ಥಿಯೇಟರ್, ಜಿಮ್ ಬಳಿಕ ಈಗ ಸ್ವಿಮ್ಮಿಂಗ್ ಪೂಲ್ ಸರದಿ; ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ ಎಂದ ಡಾ.ಕೆ. ಗೋವಿಂದರಾಜು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.
ಬೆಂಗಳೂರು: ಥಿಯೇಟರ್ ಆಯ್ತು, ಜಿಮ್ ಆಯ್ತು ಈಗ ಸ್ವಿಮ್ಮಿಂಗ್ ಪೂಲ್ ಸರದಿ. ಕೊರನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ಸಿನಿಮಾ ಹಾಲ್ಗಳಲ್ಲಿ ಶೇ. 50ರಷ್ಟು ಸೀಟು ಭರ್ತಿ ಮಾಡುವ ಅವಕಾಶ ಮಾತ್ರ ನೀಡಲಾಗಿತ್ತು. ಜೊತೆಗೆ, ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್ಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಸಿನಿರಂಗದ ಒತ್ತಡದಿಂದ ರಾಜ್ಯ ಸರ್ಕಾರ ಏಪ್ರಿಲ್ 7ರ ವರೆಗೆ ಥಿಯೇಟರ್ ಭರ್ತಿಗೆ ಅವಕಾಶ ನೀಡಿತು. ಇಂದು ಜಿಮ್ಗಳಲ್ಲೂ ಶೇ. 50ರಷ್ಟು ಅವಕಾಶ ನೀಡಲಾಯಿತು. ಈ ಬೆನ್ನಲ್ಲೇ ಸ್ವಿಮ್ಮಿಂಗ್ ಪೂಲ್ಗಳಿಗೂ ನಿಯಮ ಸಡಿಲಿಕೆ ಮಾಡುವಂತೆ ಕೂಗು ಕೇಳಿಬಂದಿದೆ.
ಕ್ರೀಡಾಪಟುಗಳ ದೃಷ್ಟಿಯಿಂದ ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ. ಹಲವು ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳಿಂದ ತಯಾರಿ ನಡೆಯುತ್ತಿದೆ. ಕ್ರೀಡಾಪಟುಗಳ ಕುರಿತು ಸರ್ಕಾರ ಮರುಚಿಂತಿಸಬೇಕು ಎಂದು ಕಾಂಗ್ರೆಸ್ ಪರಿಷತ್ ಸದಸ್ಯ ಹಾಗೂ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಕೆ. ಗೋವಿಂದರಾಜು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.
ಜಿಲ್ಲೆಗಳಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಹೆಚ್ಚಿಸುವಂತೆ ಆದೇಶ ಈ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಗಳಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಜಿಲ್ಲೆಗಳಲ್ಲಿ 1 ಲಕ್ಷ ಟೆಸ್ಟ್ ಮಾಡುವಂತೆ ಸರ್ಕಾರ ಗುರಿ ನೀಡಿತ್ತು. ಆದರೂ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲೆಗಳಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಹೆಚ್ಚಿಸಲು ಇಲಾಖೆ ಆದೇಶ ನೀಡಿದೆ.
ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ
ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ
Published On - 10:50 pm, Sun, 4 April 21