಯರು (Students) ನೀರು ಪಾಲಾಗಿದ್ದರು. ನಿನ್ನೆ ಒಬ್ಬ ಮತ್ತು ಇಂದು ಮೂವರ ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆ ಆಗಿವೆ. ಸದ್ಯ ಈ ಪ್ರಕರಣದಿಂದಾಗಿ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ 

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಮುಂದಿನ ಆದೇಶದವರೆಗೂ ಕಡಲತೀರಕ್ಕೆ ನಿರ್ಬಂಧ ವಿಧಿಸಿ, ಈ ಕುರಿತು ಎಸ್​ಪಿ ಎಂ.ನಾರಾಯಣ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಪ್ರವಾಸ ತೆರಳಿದ್ದ ವಿದ್ಯಾರ್ಥಿನಿಯರು ಸಮುದ್ರ ಪಾಲು ಕೇಸ್​: ಮೂವರ ಮೃತದೇಹ ಪತ್ತೆ, ಸಿದ್ದರಾಮಯ್ಯ ಸಂತಾಪ

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತೂರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ನಿನ್ನೆ ಸಂಜೆ ಸುಮಾರು 54 ವಿದ್ಯಾರ್ಥಿನಿಯರು ಮುರುಡೇಶ್ವರ ಕಡಲ ತೀರದಲ್ಲಿ ಆಟವಾಡಲು ಇಳಿದಿದ್ದರು. ಶಿಕ್ಷಕರು ಮುನ್ನೆಚ್ಚರಿಕೆ ವಹಿಸದೆ ಸಮುದ್ರದಲ್ಲಿ ಮಕ್ಕಳನ್ನು ಆಟವಾಡಲು ಬಿಟ್ಟಿದ್ದರು. ಇದರಿಂದಾಗಿ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರು ಪಾಲಾಗಿದ್ದರು.

ತಕ್ಷಣೇ ಸ್ಥಳದಲ್ಲಿದ್ದ ಸ್ಥಳೀಯರು ಯಾವುದೇ ಲೈಫ್‌ಗಾರ್ಡ್‌ ಮತ್ತು ಪರಿಕರಗಳು ಇಲ್ಲದೇ ಮೂವರು ವಿದ್ಯಾರ್ಥಿನಿಯರು ಮತ್ತು ಓರ್ವ ಶಿಕ್ಷಕನ ರಕ್ಷಿಸಿದ್ದಾರೆ. ಆದರೆ ಇನ್ನುಳಿದ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ.

ಕೋಲಾರದ ಜಿಲ್ಲಾಡಳಿತದಿಂದ ವಿದ್ಯಾರ್ಥಿನಿಯರಿಗೆ ಅಂತಿಮ ನಮನ

ಇನ್ನು ಮೃತ ವಿದ್ಯಾರ್ಥಿನಿಯರಿಗೆ ನಾಳೆ ಕೋಲಾರ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ ಸಲ್ಲಿಸಲಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಅಕ್ರಂ ಪಾಷಾ ಟಿವಿ9 ಗೆ ಮಾಹಿತಿ ನೀಡಿದ್ದು, ನಾಳೆ ಬೆಳಗ್ಗೆ 8 ಗಂಟೆಗೆ ಕೋಲಾರದ ಜಿಲ್ಲಾಡಳಿತ ಭವನದ ಬಳಿ ವ್ಯವಸ್ಥೆ ಮಾಡಲಾಗಿದೆ. ನೀರು ಪಾಲಾದ ನಾಲ್ಕು ವಿದ್ಯಾರ್ಥಿನಿಯರಿಗೆ ಜಿಲ್ಲಾಡಳಿತ ವತಿಯಿಂದ ಗೌರವ ಸಮರ್ಪಣೆ ಸಲ್ಲಿಸಲಾಗುವುದು.

ಇದನ್ನೂ ಓದಿ: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಮೃತರಾದ ಶ್ರಾವಂತಿ, ದೀಕ್ಷಾ, ಲಾವಣ್ಯ ಮತ್ತು ವಂದನ ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು. ಜಿಲ್ಲಾಡಳಿತದಿಂದ ಅಂತಿಮ‌ ನಮನದ ನಂತರ ಮೃತ ದೇಹಗಳು ತಮ್ಮ ಗ್ರಾಮಗಳಿಗೆ ತೆರಳಲಿವೆ. ಶಾಸಕರು ಸೇರಿದಂತೆ ಪೋಷಕರು ಭಾಗಿ ಆಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:21 pm, Wed, 11 December 24